Featured

ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ – vishwanews24

ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ

ಉಡುಪಿ: ಇತ್ತೀಚೆಗೆ ನ್ಯಾಯಯುತವಾದ ಹೋರಾಟಕ್ಕಿಳಿದ ವಿದ್ಯಾರ್ಥಿಗಳ ಮೇಲೆ ದೆಹಲಿಯಲ್ಲಿ ನಡೆದ ಕ್ರೌರ್ಯವನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಶ್ರೀ ಅಶ್ವಿನ್ ಕೋಟ್ಯಾನ್ ತೀವ್ರವಾಗಿ ಖಂಡಿಸಿದ್ದಾರೆ.

ನೀಟ್ ಪರೀಕ್ಷೆಯು ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ರೂಪಿಸುವ ಹಂತ. ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸುತ್ತಾರೆ. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಂರಕ್ಷಣೆ ಸರಕಾರದ ಜವಾಬ್ದಾರಿಯಾಗಿದ್ದು ಈ ಗೌಪ್ಯತೆಯನ್ನು ಕಾಪಾಡುವ ವಿಷಯದಲ್ಲಿ ಸರಕಾರವು ಸಂಪೂರ್ಣವಾಗಿ ವಿಫಲವಾಗಿದೆ. ಕೆಲವು ಪ್ರತಿಭಾವಂತ ವಿದ್ಯಾರ್ಥಿಗಳು ಇದರಿಂದ ನಿರಾಶೆಗೊಂಡು ನೊಂದುಆತ್ಮಹತ್ಯೆಗೆ ಶರಣಾಗಿದ್ದಾರೆ.

ಸರಕಾರದ ಈ ವರ್ತನೆಯನ್ನು ಖಂಡಿಸಿ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಯುವಜನರ ಸಂವಿಧಾನಾತ್ಮಕ ಹಕ್ಕನ್ನು ಸರಕಾರವು ಹತ್ತಿಕ್ಕಲು ಪ್ರಯತ್ನಿಸಿರುವುದು ದುರಂತದ ವಿಚಾರ. ಈ ವಿಷಯದಲ್ಲಿ ಜವಾಬ್ದಾರಿ ಸ್ಥಾನದಲ್ಲಿರುವ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂದು ಅವರು ಆಗ್ರಹಿಸಿರುತ್ತಾರೆ. ಕೇಂದ್ರ ಸರಕಾರದ ಈ ಬೇಜವಾಬ್ದಾರಿತನವು ಹೀಗೆ ಮುಂದುವರಿದಲ್ಲಿ ಇದರ ವಿರುದ್ಧ ಯುವಕರು ಸಂಘಟಿತರಾಗಿ ದೇಶದಾದ್ಯಂತ ಪ್ರತಿಭಟಿಸಬೇಕಾಗುತ್ತದೆ. ಸರಕಾರವು ಯುವಜನರ ನ್ಯಾಯಯುತ ಬೇಡಿಕೆಯನ್ನು ಈಡೇರಿಸಬೇಕೆಂದು ಅವರು ಒತ್ತಾಯಿಸಿರುತ್ತಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago