Featured

ಉಡುಪಿ : ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದಕ್ಕಿಂತ ಹಿಂದು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿದ್ದು ಹೆಚ್ಚು ವಿವಾದಕ್ಕೆ ಕಾರಣ ಕಾರಣವಾಗಿತ್ತು : ಕಲ್ಲಡ್ಕ ಪ್ರಭಾಕರ್ ಭಟ್ – Vishwnaews24

ಹಿಜಬ್ ದೇಶ ವಿಭಜನೆಯ ಕಾರಣವಾಗುವ ವಿವಾದ

ಕೆಲವರಿಗೆ ಕೇಸರಿ ಅಂದರೆ ತುರಿಕೆ ಬರುತ್ತದೆ..

ಉಡುಪಿ: ಉಡುಪಿಯಲ್ಲಿ ಹುಟ್ಟಿಕೊಂಡ ಹಿಜಾಬ್ ವಿವಾದ ಸಾಮಾನ್ಯ ವಿಚಾರ ಅಲ್ಲ. ಹಿಜಬ್ ಕೇವಲ ಬಟ್ಟೆಯ ದೃಷ್ಟಿಯಿಂದ ವಿವಾದ ಮಾಡಿದ್ದಲ್ಲ. ಇದು ದೇಶ ವಿಭಜನೆಯ ಕಾರಣವಾಗುವ ವಿವಾದವಾಗಿದ್ದು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು, ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬುಧವಾರ ನಡೆದ ಧರ್ಮ ವೇದಿಕೆಯಲ್ಲಿ ವಿಶೇಷ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದರು.

ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದು ವಿವಾದಕ್ಕೀಡಾಗುವುದಕ್ಕಿಂತ, ಹಿಂದು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿದ್ದು ಹೆಚ್ಚು ವಿವಾದಕ್ಕೆ ಕಾರಣವಾಗಿತ್ತು. ಹಿಂದೂ ಸಮಾಜ ಪ್ರತಿಕ್ರಿಯೆ ನೀಡಬೇಕು. ನಾವು ಹೀಗೆ ಮುಂದುವರಿಯಲು ಬಿಡುವುದಿಲ್ಲ ಎಂದು ಸವಾಲು ಹಾಕಿದ್ದೇ ಹಿಜಾಬ್ ವಿಚಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಯಿತು. ಯಾಕೆಂದರೆ ಕೆಲವರಿಗೆ ಕೇಸರಿ ಅಂದರೆ ತುರಿಕೆ ಬರುತ್ತದೆ. ಹಿಂದೂ ಸಮಾಜ ಸುಮ್ಮನೆ ಪ್ರತಿಕ್ರಿಯೆ ನೀಡದೆ ಕೂತಿದ್ದೇ ಭಾರತ ವಿಭಜನೆಗೆ ಕಾರಣವಾಯಿತು. ಅಂದರೆ ಎಲ್ಲಿಯವರೆಗೆ ಸಹನೆಯಿಂದ ಕಾಯಬೇಕು ಎಂದು ಪ್ರಭಾಕರ್ ಭಟ್ ಪ್ರಶ್ನಿಸಿದರು.

ಇವತ್ತಿನ ಪರಿಸ್ಥಿತಿಯಲ್ಲಿ ರಾಕ್ಷಸರ ದಮನ ಮಾಡಲು ಹೆಚ್ಚು ಹೆಚ್ಚು ಮಹಿಷಮರ್ದಿನಿ ಅವಶ್ಯಕತೆ ಇದೆ. ಅವಳು ಮಾಡಿದ್ದು ವಧೆ, ಕೊಲೆಯಲ್ಲ ಎಂದರು.

ಧರ್ಮದ ಬಗ್ಗೆ ಪ್ರಶ್ನೆ ಮಾಡಿ ಮೂರು ಬಾರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದವರಿಗೆ ಸರಿಯಾದ ಉತ್ತರ ವನ್ನು ಕೊಟ್ಟಿದೆ. ಧರ್ಮ ಮತ್ತು ರಿಲಿಜಿಯನ್ ಒಂದೇ ಅಲ್ಲ. ಧರ್ಮ ಅಂದರೆ ಅದು ನಾವು ಬದುಕುವ ರೀತಿ. ರಿಲಿಜಿಯನ್ ಎಂದರೆ ಆರಾಧನೆ ಮಾಡುವ ರೀತಿ. ಜಗತ್ತಿನಲ್ಲಿ ಒಂದೇ ಶ್ರೇಷ್ಠ ಧರ್ಮ ಅದು ಹಿಂದು ಧರ್ಮ. ಅದನ್ನು ಹೆಚ್ಚು ಹೆಚ್ಚು ಅರ್ಥ ಮಾಡಿಕೊಳ್ಳಬೇಕು. ದುರಾದೃಷ್ಟವಶಾತ್, ಸರಿಯಾಗಿ ‌ಅರ್ಥ ಮಾಡಿಕೊಳ್ಳದೆ ಎಲ್ಲವನ್ನೂ ಒಟ್ಟಾಗಿ ಜೋಡಿಸಲು ಹೊರಟಿದ್ದಾರೆ.

ಸರ್ವಧರ್ಮ ಸಮ್ಮೇಳನದಲ್ಲಿ ಸರ್ವ ಧರ್ಮವೇ ಇಲ್ಲ. ಅನ್ಯ ಧರ್ಮದವರು, ಒಂದೇ ದೇವರು ಎಂದು ಹೇಳುವವರ ಕೈಯಿಂದ ಭಾಷಣ ಮಾಡಿಸುತ್ತಾರೆ. ಇದು ನಾಚಿಕೆಗೇಡಿನ ವಿಷಯ. ಹಿಂದೂಗಳಿಗೆ ಇಂತಹದ್ದೇ ದೇವರು ಹೀಗೆಯೇ ಆರಾಧಿಸಬೇಕು ಎನ್ನುವ ನಿಯಮ. ನಾವು ಸಮಾಜದ ಒಳಿತಿಗಾಗಿ ಪೂಜೆ ಮಾಡುತ್ತೇವೆ ಎಂದರು.

ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರು, ಡಾl. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್, ಪ್ರವರ್ತಕರಾದ ನಾಡೋಜ ಜಿ. ಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ, ಉಡುಪಿಯ ಶಾಸಕರಾದ ಕೆ. ರಘುಪತಿ ಭಟ್, ಆದಿತಿ ಬಿಲ್ಡರ್ಸ್ ಉಡುಪಿಯ ರಂಜನ್ ಕೆ, ಎ.ಕೆ ಡೆವಲಪರ್ಸ್ ಉಡುಪಿಯ ಕರುಣಾಕರ ಶೆಟ್ಟಿ, ನಗರಸಭಾ ಸದಸ್ಯರಾದ ಸವಿತಾ ಹರೀಶ್ ರಾಮ್, ನಗರ ಸಭೆಯ ನಾಮ ನಿರ್ದೇಶಿತ ಸದಸ್ಯರಾದ ಅರುಣಾ ಎಸ್ ಪೂಜಾರಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ನಾಗೇಶ್ ಹೆಗ್ಡೆ, ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ರವಿರಾಜ್ ಆಚಾರ್ಯ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ನಾಗೇಶ್ ಹೆಗ್ಡೆ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಪುರುಷೋತ್ತಮ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕಿಣಿ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಕೆ. ಮಂಜುನಾಥ್ ಹೆಬ್ಬಾರ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

19 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago