Featured

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – 1,52,000 ಮೌಲ್ಯದ ಸೊತ್ತು ವಶ

ಉಡುಪಿ: ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 19 ವರ್ಷದ ಯುವಕನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬ್ರಹ್ಮಾವರದ ಸ್ವರ್ಣ ರೆಸಿಡೆನ್ಸಿ, ಆಕಾಶವಾಣಿ ಸಮೀಪದ ನಿವಾಸಿ ಹಾಗೂ ಶಿರೂರಿನ ಜೆ.ಎಂ. ಕ್ರಾಸ್ ರಸ್ತೆ, ಮುಸ್ಲಿಂ ಮೊಹಲ್ಲಾ ಮೂಲದ ಸೈಯ್ಯದ್ ಮೊಹಮ್ಮದ್ ಮೆಹರಾಜ್ (19) ಎಂದು ಗುರುತಿಸಲಾಗಿದೆ.

ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಮಲ್ಪೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರಾಮಚಂದ್ರ ನಾಯಕ್ ನೇತೃತ್ವದ ಪೊಲೀಸ್ ತಂಡ ಮಲ್ಪೆಯ ಸಾರ್ವಜನಿಕ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ ವೇಳೆ ಆರೋಪಿ ಎಂಡಿಎಂಎ ಹೊಂದಿರುವುದು ಪತ್ತೆಯಾಗಿದೆ. ಆತ ಕಾಪು, ಬ್ರಹ್ಮಾವರ, ಉಡುಪಿ ಹಾಗೂ ಮಣಿಪಾಲ ಭಾಗಗಳ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡುತ್ತಿದ್ದನೆಂಬ ಆರೋಪವಿದೆ.

ಆರೋಪಿಯಿಂದ 1.03 ಗ್ರಾಂ ಎಂಡಿಎಂಎ, ಮಾದಕ ವಸ್ತು ಸಾಗಾಟಕ್ಕೆ ಬಳಸಲಾಗುತ್ತಿದ್ದ ಒಂದು ಸ್ಕೂಟರ್ ಸೇರಿದಂತೆ ಒಟ್ಟು ₹1.52 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 68/2026 ದಾಖಲಿಸಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆ, 1985ರ ಕಲಂ 8(c) ಮತ್ತು 22(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Vishwa News 24

Recent Posts

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

8 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

8 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

8 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

9 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

10 hours ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

11 hours ago