ಉಡುಪಿ : ವಿದ್ಯಾರ್ಥಿಯೋರ್ವನಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಉಡುಪಿಯ ಎಂಜಿಎಂ ಮೈದಾನದಲ್ಲಿ ನಡೆದಿದೆ.
ಬ್ರಹ್ಮಾವರದ ಹೇರೂರಿನ ಪ್ರತೀಕ್ (17) ಹಲ್ಲೆಗೊಳಗಾದ ವಿದ್ಯಾರ್ಥಿ. ಉಡುಪಿಯ ಕೋಚಿಂಗ್ ಸೆಂಟರ್‍ವೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಈತ ಎರಡು ತಿಂಗಳ ಹಿಂದೆ ಖರೀದಿಸಿದ್ದ ಸೆಕೆಂಡ್ ಹ್ಯಾಂಡ್ ಬೈಕ್ ಬಗ್ಗೆ ಅದೇ ಕೊಚಿಂಗ್ ಸೆಂಟರ್‍ನ ಪರಿಚಯದ ವಿದ್ಯಾರ್ಥಿ ಸುಹಾಸ್ ಎಂಬಾತ ಕದ್ದಿರುವ ಬೈಕ್ ಎಂದು ನಿಂದಿಸಿದ್ದ. ಅಲ್ಲದೆ ಪ್ರತೀಕ್ ಅವರು ನಿನ್ನೆ ಮಧ್ಯಾಹ್ನದ ವೇಳೆ ಎಂಜಿಎಂ ಮೈದಾನಕ್ಕೆ ಹೋದಾಗ ಸ್ಥಳದಲ್ಲಿ ಇದ್ದ ಆರೋಪಿಗಳಾದ ಸುಹಾಸ್, ಮೋನೀಶ್, ತರುಣ್ ಹಾಗೂ ಇತರ ಇಬ್ಬರು ಅಪರಿಚಿತ ವ್ಯಕ್ತಿಗಳು ಸೇರಿ ಅವಾಚ್ಯ ಶಬ್ಧಗಳಿಂದ ಬೈದು, ಹಲ್ಲೆ ಮಾಡಿದ್ದಾರೆ. ಹಾಗೂ ಆರೋಪಿ ತರುಣ್ ಎಂಬಾತ ಕೊಲೆ ಮಾಡುವ ಉದ್ದೇಶದಿಂದ ಚಾಕುವಿನಿಂದ ಪ್ರತೀಕ್ ಅವರ ಹೊಟ್ಟೆ ಹಾಗೂ ತೊಡೆಯ ಭಾಗಕ್ಕೆ ಇರಿದು ಜೀವ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಪ್ರತೀಕ್ ಅವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…