ಉಡುಪಿ: ಅದಮಾರು ಪರ್ಯಾಯೋತ್ಸವದ ಪ್ರಥಮ ಹೊರೆಕಾಣಿಕೆ ಬುಧವಾರ ಆಗಮಿಸಿತು. ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ಮಲ್ಪೆಯ ಭಜನಾ ಮಂದಿರಗಳು, ಸಂಘ ಸಂಸ್ಥೆಗಳು, ಅದಮಾರು ವಲಯ ಭಕ್ತವೃಂದ, ಮಟ್ಟುಗುಳ್ಳ ಬೆಳೆಗಾರರ ಸಂಘದಿಂದ ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ ವೈಭವದಿಂದ ನೆರವೇರಿತು.
ಭಾವಿ ಪರ್ಯಾಯ ಪೀಠಾಧಿಪತಿ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಮಲ್ಪೆ ಬಂದರಿನಲ್ಲಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ನೂರಾರು ಟೆಂಪೋ ಸಹಿತ ವಾಹನಗಳೊಂದಿಗೆ ಮೆರವಣಿಗೆ ಮಲ್ಪೆಯಿಂದ ಜೋಡುಕಟ್ಟೆ, ಕೋರ್ಟ್ ರಸ್ತೆ , ಕೆ.ಎಂ. ಮಾರ್ಗ ಸಂಸ್ಕೃತ ಕಾಲೇಜು ಮಾರ್ಗವಾಗಿ ಹೊರೆಕಾಣಿಕೆ ಸಾಗಿತು.
ವಿವಿಧ ಭಜನಾ ಸಂಘಟನೆ ಮಹಿಳೆಯರು ಸಾಥ್ ನೀಡಿದರು. ಮಲ್ಪೆಯಿಂದ ಸುಮಾರು 10 ಟನ್ ಅಕ್ಕಿ, 3 ಟನ್ ಬೆಲ್ಲ, 5 ಸಾವಿರ ತೆಂಗಿನಕಾಯಿ, ದವಸ ಧಾನ್ಯಗಳು ಹರಿದು ಬಂದಿವೆ. ಮಟ್ಟುಗುಳ್ಳ ಬೆಳೆಗಾರರು ದೋಣಿ ಆಕಾರದ ಗಾಡಿಯಲ್ಲಿ ಮಟ್ಟುಗುಳ್ಳ ತುಂಬಿಸಿ ಮೆರವಣಿಗೆ ನಡೆಸಿದರು. ತಲೆ ಮೇಲೆ ಮಟ್ಟುಗುಳ್ಳ ಬುಟ್ಟಿ ಹೊತ್ತುಕೊಂಡು ಸಾಂಪ್ರದಾಯಿಕವಾಗಿ ಸಾಗಿಬಂದರು.
ಅದಮಾರು ಗ್ರಾಮ ಭಕ್ತ ವೃಂದ ವತಿಯಿಂದಲೂ 10 ಟನ್ ಅಕ್ಕಿ, ದವಸ, ಧಾನ್ಯ, ಬೆಳೆ, ಕಾಳು ಸಮರ್ಪಿಸಲಾಯಿತು. ಶಾಸಕ ಕೆ.ರಘುಪತಿ ಭಟ್, ನಾಡೋಜ ಡಾ.ಜಿ.ಶಂಕರ್, ಹೊರೆಕಾಣಿಕೆ ಉಸ್ತುವಾರಿಯಾಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಎಸ್. ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ವಿನಯ ಕರ್ಕೇರ, ಹಸಿ ಮೀನು ಮಾರಾಟಗಾರರ ಸಂಘದ ಅಧ್ಯಕ್ಷೆ ಬೇಬಿ ಎಚ್. ಸಾಲ್ಯಾನ್, ಮಹಿಳಾ ಮೀನುಗಾರರ ಸಂಘದ ಅಧ್ಯಕ್ಷೆ ಜಲಜಾ ಕೋಟ್ಯಾನ್ ಮೊದಲಾದವರಿದ್ದರು.
ಮೀನುಗಾರರು ಶ್ರಮಜೀವಿಗಳು ಹಾಗೂ ಛಲಗಾರರು. ಮಲ್ಪೆ ಹಾಗೂ ಶ್ರೀಕೃಷ್ಣನಿಗೆ ಅನೋನ್ಯ ಸಂಬಂಧವಿದೆ. ಮೀನುಗಾರರು ಕೃಷ್ಣನ ಸೇವೆಗೆ ಸದಾ ಕಾರ್ಯಪ್ರವೃತ್ತರಾಗುತ್ತಾರೆ. ಎಲ್ಲರೂ ಒಳ್ಳೆಯ ಗುಣಗಳನ್ನು ಸ್ವೀಕರಿಸಿ ಭಗವಂತನ ಕೃಪೆಗೆ ಪಾತ್ರರಾಗಬೇಕು.
– ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…