ಉಡುಪಿ : “ವಿಧಾನಸಭೆಯ ಸ್ಪೀಕರ್ ಸ್ಥಾನ ಎಂಬುದು ಮಸೀದಿಯ ಮೌಲ್ವಿಯ ಹುದ್ದೆಯಲ್ಲ”ಎಂದು ಬಿಜೆಪಿ ನಾಯಕ ಸಿಟಿ ರವಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ವಿರುದ್ದ ಕಿಡಿಕಾರಿದ್ದಾರೆ.
ತೆಲಂಗಾಣ ಚುನಾವಣೆ ಪ್ರಚಾರದ ವೇಳೆ ತೆಲಂಗಾಣ ಚುನಾವಣೆ ವೇಳೆ ಸಚಿವ ಜಮೀರ್ “ಕಾಂಗ್ರೆಸ್ ಪಕ್ಷ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿ ಸ್ಪೀಕರ್ ಸ್ಥಾನವನ್ನು ಮುಸ್ಲಿಮರಿಗೆ ನೀಡಿ, ಬಿಜೆಪಿ ಶಾಸಕರು ಸಹ ನಮಸ್ಕಾರ ಸ್ಪೀಕರ್ ಸಾಬ್ ಎನ್ನುವಂತೆ ಮಾಡಿದೆ ಎಂದು ಹೇಳಿಕೆ ನೀಡಿದ್ದರು. ಇದು ವಿವಾದದ ಸ್ವರೂಪ ಪಡೆದಿತ್ತು.
ಇದಕ್ಕೆ ತಿರುಗೇಟು ಕೊಟ್ಟು ಉಡುಪಿಯಲ್ಲಿ ಮಾತನಾಡಿದ, ಸಿಟಿ ರವಿ “ಸ್ಪೀಕರ್ಗೆ ಸಿಗುವುದು ಜಾಮಿಯ ಮಸೀದಿಯ ಮುಲ್ಲಾನಿಗೆ ಸಿಗುವ ಗೌರವ ಅಲ್ಲ. ಸ್ಪೀಕರ್ ಸ್ಥಾನ ಎಂಬುದು ಸಾಂವಿಧಾನಿಕ ಹುದ್ದೆ. ಆ ಹುದ್ದೆಯ ಗೌರವ ಕೆಳಗೆ ಇಳಿಸುವ ಕೆಲಸ ಮಾಡಬೇಡಿ. ನಾವು ಮುಲ್ಲಾಗೆ ಸಲಾಂ ಹೊಡೆಯುತ್ತಿಲ್ಲ. ಸಂವಿಧಾನದ ಬಗ್ಗೆ ಅರ್ಥ ಆಗದ ನಿಮ್ಮಂತವರು ಸಚಿವರಾದರೆ ಹೀಗೆಯೇ ಆಗೋದು ಎಂದು ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ , ಸ್ಪೀಕರ್ ಯುಟಿ ಖಾದರ್ ಅವರಿಗೆ ಘನತೆ ಇದೆ ಅದನ್ನು ಹಾಳು ಮಾಡಬೇಡಿ ಎಂದು ಹೇಳಿಕೆ ನೀಡಿದ್ದಾರೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…