ಕುಂದಾಪುರ : ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ತೆರವುಗೊಳಿಸುವಂತೆ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ಹಕ್ಕೊತ್ತಾಯ ಸಭೆ ನಡೆಯಿತು.
ಕುಂದಾಪುರದ ಹೋಟೆಲ್ ಶರೋನ್‍ನಲ್ಲಿ ನಡೆದ ವರ್ತಕರು, ನಾಗರಿಕರ ಹಕ್ಕೊತ್ತಾಯ ಸಭೆಯಲ್ಲಿ ಮುಖಂಡ ಬಿ.ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಸದ್ಯ 1.4% ಪಾಸಿಟಿವಿಟಿ ಪ್ರಮಾಣ ಇರುವಾಗ ವೀಕೆಂಡ್ ಕರ್ಪ್ಯೂ ಹೇರಿರುವುದು ಅವೈಜ್ಞಾನಿಕ ಕ್ರಮವಾಗಿದೆ.
ಉಡುಪಿ ಜಿಲ್ಲೆಯ ದೊಡ್ಡ ಸಂತೆಯಾಗಿರುವ ಕುಂದಾಪುರ ಸಂತೆ ಶನಿವಾರ ನಡೆಯುವುದರಿಂದ ವೀಕೆಂಡ್ ಕರ್ಪ್ಯೂವಿನಿಂದ ರೈತರು, ವ್ಯಾಪಾರಸ್ಥರು, ಸಾರ್ವಜನಿಕರಿಗೆ ಸಮಸ್ಯೆಯಾಗುತ್ತದೆ.
ಈ ಸಂದರ್ಭದಲ್ಲಿ ವೀಕೆಂಡ್ ಕರ್ಪ್ಯೂ ಅಪ್ರಸ್ತುತ. ಅದೂ ಅಲ್ಲದೇ ಕುಂದಾಪುರದ ಮಟ್ಟಿಗೆ ಶನಿವಾರ ವಾರದಲ್ಲಿ ಅತ್ಯಂತ ಪ್ರಮುಖವಾದ ದಿನವಾಗಿದೆ. ಕುಂದಾಪುರ ಸಂತೆಗೆ ಬೈಂದೂರು, ಹೆಬ್ರಿ, ಬ್ರಹ್ಮಾವರ ತಾಲೂಕುಗಳಿಂದ ರೈತರು, ಸಾರ್ವಜನಿಕರು ಬರುತ್ತಾರೆ. ನಗರದಲ್ಲಿ ವಾರವಿಡೀ ನಡೆಯುವ ವಹಿವಾಟು ಶನಿವಾರ ಒಂದೇ ದಿನ ನಡೆಯುತ್ತದೆ. ವೀಕೆಂಡ್ ಕರ್ಪ್ಯೂ ನಿಂದ ರೈತರು, ವ್ಯಾಪಾರಸ್ಥರು, ವರ್ತಕರು ಸಾರ್ವಜನಿಕರಿಗೆ ತೊಂದರೆಯಾಗುವುದರಿಂದ ಇದನ್ನು ಕೈಬಿಟ್ಟು, ಕೋವಿಡ್ ನಿಯಂತ್ರಣಕ್ಕೆ ಪರ್ಯಾಯ ಕ್ರಮವನ್ನು ಕೈಗೊಳ್ಳುವುದು ಸೂಕ್ತ ಎಂದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…