ಉಡುಪಿ: ವೈಭವದಿಂದ ನೆರವೇರಿತು ಅದಮಾರು ಪರ್ಯಾಯೋತ್ಸವದ ಪ್ರಥಮ ದಿನದ ಹೊರೆಕಾಣಿಕೆ ಮೆರವಣಿಗೆ-Vishwanews24

ಉಡುಪಿ: ಅದಮಾರು ಪರ್ಯಾಯೋತ್ಸವದ ಪ್ರಥಮ ಹೊರೆಕಾಣಿಕೆ ಬುಧವಾರ ಆಗಮಿಸಿತು. ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ಮಲ್ಪೆಯ ಭಜನಾ ಮಂದಿರಗಳು, ಸಂಘ ಸಂಸ್ಥೆಗಳು, ಅದಮಾರು ವಲಯ ಭಕ್ತವೃಂದ, ಮಟ್ಟುಗುಳ್ಳ ಬೆಳೆಗಾರರ ಸಂಘದಿಂದ ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ ವೈಭವದಿಂದ ನೆರವೇರಿತು.

ಭಾವಿ ಪರ್ಯಾಯ ಪೀಠಾಧಿಪತಿ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಮಲ್ಪೆ ಬಂದರಿನಲ್ಲಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ನೂರಾರು ಟೆಂಪೋ ಸಹಿತ ವಾಹನಗಳೊಂದಿಗೆ ಮೆರವಣಿಗೆ ಮಲ್ಪೆಯಿಂದ ಜೋಡುಕಟ್ಟೆ, ಕೋರ್ಟ್ ರಸ್ತೆ , ಕೆ.ಎಂ. ಮಾರ್ಗ ಸಂಸ್ಕೃತ ಕಾಲೇಜು ಮಾರ್ಗವಾಗಿ ಹೊರೆಕಾಣಿಕೆ ಸಾಗಿತು.

ವಿವಿಧ ಭಜನಾ ಸಂಘಟನೆ ಮಹಿಳೆಯರು ಸಾಥ್ ನೀಡಿದರು. ಮಲ್ಪೆಯಿಂದ ಸುಮಾರು 10 ಟನ್ ಅಕ್ಕಿ, 3 ಟನ್ ಬೆಲ್ಲ, 5 ಸಾವಿರ ತೆಂಗಿನಕಾಯಿ, ದವಸ ಧಾನ್ಯಗಳು ಹರಿದು ಬಂದಿವೆ. ಮಟ್ಟುಗುಳ್ಳ ಬೆಳೆಗಾರರು ದೋಣಿ ಆಕಾರದ ಗಾಡಿಯಲ್ಲಿ ಮಟ್ಟುಗುಳ್ಳ ತುಂಬಿಸಿ ಮೆರವಣಿಗೆ ನಡೆಸಿದರು. ತಲೆ ಮೇಲೆ ಮಟ್ಟುಗುಳ್ಳ ಬುಟ್ಟಿ ಹೊತ್ತುಕೊಂಡು ಸಾಂಪ್ರದಾಯಿಕವಾಗಿ ಸಾಗಿಬಂದರು.

ಅದಮಾರು ಗ್ರಾಮ ಭಕ್ತ ವೃಂದ ವತಿಯಿಂದಲೂ 10 ಟನ್ ಅಕ್ಕಿ, ದವಸ, ಧಾನ್ಯ, ಬೆಳೆ, ಕಾಳು ಸಮರ್ಪಿಸಲಾಯಿತು. ಶಾಸಕ ಕೆ.ರಘುಪತಿ ಭಟ್, ನಾಡೋಜ ಡಾ.ಜಿ.ಶಂಕರ್, ಹೊರೆಕಾಣಿಕೆ ಉಸ್ತುವಾರಿಯಾಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಎಸ್. ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ವಿನಯ ಕರ್ಕೇರ, ಹಸಿ ಮೀನು ಮಾರಾಟಗಾರರ ಸಂಘದ ಅಧ್ಯಕ್ಷೆ ಬೇಬಿ ಎಚ್. ಸಾಲ್ಯಾನ್, ಮಹಿಳಾ ಮೀನುಗಾರರ ಸಂಘದ ಅಧ್ಯಕ್ಷೆ ಜಲಜಾ ಕೋಟ್ಯಾನ್ ಮೊದಲಾದವರಿದ್ದರು.

ಮೀನುಗಾರರು ಶ್ರಮಜೀವಿಗಳು ಹಾಗೂ ಛಲಗಾರರು. ಮಲ್ಪೆ ಹಾಗೂ ಶ್ರೀಕೃಷ್ಣನಿಗೆ ಅನೋನ್ಯ ಸಂಬಂಧವಿದೆ. ಮೀನುಗಾರರು ಕೃಷ್ಣನ ಸೇವೆಗೆ ಸದಾ ಕಾರ್ಯಪ್ರವೃತ್ತರಾಗುತ್ತಾರೆ. ಎಲ್ಲರೂ ಒಳ್ಳೆಯ ಗುಣಗಳನ್ನು ಸ್ವೀಕರಿಸಿ ಭಗವಂತನ ಕೃಪೆಗೆ ಪಾತ್ರರಾಗಬೇಕು.
– ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

12 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

12 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago