Featured

ಉಡುಪಿ : ವಿದ್ಯಾರ್ಥಿನಿಯರು ತರಗತಿಗೆ ಹಿಜಾಬ್‌ ಧರಿಸದೆ ಬರುತ್ತೇವೆ ಎಂಬ ನಿರ್ಧಾರ ಮಾಡಿದ್ದರೆ ಮಾತ್ರ ಕಾಲೇಜಿಗೆ ಬನ್ನಿ ಇಲ್ಲವಾದರೆ ನಾಳೆಯಿಂದ ದಯವಿಟ್ಟು ಬರಬೇಡಿ : ಶಾಸಕ ರಘುಪತಿ ಭಟ್ – Vishwanews24

ಉಡುಪಿ : ತರಗತಿಗೆ ಹಿಜಾಬ್‌ ಧರಿಸದೆ ಬರುತ್ತೇವೆ ಎಂಬ ನಿರ್ಧಾರ ಮಾಡಿದ್ದರೆ ಮಾತ್ರ ಕಾಲೇಜಿಗೆ ಬನ್ನಿ ಇಲ್ಲವಾದರೆ ನಾಳೆಯಿಂದ ದಯವಿಟ್ಟು ಬರಬೇಡಿ : ಶಾಸಕ ರಘುಪತಿ ಭಟ್ – Vishwanews24

ಉಡುಪಿ: ಹಿಜಾಬ್ ಧರಿಸದೆ ಬರಲು ಸಿದ್ಧವಿಲ್ಲ ಎಂದಾದರೆ ಅಂತಹ ವಿದ್ಯಾರ್ಥಿನಿಯರು ನಾಳೆಯಿಂದ (ಫೆ.1) ಕಾಲೇಜ್ ಆವರಣಕ್ಕೆ ಬರಬೇಡಿ ಯಾರು ಶಿಸ್ತನ್ನು ಪಾಲಿಸುತ್ತಾರೆ ಅವರು ಮಾತ್ರ ಬರಬಹುದು ಎಂದು ಉಡುಪಿ ಶಾಸಕ ಹಾಗೂ ಸರಕಾರಿ ಬಾಲಕಿಯರ ಪಿಯು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಘುಪತಿ ಭಟ್‌ ತಿಳಿಸಿದ್ದಾರೆ.

ಅವರು ಸೋಮವಾರ ಸರಕಾರಿ ಬಾಲಕಿಯರ ಪಿಯು ಕಾಲೇಜಿನ ಹಿಜಾಬ್‌ ಕುರಿತು ನಡೆದ ಅಭಿವೃದ್ಧಿ ಸಮಿತಿ, ಪೋಷಕರು ಹಾಗೂ ವಿದ್ಯಾರ್ಥಿನಿಯರು, ಉಪನ್ಯಾಸಕರು ಹಾಗೂ ಮುಸ್ಲಿಂ ಮುಖಂಡರ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಈ ಹಂತದಲ್ಲಿ ನಮಗೆ ಯಾವುದೇ ನಿರ್ಧಾರ ಪ್ರಕಟಿಸಲು ಸಾಧ್ಯವಿಲ್ಲ ಸರ್ಕಾರದ ಸಮಿತಿ ಯಾವ ನಿರ್ಧಾರವನ್ನು ಕೈಗೊಳ್ಳುತ್ತೆ ಅದುವರೆಗೆ ಕಾಯಬೇಕು ಎಂದು ವಿದ್ಯಾರ್ಥಿನಿಯರಿಗೆ ಮತ್ತು ಅವರ ಪೋಷಕರಿಗೆ ತಿಳಿಸಲಾಗಿದೆ. ಅಷ್ಟರವರೆಗೆ ಹಿಂದೆ ಬರುತ್ತಿದ್ದ ರೀತಿಯಲ್ಲಿ ಕಂಪೌಂಡ್‌ ಒಳಗೆ ತನಕ ಹಿಜಾಬ್‌ ಹಾಕಿಕೊಂಡು ಬಂದು ತರಗತಿಯಲ್ಲಿ ಹಿಜಾಬ್‌ ಇಲ್ಲದೆ ಕುಳಿತು ಪಾಠ ಕೇಳಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ :

ನಾಳೆಯಿಂದ ವಿದ್ಯಾರ್ಥಿನಿಯರು ಅವರ ನಿರ್ಧಾರ ಇದ್ದರೆ ಮಾತ್ರ ತರಗತಿಗೆ ಬರಬಹುದು ತರಗತಿಯಲ್ಲಿ ಹಿಜಾಬ್‌ ಧರಿಸದೆ ಬರುತ್ತೇವೆ ಎಂಬ ನಿರ್ಧಾರ ಮಾಡಿದ್ದರೆ ಮಾತ್ರ ಕಾಲೇಜಿಗೆ ಬನ್ನಿ ಇಲ್ಲವಾದರೆ ದಯವಿಟ್ಟು ಬರಬೇಡಿ ಇಲ್ಲಿ ಬಂದು ಕಾಲೇಜಿನ ಶೈಕ್ಷಣಿಕ ವಾತಾವರಣವನ್ನು ಹಾಳು ಮಾಡಬೇಡಿ ಎಂದರು.

ಪೊಲೀಸ್‌ ಇಲಾಖೆಗೆ ಕೂಡ ಈ ಬಗ್ಗೆ ಮಾಹಿತಿ ನೀಡಿದ್ದು ನಾಳೆಯಿಂದ ಕಾಲೇಜು ಆವರಣದಲ್ಲಿ ಹಿಜಾಬ್‌ ವಿಚಾರ ಎತ್ತಿಕೊಂಡು ಬೇರೆ ಬೇರೆ ಸಂಘಟನೆಗಳು, ಮಾಧ್ಯಮದವರಿಗೆ ಕಾಲೇಜಿಗೆ ಪ್ರವೇಶ ನೀಡಕೂಡದು ಎಂದು ಸೂಚಿಸಲಾಗಿದೆ. ಈ ಕುರಿತು ಕಾಲೇಜು ಅಭಿವೃದ್ಧಿ ಸಮಿತಿ ಸ್ಪಷ್ಟ ನಿರ್ಣಯ ಕೈಗೊಂಡಿದೆ. ಯಾರಿಗಾದರೂ ಏನೇ ಮನವಿ ಹಾಗೂ ಇನ್ನಿತರ ವಿಚಾರಗಳಿದ್ದರೆ ನೇರವಾಗಿ ಜಿಲ್ಲಾಧಿಕಾರಿಗಳಿಗೆ ನೀಡಲಿ ಬದಲು ಕಾಲೇಜು ಆವರಣಕ್ಕೆ ಈ ವಿಚಾರದಲ್ಲಿ ಪ್ರವೇಶ ಇಲ್ಲ. ನಾಳೆಯಿಂದ ಯಾವುದೇ ಗೊಂದಲಕ್ಕೆ ಅವಕಾಶ ಇಲ್ಲ ಯಾರು ಶಿಸ್ತನ್ನು ಪಾಲಿಸುತ್ತಾರೆ ಅವರು ಬರಬಹುದು ಎಂದು ತಿಳಿಸಿದರು.

ಇದನ್ನೂ ಓದಿ :

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

2 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

2 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

2 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

2 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

5 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

5 hours ago