Featured

ಉಡುಪಿ ವಿಧಾನಪರಿಷತ್ ಚುನಾವಣೆ : ಮದ್ಯ ಮಾರಾಟ ನಿಷೇಧ – vishwanews24

ಉಡುಪಿ ವಿಧಾನಪರಿಷತ್ ಚುನಾವಣೆ : ಮದ್ಯ ಮಾರಾಟ ನಿಷೇಧ

ಉಡುಪಿ,: ಕರ್ನಾಟಕ ವಿಧಾನಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024 ಕ್ಕೆ ಸಂಬoಧಿಸಿದoತೆ ಜೂನ್ 3 ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 135 (ಸಿ) ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಾದ್ಯಂತ ಜೂನ್ 1 ರಂದು ಸಂಜೆ 4 ಗಂಟೆಯಿ0ದ ಜೂನ್ 3 ರ ಮಧ್ಯರಾತ್ರಿ 12 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಲರಿ, ಸ್ಟಾರ್ ಹೋಟೆಲ್‌ಗಳಲ್ಲಿ, ಶೇಂದಿ ಅಂಗಡಿ ಹಾಗೂ ಕ್ಲಬ್‌ಗಳಲ್ಲಿ ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

12 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

12 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

12 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

13 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

13 hours ago