ಉಡುಪಿ: ರಾಜ್ಯ ಸರ್ಕಾರವು ವಿನಾಶಕಾರಿ ಮೀನುಗಾರಿಕೆ ಪದ್ಧತಿಗಳನ್ನು ನಿಷೇಧಿಸಿ, ಆದೇಶ ಹೊರಡಿಸಿದೆ.
ಬುಲ್ ಟ್ರಾಲಿಂಗ್ ಮೀನುಗಾರಿಕೆ, ಬೆಳಕು ಮೀನುಗಾರಿಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಚೌರಿ, ಚಿಂದಿ ಬಲೆ, ಕೊಳೆಯುವ ವಸ್ತುಗಳು ಹಾಗೂ ಇನ್ನಿತರ ಸಮುದ್ರ ಮಾಲಿನ್ಯ ವಸ್ತುಗಳನ್ನು, ಪದಾರ್ಥಗಳನ್ನು ಹಾಕಿ ಅಸಾಂಪ್ರದಾಯಿಕ ರೀತಿಯಲ್ಲಿ ಕಪ್ಪೆ ಬಂಡಾಸ್ ಮೀನು ಹಿಡಿಯುವುದನ್ನು ನಿಷೇಧಿಸಲಾಗಿದೆ.
ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಿಗೆ ಗರಿಷ್ಟ 350 ಅಶ್ವ ಶಕ್ತಿ ಇಂಜಿನ್ ಅಳವಡಿಸಲು ಅನುಮತಿಸಲಾಗಿದೆ. ಎಲ್ಲಾ ಮೀನುಗಾರಿಕಾ ದೋಣಿಗಳಿಗೆ ಕಡ್ಡಾಯವಾಗಿ ಏಕರೂಪದ ಬಣ್ಣಹಚ್ಚಲು ಸೂಚಿಸಲಾಗಿದೆ.
ಎಲ್ಲಾ ಟ್ರಾಲ್ ಮೀನುಗಾರಿಕೆ ದೋಣಿಗಳಿಗೆ ಕಡ್ಡಾಯವಾಗಿ 35 ಎಂ.ಎಂ ಅಳತೆಯ ಸ್ಕ್ವೇರ್ ಮೆಶ್ ಕಾಡ್ ಎಂಡ್ ಬಲೆಯನ್ನು ಉಪಯೋಗಿಸುವುದು ಕಡ್ಡಾಯವಾಗಿದೆ. ಎಲ್ಲಾ ಪರ್ಸೀನ್ ಮತ್ತು ಔಟ್ ಬೋರ್ಡ್ ಇಂಜಿನ್ ಅಳವಡಿಸಿದ ಮೀನುಗಾರಿಕೆ ದೋಣಿಗಳು ಕಡ್ಡಾಯವಾಗಿ 20 ಎಂಎಂ ಅಳತೆಗಿಂತ ಸಣ್ಣ ಕಣ್ಣಿನ ಬಲೆಗಳನ್ನು ಉಪಯೋಗಿಸಬಾರದು. ಕರಾವಳಿ ತೀರ ಪ್ರದೇಶದಲ್ಲಿ ಪಚ್ಚಿಲೆ (ಗ್ರೀನ್ ಮಸಲ್) ತೆಗೆಯುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಒಟ್ಟು 19 ಜಾತಿಯ ಮೀನುಗಳ ಹಿಡುವಳಿಯನ್ನು ಕನಿಷ್ಟ ಕಾನೂನಾತ್ಮಕ ಗಾತ್ರ ನಿಗದಿಪಡಿಸಿ ಸರ್ಕಾರ ಆದೇಶಗೊಳಿಸಿದೆ.
ಮೇಲ್ಕಂಡ ಎಲ್ಲಾ ನಿಷೇಧಿತ ಪದ್ಧತಿಗಳನ್ನು ಕಡ್ಡಾಯವಾಗಿ ನಡೆಸದಿರುವಂತೆ, ತಪ್ಪಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…