ಉಡುಪಿ

ಉಡುಪಿ: ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು ಪ್ರಕರಣ : ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಆದೇಶ -Vishwanews24

ಉಡುಪಿ: ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು ಪ್ರಕರಣ : ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಆದೇಶ -Vishwanews24

ಉಡುಪಿ,: ಅಲ್ಪಾವಧಿಯ ಅನಾರೋಗ್ಯದಿಂದ ಬಳಲುತ್ತಿದ್ದು ಸಾವನ್ನಪ್ಪಿದ 26 ವರ್ಷದ ಮಹಿಳೆಯ ಸಾವಿನ ಕುರಿತಾಗಿ ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಜಿ ಜಗದೀಶ್‌ ಅವರು ಆದೇಶಿಸಿದ್ದಾರೆ.

ಈ ಬಗ್ಗೆ ತನಿಖೆಗೆ ಡಿಎಚ್‌ಒ ನೇತೃತ್ವದ ಸಮಿತಿ ರಚಿಸಲಾಗಿದ್ದು ನಾಲ್ಕು ದಿನಗಳಲ್ಲಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಅಲ್ಪಾವಧಿಯ ಅನಾರೋಗ್ಯದಿಂದ ಬಳಲುತ್ತಿದ್ದ 26 ವರ್ಷದ ರಕ್ಷಾ ಎಂಬ ಮಹಿಳೆ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮಹಿಳೆಯ ಕುಟುಂಬ ಸದಸ್ಯರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

“ವೈದ್ಯರು ಇಂಜೆಕ್ಷನ್ ನೀಡಿದ ನಂತರ ರಕ್ಷಾ ಪ್ರಜ್ಞೆ ಕಳೆದುಕೊಂಡರು. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ. ಆಸ್ಪತ್ರೆಯ ಅಧಿಕಾರಿಗಳು ರಕ್ಷಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಹೇಳುವ ಮೂಲಕ ಸತ್ಯವನ್ನು ಮರೆಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷರೂ ಆಗಿರುವ ರಕ್ಷಾ ಅವರ ಪತಿ ಶಿವಪ್ರಸಾದ್, ಸ್ಥಳೀಯರು ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಅವರು ಆರೋಪಿಸಿ ಈ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿದ್ದರು.

ಇದೀಗ ಈ ಪ್ರಕರಣದ ತನಿಖೆಯನ್ನು ನಡೆಸಿ ನಾಲ್ಕು ದಿನಗಳಲ್ಲಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಜಿ ಜಗದೀಶ್‌ ಅವರು ಆದೇಶಿಸಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

16 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

16 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

16 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

16 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

16 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

16 hours ago