ಉಡುಪಿ: ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 19 ವರ್ಷದ ಯುವಕನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಬ್ರಹ್ಮಾವರದ ಸ್ವರ್ಣ ರೆಸಿಡೆನ್ಸಿ, ಆಕಾಶವಾಣಿ ಸಮೀಪದ ನಿವಾಸಿ ಹಾಗೂ ಶಿರೂರಿನ ಜೆ.ಎಂ. ಕ್ರಾಸ್ ರಸ್ತೆ, ಮುಸ್ಲಿಂ ಮೊಹಲ್ಲಾ ಮೂಲದ ಸೈಯ್ಯದ್ ಮೊಹಮ್ಮದ್ ಮೆಹರಾಜ್ (19) ಎಂದು ಗುರುತಿಸಲಾಗಿದೆ.
ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಮಲ್ಪೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರಾಮಚಂದ್ರ ನಾಯಕ್ ನೇತೃತ್ವದ ಪೊಲೀಸ್ ತಂಡ ಮಲ್ಪೆಯ ಸಾರ್ವಜನಿಕ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ ವೇಳೆ ಆರೋಪಿ ಎಂಡಿಎಂಎ ಹೊಂದಿರುವುದು ಪತ್ತೆಯಾಗಿದೆ. ಆತ ಕಾಪು, ಬ್ರಹ್ಮಾವರ, ಉಡುಪಿ ಹಾಗೂ ಮಣಿಪಾಲ ಭಾಗಗಳ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡುತ್ತಿದ್ದನೆಂಬ ಆರೋಪವಿದೆ.
ಆರೋಪಿಯಿಂದ 1.03 ಗ್ರಾಂ ಎಂಡಿಎಂಎ, ಮಾದಕ ವಸ್ತು ಸಾಗಾಟಕ್ಕೆ ಬಳಸಲಾಗುತ್ತಿದ್ದ ಒಂದು ಸ್ಕೂಟರ್ ಸೇರಿದಂತೆ ಒಟ್ಟು ₹1.52 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 68/2026 ದಾಖಲಿಸಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆ, 1985ರ ಕಲಂ 8(c) ಮತ್ತು 22(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…