ಉಡುಪಿ: ಬೈಕೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶಂಕರನಾರಾಯಣ ಗ್ರಾಮದ ಕಲ್ಲಗದ್ದೆ ಎಂಬಲ್ಲಿ ನಡೆದಿದೆ. ಮೃತರನ್ನು ಸಚಿನ್ ಕಲ್ಲಪ್ಪ್ ಸಂಕ್ರಟ್ಟಿ(28) ಎಂದು ಗುರುತಿಸಲಾಗಿದೆ.
ಇವರು ಶಂಕರನಾರಾಯಣ ಪದವಿ ಕಾಲೇಜಿನಲ್ಲಿ ನಡೆಯುತ್ತಿದ್ದ ಹುಟ್ಟೂರು ಸನ್ಮಾನ ಕಾರ್ಯಕ್ರಮಕ್ಕೆ ಬಂದಿದ್ದು, ನಂತರ ಸ್ನೇಹಿತ ಬಸವ ಕಿರಣ ಎಂಬವರನ್ನು ಬಸ್ಸಿಗೆ ಬಿಡಲು ಕುಂದಾಪುರಕ್ಕೆ ಬೈಕಿನಲ್ಲಿ ಹೊರಟಿದ್ದರು. ಅಂಪಾರು ಮಾರ್ಗವಾಗಿ ಕುಂದಾಪುರಕ್ಕೆ ಹೊಗುತ್ತಿದ್ದ ಬೈಕ್, ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಸಚಿನ್ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…