ಉಡುಪಿ : ವೃದ್ಧೆಯೊಬ್ಬರ ಆರೈಕೆಗಾಗಿ ನಿಯೋಜನೆಗೊಂಡಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ಬಡಗುಬೆಟ್ಟುವಿನ ಪ್ರಸಾದ್ (57) ಎಂಬುವರು 15 ದಿನಗಳ ಹಿಂದೆ ಉಡುಪಿಯಲ್ಲಿನ ಹೆಲ್ತ್ ಕೇರ್ ಸರ್ವಿಸ್ ಮೂಲಕ ಹೋಮ್ ನರ್ಸ್ ಸಿದ್ದಪ್ಪ ಕೆ ಕೋಡ್ಲಿ ಅವರನ್ನು ತಮ್ಮ ತಂದೆಯ ಆರೈಕೆಗಾಗಿ ನೇಮಿಸಿಕೊಂಡಿದ್ದರು.
ನ. 17 ರಂದು, ಬೆಳಿಗ್ಗೆ 9:15 ರಿಂದ ಮಧ್ಯಾಹ್ನ 1:15 ರ ನಡುವೆ, ಸಿದ್ದಪ್ಪ ಅವರು ಮನೆಯ ಹಾಲ್‌ನ ಗಾಜಿನ ರ‍್ಯಾಕ್‌ನಲ್ಲಿ ಇರಿಸಲಾಗಿದ್ದ ಅಂದಾಜು 43,800 ಮೌಲ್ಯದ 6 ಗ್ರಾಂ ವಜ್ರದ ಕಿವಿಯೋಲೆಯನ್ನು ಕದ್ದಿದ್ದಾರೆ. ಜೊತೆಗೆ ಮಲಗುವ ಕೋಣೆಯಲ್ಲಿದ್ದ ರಹಸ್ಯ ಲಾಕರ್‌ನಿಂದ 31,17,100 ಮೌಲ್ಯದ ಚಿನ್ನಾಭರಣ ಹಾಗೂ ವಜ್ರಾಭರಣಗಳನ್ನು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಕಳುವಾದ ವಸ್ತುಗಳ ಒಟ್ಟು ತೂಕ 427 ಗ್ರಾಂ ಎಂದು ಅಂದಾಜಿಸಲಾಗಿದೆ.
ಪ್ರಸಾದ್ ರವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿ ಪತ್ತೆಗೆ ಹುಡುಕಾಟ ಆರಂಭಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…