Featured

ಉಡುಪಿ : ವಿದ್ಯಾರ್ಥಿಗಳ ವಿವಿಧ ಸಮಸ್ಯೆಗಳಿಗೆ ಶೀಘ್ರ ಪರಹರಿಸುವಂತೆ ಎಸ್ ಐ ಓ ಆಗ್ರಹ -Vishwanews24

ಉಡುಪಿ : ವಿದ್ಯಾರ್ಥಿಗಳ ವಿವಿಧ ಸಮಸ್ಯೆಗಳಿಗೆ ಶೀಘ್ರ ಪರಹರಿಸುವಂತೆ ಎಸ್ ಐ ಓ ಆಗ್ರಹ -Vishwanews24

ಉಡುಪಿ:2021 ರ ಎರಡನೇ ಕೋವಿಡ್ ಅಲೆಯು ದೇಶಾಧ್ಯಂತ ಬಹಳಷ್ಟು ಸಮಸ್ಯೆಗಳನ್ನು ಸೃಷ್ಟಿಸಿದೆ. ದೇಶದ ವಿವಧ ಸ್ಥರದ ನಾಗರೀಕರು ವಿವಿಧ ರೀತಿಯಲ್ಲಿ ಸಮಸ್ಯೆಗೀಡಾಗಿದ್ದಾರೆ. ಅದರಲ್ಲೂ ಮುಖ್ಯವಾಗಿ ಶೈಕ್ಷಣಿಕ ಕ್ಷೇತ್ರಕ್ಕೆ ಬಹಳಷ್ಟು ಹೊಡೆತ ಬಿದ್ದಿದೆ. ವಿದ್ಯಾರ್ಥಿಗಳು ಶಿಕ್ಷಕರು, ಸರಕಾರದ ಅವೈಜ್ಞಾನಿಕ ನೀತಿಯಿಂದಾಗಿ ಸಮಸ್ಯೆ ಎದುರಿಸುತ್ತಿದ್ದಾರೆ. ಉಡುಪಿ ಜಿಲ್ಲೆಯಲ್ಲೂ ಈ ಸಮಸ್ಯೆಯನ್ನು ನಾವು ಕಾಣಬಹುದಾಗಿದೆ. ಸರಕಾರ ಮತ್ತು ಖಾಸಗಿ ಶಾಲಾ ಆಡಳಿತ ಮಂಡಳಿಯ ನಡುವಿನ ಸಮನ್ವಯದ ಕೊರತೆಯಿಂದಾಗಿ ಶಾಲಾ ಶಿಕ್ಷಕರು ಸೂಕ್ತ ಸಮಯಕ್ಕೆ ಸಂಬಳ ಸಿಗದೆ ಕಂಗಾಲಾಗಿದ್ದಾರೆ. ವಿದ್ಯಾರ್ಥಿಗಳು ಶೈಕ್ಷಣಿಕ ಪಠ್ಯ ಕ್ರಮದಿಂದಲೂ ವಂಚಿತರಾಗುತ್ತಿದ್ದಾರೆ. ಸರಕಾರ ಆನ್ ಲೈನ್ ಶಿಕ್ಷಣವನ್ನು ಆರಂಭಿಸಿದರು ಸೂಕ್ತ ವ್ಯವಸ್ಥೆಯಿಲ್ಲದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.

ಮಕ್ಕಳು ಶೈಕ್ಷಣಿಕ ಚಟುವಟಿಕೆಗಳನ್ನು ತೊರೆದು ಬಾಲ ಕಾರ್ಮಿಕದಂತಹ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಇನ್ನೂ ಮನೆಯಲ್ಲಿ ಇರುವ ವಿದ್ಯಾರ್ಥಿಗಳು ಬಹಳಷ್ಟು ಮಾನಸಿಕ ಒತ್ತಡಕ್ಕೂ ತುತ್ತಾಗುತ್ತಿದ್ದಾರೆ. ಇಂತಹ ಸಂಧಿಗ್ದ ಪರಿಸ್ಥಿತಿಯಲ್ಲಿ ಸರಕಾರ ಮಧ್ಯ ಪ್ರವೇಶಿಸಿ ಈ ಕೆಳಗಿನ ಬೇಡಿಕೆಗಳನ್ನು ಪೂರೈಸ ಬೇಕೆಂದು ಎಸ್ ಐ ಓ ಉಡುಪಿ ಜಿಲ್ಲಾ ವತಿಯಿಂದ ಆಗ್ರಹಿಸುತ್ತಿದ್ದೇವೆ.

ಬೇಡಿಕೆಗಳು :-

1. ಖಾಸಗೀ ಶಾಲೆಗಳು ಶಿಕ್ಷಕರಿಗೆ ಸಂಬಳ ಕೊಡದೆಯಿರುವ ಈ ಸಂದರ್ಭದಲ್ಲಿ ಸರಕಾರ ಸೂಕ್ತ ಪರಿಹಾರವನ್ನು ಪ್ರತಿ ತಿಂಗಳು ನೀಡಬೇಕು.

2. ಕೆಲವು ಖಾಸಗಿ ಶಾಲೆಗಳು ಕೋವಿಡ್ ನಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಕೆಲಸದಿಂದ ವಜಾ ಗೊಳಿಸುವಂತಹ ಅಮಾನವೀಯ ಕೆಲಸಗಳನ್ನು ಮಾಡುತ್ತಿದ್ದು ಸರಕಾರ ಮಧ್ಯ ಪ್ರವೇಶಿಸಿ ಇದನ್ನು ಕೂಡಲೇ ನಿಲ್ಲಿಸಬೇಕು.

3. ಸರಕಾರ ಆನ್ ಲೈನ್ ಶಿಕ್ಷಣ ಆರಂಭಿಸುವ ಮುನ್ನ ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣಕ್ಕೆ ಬೇಕಾಗಿರುವ ಮೊಬೈಲ್ ಮತ್ತು ನೆಟ್ ವರ್ಕ ವ್ಯವಸ್ಥೆಯನ್ನು ಕಲ್ಪಿಸಬೇಕು.

4. ಸರಕಾರ ಶಾಲಾ ಮಕ್ಕಳಿಗೆ ಒದಗಿಸುವ ಪಠ್ಯ ಪುಸ್ತಗಳನ್ನು ಸೂಕ್ತ ಸಮಯಕ್ಕೆ ಒದಗಿಸಬೇಕು.

5. ಕೋವಿಡ್ ಸಂದರ್ಭದಲ್ಲಿ ಹಲವು ಮಕ್ಕಳು, ಮುಖ್ಯವಾಗಿ ವಲಸೆ ಕಾರ್ಮಿಕರ ಮಕ್ಕಳು ಶಿಕ್ಷಣ ವಂಚಿತರಾಗುತ್ತಿರುವುದು ಮೋಲ್ನೋಟಕ್ಕೆ ಕಂಡುಬರುತ್ತಿದೆ. ಸರಕಾರ ಈ ಬಗ್ಗೆ ಸರ್ವೆ ನಡೆಸಿ ಒಂದು ಮಗುವು ಕೂಡ ಶಿಕ್ಷಣ ವಂಚಿತರಾಗದಂದತೆ ಕ್ರಮ ವಹಿಸುವುದು.

ಈ ಮೇಲಿನ ಬೇಡಿಕೆಗಳನ್ನು ಶೀಘ್ರವೇ ಜಾರಿಗೊಳಿಸಬೇಕೆಂದು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ, ಉಡುಪಿ ಜಿಲ್ಲೆಯ ಆಗ್ರಹಿಸುತ್ತಿದೆ.

ಅರ್ಬಾಝ್ ಅಹಮದ್, ಜಿಲ್ಲಾಧ್ಯಕ್ಷರು, ಎಸ್ ಐ ಓ ಉಡುಪಿ ಜಿಲ್ಲೆ ಡಾ. ಫಹೀಮ್ ಹೂಡೆ, ಕ್ಯಾಂಪಸ್ ಕಾರ್ಯದರ್ಶಿ, ಉಡುಪಿ ಜಿಲ್ಲೆ.ಅಫ್ವಾನ್ ಬಿ ಹೂಡೆ, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿ, ಉಡುಪಿ ಜಿಲ್ಲೆ ಅಯಾನ್ ಮಲ್ಪೆ, ಸ್ಥಾನೀಯ ಅಧ್ಯಕ್ಷರು, ಎಸ್ ಐ ಓ ಮಲ್ಪೆ ಘಟಕವಸೀಮ್ ಗುಜ್ಜರಬೆಟ್ಟು, ಸ್ಥಾನೀಯ ಅಧ್ಯಕ್ಷರು, ಎಸ್ ಐ ಓ ಹೂಡೆ ಘಟಕ. ಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

12 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago