Featured

ಉಡುಪಿ : ವಿದ್ಯಾರ್ಥಿಗಳ ಪ್ರಯಾಣಕ್ಕೆ ಅನುಕೂಲವಾಗುವಂತೆ ಬಸ್‌ ಸಂಪರ್ಕ ಕಲ್ಪಿಸಿ : ಶಾಸಕ ಯಶಪಾಲ್ ಸುವರ್ಣ – Vishwanews24

ವಿದ್ಯಾರ್ಥಿಗಳ ಪ್ರಯಾಣಕ್ಕೆ ಅನುಕೂಲವಾಗುವಂತೆ ಬಸ್‌ ಸಂಪರ್ಕ ಕಲ್ಪಿಸಿ : ಶಾಸಕ ಯಶಪಾಲ್ ಎ. ಸುವರ್ಣ

ಉಡುಪಿ: ಮುಂಗಾರು ಪ್ರವೇಶ ಹಾಗೂ 2023-24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು, ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳಿಗೆ ತೆರೆಯಲು ಸೂಕ್ತ ಸಾರಿಗೆ ವ್ಯವಸ್ಥೆ ದೃಷ್ಟಿಯಿಂದ ಸ್ಥಗಿತಗೊಂಡಿರುವ ಮಾರ್ಗಗಳಲ್ಲಿ ಕೆಎಸ್ಆರ್ಟಿಸಿ ನರ್ಮ್ ಬಸ್ಗಳನ್ನು ಓಡಿಸಬೇಕು. ನಗರಸಭೆಯ 35 ವಾರ್ಡ್ಗಳಲ್ಲಿ ಬಸ್ಸುಗಳ ಅಗತ್ಯವಿರುವ ಮಾರ್ಗಗಳನ್ನು ಪಟ್ಟಿ ಮಾಡಿ ಹೆಚ್ಚುವರಿ ಬಸ್ ಸಂಚಾರ ಕಲ್ಪಿಸುವಂತೆ ಶಾಸಕ ಯಶಪಾಲ್ ಎ. ಸುವರ್ಣ ಸೂಚಿಸಿದ್ದಾರೆ.

ಅವರು ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಂಗಣದಲ್ಲಿ ಮಳೆಗಾಲದ ಪೂರ್ವ ಸಿದ್ಧತೆ ಹಾಗೂ ವಿವಿಧ ಇಲಾಖೆಯ ಅಕಾರಿಗಳೊಂದಿಗೆ ಸೋಮವಾರ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಡುಪಿ ನಗರಕ್ಕೆ 2019-20 ನೇ ಸಾಲಿನಲ್ಲಿ 20 ನರ್ಮ್ ಬಸ್ಗಳ ಅನುಮತಿ ಸಿಕ್ಕಿ ಕಾರ್ಯಾಚರಣೆ ಮಾಡಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ 12 ಬಸ್ಗಳು ಕಾರ್ಯಾಚರಣೆ ಮಾಡುತ್ತಿದ್ದವು. 2022-23 ನೇ ಸಾಲಿನಲ್ಲಿ 17 ಬಸ್ಗಳು ಕಾರ್ಯಾಚರಣೆ ಮಾಡುತ್ತಿದೆ ಎಂದು ಅಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಯಶಪಾಲ್ ಎ. ಸುವರ್ಣ, ಅಂಬಲಪಾಡಿಯಿಂದ ಮಲ್ಪೆ, ಮಣಿಪಾಲ ಪೆರಂಪಳ್ಳಿ ಟ್ರಿನಿಟಿಯಿಂದ ಹಾವಂಜೆ ಸಹಿತ ಕೆಲ ಮಾರ್ಗಗಳಲ್ಲಿ ನರ್ಮ್ ಬಸ್ ಓಡಿಸುವಂತೆ ಸಾರ್ವಜನಿಕರ ಬೇಡಿಕೆವ ಇದೆ. ಹೀಗಾಗಿ ಕೋವಿಡ್ ಪೂರ್ವದಲ್ಲಿದ್ದ 3 ಬಸ್ಗಳನ್ನು ಮರಳಿ ಉಡುಪಿಗೆ ತನ್ನಿ. ಹೆಚ್ಚುವರಿ ಬಸ್ಸುಗಳ ಬೇಡಿಕೆ ಇದ್ದರೆ ಪಟ್ಟಿ ಮಾಡಿ, ಉನ್ನತ ಅಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಮಳೆಗಾಲ ಆರಂಭವಾಗುವುದರಿಂದ ಬೀದಿ ನಾಯಿಗಳ ಕಾಟ ಜೋರಾಗುತ್ತದೆ. ಮಕ್ಕಳು ಸಹಿತ ಸಾರ್ವಜನಿಕರ ಮೇಲೆ ದಾಳಿ ನಡೆಸುವ ಮುನ್ನವೇ ಪಶು ಸಂಗೋಪನೆ, ನಗರಸಭೆ ಅಕಾರಿಗಳು ಎಚ್ಚೆತ್ತುಕೊಂಡು ಕ್ರಮ ತೆಗೆದುಕೊಳ್ಳಬೇಕು. ಗ್ರಾಮಾಂತರ ಪ್ರದೇಶ ಸಹಿತ ಯಾವ ಭಾಗದಲ್ಲೂ ಸಾರ್ವಜನಿಕರಿಗೆ ಬೀದಿನಾಯಿಗಳಿಂದ ತೊಂದರೆ ಆಗಬಾರದೆಂದು ಸೂಚಿಸಿದರು.

ನಗರಸಭೆಯ ಪರಿಸರ ಅಧಿಕಾರಿ ಮಾತನಾಡಿ, ಪಶು ಸಂಗೋಪನೆ ಇಲಾಖೆ ಜತೆ ಸೇರಿ ಕಳೆದೊಂದು ತಿಂಗಳ ಅವಧಿಯಲ್ಲಿ 256 ನಾಯಿಗಳನ್ನು ಸಂತಾನಹರಣ ಚಿಕಿತ್ಸೆಗೆ ಒಳಪಡಿಸಿ, ಸೂಕ್ತ ಆರೈಕೆ ಮಾಡಿದ್ದೇವೆ. 209 ನಾಯಿಗಳಿಗೆ ರೇಬಿಸ್ ಲಸಿಕೆ ಕೊಟ್ಟಿದ್ದೇವೆ ಎಂದರು.

ನಮ್ಮಲ್ಲಿ ಸೂಕ್ತ ಪಾಲನಾ ಕೇಂದ್ರಗಳು ಇಲ್ಲದೇ ಇರುವುದರಿಂದ ಮಳೆಗಾಲದಲ್ಲಿ ನಾಯಿಗಳನ್ನು ಚಿಕಿತ್ಸೆಗೆ ಒಳಪಡಿಸುವುದು ನಾಯಿಯ ಆರೋಗ್ಯದ ದೃಷ್ಟಿಯಿಂದ ಸೂಕ್ತವಲ್ಲ. ಸಂತಾನಹರಣ ಚಿಕಿತ್ಸೆ ನಡೆಸಿದ ಗಾಯ ಒಣಗುವುದಕ್ಕೆ 7-8 ದಿನಗಳು ಬೇಕಾಗುತ್ತದೆ. ಮಳೆ ನೀರು ತಾಗಿ ಗಾಯ ದೊಡ್ಡಾಗುತ್ತದೆ ಎಂದು ವೈದ್ಯಾಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಅಪಾಯಕಾರಿ ಮರ ತೆರವುಗೊಳಿಸಿ ಮೆಸ್ಕಾಂ, ಅರಣ್ಯ, ಅಗ್ನಿಶಾಮಕ ಇಲಾಖೆ ಪರಸ್ಪರ ಸಮನ್ವಯದೊಂದಿಗೆ ಮುಂಗಾರು ಎದುರಿಸುವುದಕ್ಕೆ ಸಜ್ಜಾಗಬೇಕು. ಮಳೆಗಾಲ ಆರಂಭಕ್ಕೂ ಮುನ್ನವೇ ಅಪಾಯಕಾರಿ ಮರಗಳ ರೆಂಬೆ ತೆರವುಗೊಳಿಸಿ. ಮಳೆ ಹೆಚ್ಚಾಗಿ ಪ್ರವಾಹದಲ್ಲಿ ಸಿಲುಕಿರುವ ಸಾರ್ವಜನಿಕರ ರಕ್ಷಣೆಗೆ ಸೂಕ್ತ ಬೋಟ್ಗಳನ್ನು ಇಟ್ಟುಕೊಳ್ಳಿ. ಸಾರ್ವಜನಿಕರ ಫೋನ್ ಕರೆಗೆ ಸ್ಪಂದಿಸಿ ಜೀವ ರಕ್ಷಣೆಗೆ ಆದ್ಯತೆ ನೀಡಿ ಎಂದು ಅಕಾರಿಗಳಿಗೆ ಶಾಸಕ ಯಶಪಾಲ್ ತಿಳಿಸಿದರು.

ಅಗ್ನಿಶಾಮಕ ದಳದ ಜಿಲ್ಲಾ ಅಧಿಕಾರಿ ವಸಂತ ಕುಮಾರ್ ಎಚ್.ಎಂ. ಮಾತನಾಡಿ, ಉಡುಪಿ ನಗರದಲ್ಲಿ 3 ಬೋಟ್, ಜಿಲ್ಲೆಯಲ್ಲಿ 7 ಬೋಟ್ಗಳನ್ನು ಪ್ರವಾಹದಲ್ಲಿ ಸಿಲುಕಿರುವ ಸಾರ್ವಜನಿಕರ ರಕ್ಷಣೆಗೆ ಸಜ್ಜಾಗಿ ಇಟ್ಟುಕೊಂಡಿದ್ದೇವೆ. ರಸ್ತೆಗೆ ಬಿದ್ದ ಮರಗಳನ್ನು ಸಕಾಲದಲ್ಲಿ ತೆರವುಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡಿಕೊಡುತ್ತೇವೆ. ವಿಕೋಪ ಎದುರಿಸುವುದಕ್ಕೆ ಸಿಬ್ಬಂದಿಗಳನ್ನು ಸಜ್ಜಾಗಿ ಇರುವುದಕ್ಕೆ ಸೂಚಿಸಿದ್ದೇವೆ ಎಂದರು.

ಶಾಸಕ ಯಶಪಾಲ್ ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು.

ಪೌರಾಯುಕ್ತ ರಮೇಶ್ ಪಿ. ನಾಯ್ಕ, ನಗರಸಭೆ ನಿಕಟಪೂರ್ವ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ, ಶ್ರೀಶ ಕೊಡವೂರು ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago