Featured

ಉಡುಪಿ : ವಿದ್ಯುತ್ತೀಕರಣದಿಂದ ವಾರ್ಷಿಕ 300 ಕೋಟಿ ರೂ. ಉಳಿತಾಯ: ಶೋಭಾ ಕರಂದ್ಲಾಜೆ -Vishwanews24

ಉಡುಪಿ : ವಿದ್ಯುತ್ತೀಕರಣದಿಂದ ವಾರ್ಷಿಕ 300 ಕೋಟಿ ರೂ. ಉಳಿತಾಯ: ಶೋಭಾ ಕರಂದ್ಲಾಜೆ -Vishwanews24

ಉಡುಪಿ : ಕೊಂಕಣ ರೈಲ್ವೆಯು ಕರಾವಳಿಯ ಜೀವನಾಡಿಯಾಗಿದ್ದು, ಕರಾವಳಿಯನ್ನು ಉತ್ತರ ಭಾರತದೊಂದಿಗೆ ಜೋಡಿಸುವ ಮಾರ್ಗವಾಗಿದೆ. ಪರಿಸರದ ಹಲವು ಅಡೆತಡೆಗಳನ್ನು ಎದುರಿಸಿ ಆರಂಭಗೊAಡ ಈ ರೈಲ್ವೆ ಮಾರ್ಗವನ್ನು ಪ್ರಸ್ತುತ ವಿದ್ಯುತ್ತೀಕರಣಗೊಳಿಸಿರುವುದರಿಂದ ವಾರ್ಷಿಕವಾಗಿ 300 ಕೋಟಿ ರೂ. ಉಳಿತಾಯವಾಗಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಇಂದು, ಕೊಂಕಣ ರೈಲ್ವೆಯ ವಿದ್ಯುತ್ತೀಕರಣ ಯೋಜನೆ ಉದ್ಘಾಟಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವರ್ಚುವಲ್ ಕಾರ್ಯಕ್ರಮವನ್ನು, ಉಡುಪಿ ರೈಲ್ವೆ ನಿಲ್ದಾಣದಲ್ಲಿ ವೀಕ್ಷಿಸಿ ಮಾತನಾಡಿದರು.

ಮಹಾರಾಷ್ಟçದ ರೋಹಾದಿಂದ ಮಂಗಳೂರಿನ ತೋಕೂರು ವರೆಗಿನ 740 ಕಿ.ಮೀ ಉದ್ದದ ಕೊಂಕಣ ರೈಲು ಮಾರ್ಗವನ್ನು 1287 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ತೀಕರಣಗೊಳಿಸಿದ್ದು, ಇದರಿಂದ ವಾರ್ಷಿಕ ಇಂಧನ ವೆಚ್ಚ 180 ಕೋಟಿ ರೂ. ಹಾಗೂ ನಿರ್ವಹಣಾ ವೆಚ್ಚ 120 ಕೋಟಿ ರೂ. ಗಳ ಉಳಿತಾಯವಾಗಲಿದ್ದು, ವಿದ್ಯುತ್ ಬಳಕೆಯಿಂದ ಕಲ್ಲಿದ್ದಲ್ಲಿನ ಬಳಕೆ ಪ್ರಮಾಣ ಕಡಿಮೆಯಾಗಿ, ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಹಾಗೂ ಪ್ರಯಾಣಿಕರಿಗೆ ವೇಗವಾಗಿ ತಮ್ಮ ಸ್ಥಳಗಳಿಗೆ ತಲುಪಲು ಸಾಧ್ಯವಾಗಲಿದೆ. ಈ ಮಾರ್ಗದಲ್ಲಿ 16 ಮೈಲ್ ಎಕ್ಸ್ಪ್ರೆಸ್ ಹಾಗೂ 10 ಗೂಡ್ಸ್ ರೈಲುಗಳು ಸಂಚರಿಸಲಿವೆ ಎಂದರು.

ದೇಶದಲ್ಲಿ 2024 ರೊಳಗೆ 67956 ಕಿ.ಮೀ. ರೈಲು ಮಾರ್ಗವನ್ನು ವಿದ್ಯುತ್ತೀಕರಣಗೊಳಿಸುವ ಯೋಜನೆಯಿದ್ದು, ಈಗಾಗಲೇ 45881 ಕಿ.ಮೀ. ಯೋಜನೆ ಪೂರ್ಣವಾಗಿದ್ದು, ಇದಕ್ಕಾಗಿ 13500 ಕೋಟಿ ರೂ. ವೆಚ್ಚವಾಗಿದೆ. ಇನ್ನು 2 ವರ್ಷದಲ್ಲಿ ಬಾಕಿ ಕಾಮಗಾರಿ ಪೂರ್ಣಗೊಳ್ಳಲಿದೆ. ಕೇಂದ್ರ ಸರ್ಕಾರದ 8 ವರ್ಷಗಳ ಆಡಳಿತದ ಅವಧಿಯಲ್ಲಿ ಶೌಚಾಲಯ, ವಸತಿ, ವಿದ್ಯುತ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಗತಿಪರ ಅಭಿವೃದ್ಧಿ ಕಾರ್ಯಗಳಾಗಿವೆ. ದೇಶದ ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶದಿಂದ , ರೈತರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸಲು ಮತ್ತು ಆಹಾರ ಪದಾರ್ಥಗಳನ್ನು ರಫ್ತು ಮಾಡಲು ಹೆಚ್ಚು ಆದ್ಯತೆ ನೀಡಲಾಗುತಿದ್ದು, ವಿಶ್ವದಲ್ಲಿ ಆಹಾರ ಪದಾರ್ಥಗಳ ರಫ್ತಿನಲ್ಲಿ ದೇಶ ಪ್ರಸ್ತುತ 9 ನೇ ಸ್ಥಾನದಲ್ಲಿದೆ ಎಂದರು.

ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಕೊಂಕಣ ರೈಲ್ವೆಯ ಕಾರವಾರ ಪ್ರಾದೇಶಿಕ ಕಚೇರಿಯ ಕ್ಷೇತ್ರಿಯ ಪ್ರಬಂಧಕ ಬಿ.ಬಿ.ನಿಕ್ಕಂ, ಕೊಂಕಣ ರೈಲ್ವೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸುಧಾ ಕೃಷ್ಣಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ಕೊಂಕಣ ರೈಲ್ವೆಯ ಹಿರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ್ ನಾಯಕ್ ಸ್ವಾಗತಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago