Featured

ಉಡುಪಿ : ವಿಧಾನ ಪರಿಷತ್ ಉಪ ಚುನಾವಣೆ; ಮತದಾನ ಆರಂಭ – vishwanews24

ಉಡುಪಿ : ವಿಧಾನ ಪರಿಷತ್ ಉಪ ಚುನಾವಣೆ; ಮತದಾನ ಆರಂಭ

ಉಡುಪಿ: ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಉಪ ಚುನಾವಣೆ ಇಂದು ಬೆಳಗ್ಗೆ 8ಕ್ಕೆ ಆರಂಭಗೊಂಡಿದೆ.

ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಈ ಕ್ಷೇತ್ರದ 392 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ.

ಉಡುಪಿ ಜಿಲ್ಲೆಯಲ್ಲಿ ನಿಧನಗತಿಯಲ್ಲಿ ಮತದಾನ ಆರಂಭಗೊಂಡಿದೆ. ಉಡುಪಿ ನಗರಸಭೆಯ ಮತಗಟ್ಟೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ಬೆಳಗ್ಗೆ ಹಕ್ಕು ಚಲಾವಣೆ ಮಾಡಿದರು. ನಗರಸಭೆಯು ಅಧ್ಯಕ್ಷ ಪ್ರಭಾಕರ್ ಪೂಜಾರಿ, ಸ್ಥಾಯಿ ಸಮಿತಿಯ ಅಧ್ಯಕ್ಷ ಸುಂದರ ಕಲ್ಮಾಡಿ ಹಾಗೂ ನಗರಸಭೆಯ ಕೆಲವು ಸದಸ್ಯರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಅದೇ ರೀತಿ ಕಾರ್ಕಳ ಪುರಸಭೆಯಲ್ಲಿ ಶಾಸಕ ವಿ.ಸುನೀಲ್ ಕುಮಾರ್ ಮತದಾನ ಮಾಡಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾಪು ಪುರಸಭೆಗೆ ತೆರಳಿ ಮತ ಚಲಾಯಿಸಿದರು.

ಕಿಶೋರ್ ಬಿ.ಆರ್. (ಬಿಜೆಪಿ), ರಾಜು ಪೂಜಾರಿ (ಕಾಂಗ್ರೆಸ್), ಅನ್ವರ್ ಸಾದಾತ್ ಎಸ್. (ಎಸ್ಡಿಪಿಐ), ದಿನಕರ ಉಳ್ಳಾಲ (ಪಕ್ಷೇತರ) ಚುನಾವಣಾ ಕಣದಲ್ಲಿದ್ದಾರೆ.

ಅ.24ರಂದು ನಗರದ ಸಂತ ಅಲೋಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಯು ನಡೆಯಲಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago