ಉಡುಪಿ : ವಿವಿಧ ಯೋಜನೆ: ಅರ್ಜಿ ಆಹ್ವಾನ – Vishwanews24

Featured, ಉಡುಪಿ

ಉಡುಪಿ : ವಿವಿಧ ಯೋಜನೆ: ಅರ್ಜಿ ಆಹ್ವಾನ – Vishwanews24

ಉಡುಪಿ: ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ, ಕೌಶಲ್ಯ ಉನ್ನತೀಕರಣ ಯೋಜನೆ, ಸ್ವಯಂ ಉದ್ಯೋಗಗಳಾದ ಸ್ವಾವಲಂಭಿ/ ಸಂಚಾರ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಚರ್ಮಶಿಲ್ಪ ಯೋಜನೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ ಹಾಗೂ ಡಾ. ಬಾಬು ಜಗಜೀವನ ರಾಂ ವಸತಿ ಕಾರ್ಯಾಗಾರ ನಿರ್ಮಾಣ ಯೋಜನೆಗಳಿಗೆ ಪರಿಶಿಷ್ಟ ಜಾತಿಯ ಚರ್ಮ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http://lidkar.com ಸಹಾಯವಾಣಿ ಸಂಖ್ಯೆ: 9482300400 ಅಥವಾ ಜಿಲ್ಲಾ ಸಂಯೋಜಕರು ಮೊ.ನಂ: 6362891017 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ : ಜಿ.ಟಿ.ಟಿ.ಸಿ ಪ್ರವೇಶಾತಿ : ಅರ್ಜಿ ಆಹ್ವಾನ – Vishwanews24

Leave a Reply