Featured

ಉಡುಪಿ: ವ್ಯಕ್ತಿಯನ್ನು 30 ವರ್ಷದಿಂದ ಜೀತಕ್ಕೆ ಇರಿಸಿಕೊಂಡಿದ್ದ ಮಹಿಳೆಯ ಬಂಧನ – vishwanews24

ಉಡುಪಿ: 30 ವರ್ಷಗಳಿಂದ ಪರಿಶಿಷ್ಟ ಪಂಗಡ ಸಮುದಾಯದ ವ್ಯಕ್ತಿಯನ್ನು ಜೀತದಾಳಾಗಿ ಇಟ್ಟುಕೊಂಡು ದೌರ್ಜನ್ಯ ಆರೋಪ : ಮಹಿಳೆ ಬಂಧನ

ಉಡುಪಿ: ತಾಲೂಕಿನ ಕನ್ಯಾನ ಗ್ರಾಮದ ಕಬ್ಬೈಲು ಪ್ರದೇಶದಲ್ಲಿ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಸುಮಾರು 30 ವರ್ಷಗಳ ಕಾಲ ಜೀತದಾಳಾಗಿ ಕೆಲಸ ಮಾಡಿಸಿಕೊಂಡಿರುವ ಆರೋಪದ ಮೇಲೆ ಮಹಿಳೆಯನ್ನು ಬಂಧಿಸಲಾಗಿದೆ.

65 ವಯಸ್ಸಿನ ಸಂತ್ರಸ್ತ ವ್ಯಕ್ತಿ ಪರಿಶಿಷ್ಟ ಪಂಗಡ (ಕೊರಗ) ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇವರನ್ನು ಸುಮಾರು 30 ವರ್ಷಗಳ ಹಿಂದೆ ಕುಂದಾಪುರದ ಹೆಮ್ಮಾಡಿ ಸಮೀಪದ ಕಬ್ಬೈಲು ನಿವಾಸಿ ಸುಬ್ಬಣ್ಣ ಶೆಟ್ಟಿ ಅವರು ಮನೆ ಕೆಲಸಕ್ಕೆ ಇಟ್ಟುಕೊಂಡಿದ್ದರು. ಸುಬ್ಬಣ್ಣ ಶೆಟ್ಟಿ ಅವರು ಮೃತಪಟ್ಟ ಬಳಿಕ ಅವರ ಮಗಳು ರಜನಿ ಶೆಟ್ಟಿ ಮತ್ತು ಅಳಿಯ ಕರುಣಾಕರ ಶೆಟ್ಟಿ ಅವರು ಆ ವ್ಯಕ್ತಿಯನ್ನು ಮನೆಯ ದನ ಕಾಯುವುದು, ತೋಟದ ಕೆಲಸ ಸೇರಿದಂತೆ ವಿವಿಧ ಕೆಲಸಗಳಿಗೆ ಬಳಸಿಕೊಂಡಿದ್ದಾರೆ.

ಇದನ್ನೂ ಓದಿ:

ಸಂತ್ರಸ್ತ ವ್ಯಕ್ತಿಯಿಂದ ದನ-ಎಮ್ಮೆ ನೋಡಿಕೊಳ್ಳುವುದು, ಸಗಣಿ ತೆಗೆದು ಗದ್ದೆ ಕೆಲಸ ಮಾಡುವುದು ಹಾಗೂ ಮನೆಯ ಶೌಚಾಲಯ ಸ್ವಚ್ಛತೆ ಮಾಡಿಸುವ ಕೆಲಸ ಮಾಡಿಸಲಾಗುತ್ತಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ಇವರನ್ನು ಸುಮಾರು 30 ವರ್ಷಗಳಿಂದ ಬಲವಂತವಾಗಿ ಜೀತದಾಳಾಗಿ ಕೆಲಸ ಮಾಡಿಸಿಕೊಂಡು ಸರಿಯಾದ ಕೂಲಿ ನೀಡದೆ, ಮೂಲಭೂತ ಸೌಕರ್ಯಗಳನ್ನೂ ಒದಗಿಸದೆ ದನದ ಕೊಟ್ಟಿಗೆಯಲ್ಲೇ ಮಲಗಲು ಒತ್ತಾಯಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಅಲ್ಲದೇ, ಸಂಬಳ ನೀಡದೆ ಮನೆಯಿಂದ ಹೊರಗೆ ಹೋಗಲು ಬಿಡದೆ ದೌರ್ಜನ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ನಡೆಸಿದ ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಹೆಚ್.ಡಿ. ಕುಲಕರ್ಣಿ ಅವರು ಆರೋಪಿ ರಜನಿ ಶೆಟ್ಟಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

22 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

22 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

23 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago