Featured

ಉಡುಪಿ: ಶರಣಾಗತಿ ನಿಮಗಿರುವ ಒಂದೇ ಒಂದು ದಾರಿ : ನಕ್ಸಲರಿಗೆ ಡಿಜಿಪಿ ಪ್ರಣಬ್ ಮೊಹಂತಿ ಎಚ್ಚರಿಕೆ – vishwanews24

ಉಡುಪಿ: ಶರಣಾಗದಿದ್ದರೆ ಕಾರ್ಯಾಚರಣೆ ಹೊರತು ನಮಗೆ ಬೇರೆ ದಾರಿಯಿಲ್ಲ : ನಕ್ಸಲರಿಗೆ ಡಿಜಿಪಿ ಪ್ರಣಬ್ ಮೊಹಂತಿ ಎಚ್ಚರಿಕೆ

ಉಡುಪಿ: ಶರಣಾಗತಿಯೊಂದೇ ನಿಮಗಿರುವ ಒಂದೇ ಒಂದು ದಾರಿ ಎಂಬ ಸಂದೇಶವನ್ನು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ  ಅವರು ಕಾಡಿನಲ್ಲಿ ಅವಿತಿರುವ ನಕ್ಸಲರಿಗೆ ರವಾನಿಸಿದ್ದಾರೆ.

ಎನ್‌ಕೌಂಟರ್ ಸ್ಥಳಕ್ಕೆ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ಭೇಟಿ ನೀಡಿ, ಘಟನೆ ಬಗ್ಗೆ ಪೂರ್ಣ ಮಾಹಿತಿ ಪಡೆದರು. ಶರಣಾಗತಿಯೊಂದೇ ನಿಮಗಿರುವ ಒಂದೇ ಒಂದು ದಾರಿ. ಶರಣಾಗದಿದ್ದರೆ ಕಾರ್ಯಾಚರಣೆ ಹೊರತು ನಮಗೆ ಬೇರೆ ದಾರಿಯಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಡಿಜಿಪಿ ಭೇಟಿ ಬೆನ್ನಲ್ಲೇ ಕೂಂಬಿಂಗ್ ಚುರುಕುಗೊಂಡಿದೆ. ಪೀತಬೈಲ್, ಕಬ್ಬಿನಾಲೆ ಬಚ್ಚಪ್ಪು ಪರಿಸರದಲ್ಲಿ ಓಡಾಟ ನಡೆಸಿ ಎಎನ್‌ಎಫ್ ಕ್ಯಾಂಪ್‌ಗೆ ಭೇಟಿಕೊಟ್ಟು ಕೆಲ ಸೂಚನೆ ನೀಡಿರುವ ನೀಡಿದ್ದಾರೆ.

ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಗೌಡ  ಎನ್‌ಕೌಂಟರ್ ಪ್ರಕರಣಣಕ್ಕೆ ಸಂಬಂಧಿಸಿದಂತೆ ಕಬ್ಬಿನಾಲೆ ಅರಣ್ಯ ಪ್ರದೇಶ ವ್ಯಾಪ್ತಿಯ ಪೀತಬೈಲು ಘಟನಾ ಸ್ಥಳದಲ್ಲಿ ದಾಖಲೆ ಸಂಗ್ರಹ ಮಾಡುವ ಸಲುವಾಗಿ ಎಎನ್‌ಎಫ್ ಬೆಂಗಳೂರಿನಿಂದ ತಜ್ಞ ವಿಧಿ ವಿಜ್ಞಾನ ಪ್ರಯೋಗಾಲಯ(ಎಫ್‌ಎಸ್‌ಎಲ್) ಅಧಿಕಾರಿಗಳನ್ನು ಕರೆಸಿಕೊಂಡಿದೆ.

ಪೀತಬೈಲು ಘಟನಾ ಸ್ಥಳದಲ್ಲಿರುವ ಎಲ್ಲಾ ಮಹತ್ವದ ದಾಖಲೆಗಳನ್ನು ಎಫ್‌ಎಸ್‌ಎಲ್ ತಂಡ ಪರಿಶೀಲಿಸುತ್ತಿದೆ. ಎನ್‌ಕೌಂಟರ್ ಪ್ರಕರಣದಲ್ಲಿ ಖಚಿತ ದಾಖಲೆ ಸಂಗ್ರಹ ಮತ್ತು ಸಾಕ್ಷ್ಯಾಧಾರ ಹೋಲಿಕೆಗಾಗಿ ಎರಡು ಬಾರಿ ಎಫ್‌ಎಸ್‌ಎಲ್ (FSL) ತಂಡದಿಂದ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

17 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

17 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

17 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

20 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

20 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

21 hours ago