ಉಡುಪಿ

ಉಡುಪಿ: -ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು : ಕುಟುಂಬಸ್ಥರ ಆರೋಪ -Vishwanews24

ಉಡುಪಿ: -ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು : ಕುಟುಂಬಸ್ಥರ ಆರೋಪ -Vishwanews24

ಉಡುಪಿ: ಆಸ್ಪತ್ರೆಗೆ ತಲೆ ನೋವಿನಿಂದ ದಾಖಲಾಗಿದ್ದ ಮಹಿಳೆಯೋರ್ವರು ವೈದ್ಯರ ನಿರ್ಲಕ್ಷ್ಯದಿಂದ ಮೃತರಾಗಿದ್ದು ಈ ಕುರಿತು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ತಾಲೂಕಿನ ಇಂದಿರಾ ನಗರದ ಶಿವಪ್ರಸಾದ್ ಎಂಬವರ ಪತ್ನಿ ರಕ್ಷಾ ಎರಡು ಮೂರು ದಿನ ಅನಾರೋಗ್ಯದಿಂದ ಬಳಲುತ್ತಿದ್ದರು. ಆಗಸ್ಟ್ 21 ರ ಬೆಳಿಗ್ಗೆ ಯುವತಿಯನ್ನು ಚಿಕಿತ್ಸೆಗಾಗಿ ಮಿಷನ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಬಳಿಕ ಮನೆಗೆ ವಾಪಾಸ್‌ ಕರೆತರಲಾಗಿತ್ತು. ಆದರೆ, ಬೆಳಿಗ್ಗೆ 9 ಗಂಟೆ ಸುಮಾರಿಗೆ ಆಕೆಯನ್ನು ಮನೆಯವರು ಕರೆದಾಗ ಆಕೆ ಯಾವುದೇ ಸ್ಪಂದನೆ ನೀಡಿಲ್ಲ. ತಕ್ಷಣ ಆಕೆಯನ್ನು ಮಿಷನ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಬಳಿಕ ಆದರ್ಶ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಅಷ್ಟರಲ್ಲಿ ಆಸ್ಪತ್ರೆಯ ವೈದ್ಯರು ಆಕೆ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ ಎಂದು ಹೇಳಲಾಗಿದೆ.

ಯುವತಿ ಒಮ್ಮೆಲ್ಲೇ ಸಾವನ್ನಪ್ಪಲು ಮಿಷನ್ ಆಸ್ಪತ್ರೆಯಲ್ಲಿನ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ರಕ್ಷಾ ಅವರ ಕುಟುಂಬ ಸದಸ್ಯರು ದೂರಿದ್ದಾರೆ.

“ವೈದ್ಯರು ಇಂಜೆಕ್ಷನ್ ನೀಡಿದ ನಂತರ ರಕ್ಷಾ ಪ್ರಜ್ಞೆ ಕಳೆದುಕೊಂಡರು. ಆದರೆ, ನಾವು ಮತ್ತೆ ಆಸ್ಪತ್ರೆಗೆ ತೆರಳಿ ಈ ಇಂಜೆಕ್ಷನ್ ಬಗ್ಗೆ ಕೇಳಿದಾಗ, ಆಸ್ಪತ್ರೆಯ ಅಧಿಕಾರಿಗಳು ಸಂಬಂಧಪಟ್ಟ ವೈದ್ಯರು ಇಲ್ಲ ಎಂದು ಹೇಳಿದ್ದಾರೆ. ಆದರ್ಶ ಆಸ್ಪತ್ರೆಯಲ್ಲಿ ರಕ್ಷಾ ಸಾವನ್ನಪ್ಪಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ ” ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.

ಸ್ಥಳೀಯ ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷರೂ ಆಗಿರುವ ರಕ್ಷಾ ಅವರ ಪತಿ ಶಿವಪ್ರಸಾದ್, ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಈ ಪ್ರಕರಣದ ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಇನ್ನು ರಕ್ಷಾ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು ಎಂದು ಹೇಳಲಾಗಿದೆ. ಆದರೆ ರ್‍ಯಾಪಿಡ್‌ ಆಂಟಿಜನ್‌ ಟೆಸ್ಟ್‌ನಲ್ಲಿ ನೆಗೆಟಿವ್‌ ಆಗಿತ್ತು ಎಂದು ಕೂಡಾ ಹೇಳಲಾಗಿದೆ. ಹಾಗೆಯೇ ಮೃತ ದೇಹದ ಅಂತಿಮ ಸಂಸ್ಕಾರದ ವಿಚಾರದಲ್ಲಿ ಗೊಂದಲಗಳು ಉಂಟಾಗಿದೆ ಎಂದು ವರದಿಯಾಗಿದೆ.

ಸ್ಥಳೀಯರು ಮತ್ತು ಮೃತರ ಕುಟುಂಬ ಸದಸ್ಯರು ಅಜ್ಜರಕಾಡು ಜಿಲ್ಲಾ ಶವಗಾರಕ್ಕೆ ಆಗಮಿಸಿ ರಕ್ಷಾ ಅವರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. “ಆಸ್ಪತ್ರೆಯ ಅಧಿಕಾರಿಗಳು ರಕ್ಷಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಹೇಳುವ ಮೂಲಕ ಸತ್ಯವನ್ನು ಮರೆಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಹಾಗೆಯೇ ಈ ಬಗ್ಗೆ ತನಿಖೆ ನಡೆಸಬೇಕು ಹಾಗೂ ಚುಚ್ಚುಮದ್ದು ನೀಡಿದ ವೈದ್ಯರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ರಕ್ಷಾ ಅವರು ಇಂಧಿರಾನಗರದ ನಿವಾಸಿಯಾಗಿದ್ದು ಪತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago