ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಉಡುಪಿಯ ಹಾಲಿ ಶಾಸಕ ರಘುಪತಿ ಭಟ್, ಬ್ರಾಹ್ಮಣ ಎಂಬ ಕಾರಣಕ್ಕೆ ಪಕ್ಷ ಈವರೆಗೆ ನನಗೆ ಟಿಕೆಟ್ ಕೊಟ್ಟದಲ್ಲ. ನಾನು ಯಾವುದೇ ಜಾತಿಯ ಕ್ಯಾಂಡಿಡೇಟ್ ಅಲ್ಲ. ನಾನು ಒಳ್ಳೆಯ ಕಾರ್ಯಕರ್ತ, ಕೆಲಸಗಾರ ಎಂಬ ಕಾರಣಕ್ಕೆ ಪಕ್ಷ ಈ ಹಿಂದೆ ಸೀಟ್ ಕೊಟ್ಟಿದೆ. ಒಂದು ವೇಳೆ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರು ಇಲ್ಲದಿದ್ದರೆ, ಮುಂದಿನ ಅಭಿಪ್ರಾಯವನ್ನು ತಿಳಿಸುತ್ತೇನೆ ಎಂದರು.
ಕುಂದಾಪುರದಲ್ಲಿ ಯಾವುದೇ ಮಾನದಂಡ ಬಂದರೂ ನನಗೆ ಎಫೆಕ್ಟ್ ಆಗಲ್ಲ. ನಾನು ಕುಂದಾಪುರ ಕ್ಷೇತ್ರದ ಟಿಕೆಟ್ ಅಪೇಕ್ಷಿತನಲ್ಲ. ಉಡುಪಿ ಕ್ಷೇತ್ರದ ಆಕಾಂಕ್ಷಿ. ಕುಂದಾಪುರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಸ್ಪರ್ಧೆ ಮಾಡುವುದಿಲ್ಲ ಎಂದಿದ್ದಾರೆ. ಅಲ್ಲಿಯ ಅಭ್ಯರ್ಥಿಯ ಬಗ್ಗೆ ಪಕ್ಷ ತೀರ್ಮಾನಿಸಲಿದೆ.
ಕುಂದಾಪುರದ ಚಿತ್ರಣಕ್ಕೂ ಉಡುಪಿಗೂ ತಾಳೆ ಹಾಕಲು ಆಗಲ್ಲ ಎಂದರು. ಉಡುಪಿಯಲ್ಲಿ ಬಿಜೆಪಿಗೆ ಗೆಲ್ಲುವ ಅವಕಾಶ ಇದೆ. ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಖಾಲಿ ಮಾಡಿದ್ದೇವೆ. ಹಲವು ಕಾಂಗ್ರೆಸ್ ಕಾರ್ಯಕರ್ತರನ್ನು ವಿಶ್ವಾಸದ ಮೇಲೆ ಪಕ್ಷಕ್ಕೆ ಕರೆತಂದಿದ್ದೇನೆ. ಕೆಲವೊಮ್ಮೆ ಹಣೆಬರಹದ ಮೇಲೆ ನಿರ್ಧಾರ ಆಗುತ್ತದೆ. 2013ರಲ್ಲಿ ನನಗೆ ಕೈ ತಪ್ಪುವುದಿಲ್ಲ ಎಂಬ ವಿಶ್ವಾಸವಿತ್ತು. ಆದರೆ ನನ್ನಿಂದ ಆದ ಅವಘಡದಿಂದ ಟಿಕೆಟ್ ಕೈತಪ್ಪಿತ್ತು. ಹಾಗಾಗಿ ಹಣೆ ಬರಹದ ಮೇಲೆ ಎಲ್ಲ ನಿರ್ಧಾರ ಆಗುತ್ತದೆ. ಅದಕ್ಕೆ ನಾನು ತಲೆಬಿಸಿ ಮಾಡಿಕೊಳ್ಳಲ್ಲ ಎಂದು ಹೇಳಿದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…