Featured

ಉಡುಪಿ: ವಿಶ್ವ ವಿಶೇಷ ಚೇತನ ಮಕ್ಕಳ ದಿನಾಚರಣೆ  – vishwanews24

ಉಡುಪಿ: ವಿಶ್ವ ವಿಶೇಷ ಚೇತನ ಮಕ್ಕಳ ದಿನಾಚರಣೆ

ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ 5 ಮಕ್ಕಳಿಗೆ ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಡುಪಿ ಇವರ ಸಹಯೋಗದೊಂದಿಗೆ ಸನ್ಮಾನ ಕಾರ್ಯಕ್ರಮ

ಉಡುಪಿ: ಕ್ಷೇತ್ರ ಸಂಪನ್ಮೂಲ ಕೇಂದ್ರ ಅಜ್ಜರಕಾಡು ಉಡುಪಿ ವತಿಯಿಂದ ವಿಶ್ವ ವಿಶೇಷ ಚೇತನ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಯಲ್ಲಮ್ಮ ರವರು ವಹಿಸಿ ಮಕ್ಕಳಿಗೆ ಪ್ರೋತ್ಸಾಹದ ಮಾತನಾಡಿದರು.

ವಿಶೇಷ ಸಾಧನೆ ಮಾಡಿದ ಮಕ್ಕಳು ಮತ್ತು ಗಣ್ಯರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಜಿಲ್ಲಾ ಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ 5 ಮಕ್ಕಳಿಗೆ ಸನ್ಮಾನ ಕಾರ್ಯಕ್ರಮವನ್ನು ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಡುಪಿ ಇವರ ಸಹಯೋಗದೊಂದಿಗೆ ನಡೆಸಲಾಯಿತು. ಉಡುಪಿ ನಗರಸಭೆಯ ಇಂಜಿನಿಯರ್ ದಿವಾಕರ ಅವರು ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಬಹುಮಾನವನ್ನು ನೀಡಿ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿದರು,ಈ ಸಂದರ್ಭದಲ್ಲಿ40 ವಿಶೇಷ ಚೇತನ ಮಕ್ಕಳು ತಮ್ಮ ಪ್ರತಿಭಾ ಪ್ರದರ್ಶನವನ್ನು ನೀಡಿದರು.

ಸ.ಹಿ.ಪ್ರಾ ಶಾಲೆ ಕಾಜಾರಗುತ್ತು ಶಾಲೆಯ ವಿದ್ಯಾರ್ಥಿ ಅಮೃತ್ ನಾಯಕ್ ಪ್ರಾರ್ಥನೆ ಮಾಡಿದರು.

ಕ್ಷೇತ್ರ ಸಮನ್ವಯಾಧಿಕಾರಿ ಉಷಾ ಕಿರಣ್, ನಿವೃತ್ತ ಬಿಐಇಆರ್‌ಟಿ ಗಂಗೆ ಶಾನುಭಾಗ್, ಕೆಎಂಸಿಯ ಅಕ್ಯುಪೇಶನ್ ಥೆರಪಿಸ್ಟ್ ಡಾಕ್ಟರ್ ಕೇಶವ ರಾಮ್, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಅಸಿಸ್ಟೆಂಟ್ ಮಾರ್ಕೆಟಿಂಗ್ ಮ್ಯಾನೇಜರ್ ತಂಝೀಮ್ ಶಿರ್ವ ಉಪಸ್ಥಿತರಿದ್ದರು.

 

ಕಾರ್ಯಕ್ರಮವನ್ನು ಬಿ.ಆರ್. ಪಿ ಮೀನಾ ಸ್ವಾಗತಿಸಿ, ಬಿ ಆರ್ ಪಿ ಉಷಾ ವಂದಿಸಿದರು.

ಮ.ಬಿ.ಆರ್.ಪಿ ಸುನಿತಾ ರವರು ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

18 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

18 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

19 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

19 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

19 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

19 hours ago