Featured

ಉಡುಪಿ: ಶರಣಾದ ನಕ್ಸಲ್​ ತೊಂಬಟ್ಟು ಲಕ್ಷ್ಮೀಗೆ ವೈದ್ಯಕೀಯ ಪರೀಕ್ಷೆ, ನ್ಯಾಯಾಂಗ ಬಂಧನ – vishwanews24

ಶರಣಾದ ನಕ್ಸಲ್​ ತೊಂಬಟ್ಟು ಲಕ್ಷ್ಮೀಗೆ ವೈದ್ಯಕೀಯ ಪರೀಕ್ಷೆ, ನ್ಯಾಯಾಂಗ ಬಂಧನ

ಲಕ್ಷ್ಮೀ ಪ್ರಸ್ತುತ ಆಂಧ್ರಪ್ರದೇಶದಲ್ಲಿ ನೆಲೆಸಿದ್ದ ಕುಂದಾಪುರ ಮೂಲದವಳು

ಉಡುಪಿ: ಲಕ್ಷ್ಮೀ 2006ರಿಂದ ಕಣ್ಮರೆಯಾಗಿದ್ದು, ಆಕೆಯ ವಿರುದ್ಧ ಅಂದಿನ ಶಂಕರನಾರಾಯಣ (ಇಂದಿನ ಅಮಾಸೆಬೈಲು) ಠಾಣೆಯಲ್ಲಿ 2007ರಲ್ಲಿ ಗುಂಡಿನ ದಾಳಿ ನಡೆಸಿದ್ದು, ಹಲ್ಲೆ ಮಾಡಿ, ಬೆದರಿಕೆ ಹಾಕಿದ್ದು ಹಾಗೂ ಭಿತ್ತಿಪತ್ರ, ಕರಪತ್ರಗಳನ್ನು ಅಂಟಿಸಿದ ಒಟ್ಟು 3 ಪ್ರಕರಣಗಳು ದಾಖಲಾಗಿವೆ ಎಂದು ಅವರು ವಿಚಾರಣೆ ಬಾಕಿ ಇವೆ. ಆಕೆ ನೆಲೆಸಿರುವ ಆಂಧ್ರಪ್ರದೇಶದಲ್ಲಿ ಯಾವುದೇ ಪ್ರಕರಣಗಳಿಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಸ್‌ಪಿ ಡಾ| ಅರುಣ್‌ ತಿಳಿಸಿದ್ದಾರೆ.

ಶರಣಾಗತಿ ಪ್ರಕ್ರಿಯೆಯ ವೇಳೆ ಎಸ್‌ಪಿ ಡಾ| ಕೆ. ಅರುಣ್‌, ಹೆಚ್ಚುವರಿ ಎಸ್ಪಿ ಎಸ್‌.ಟಿ. ಸಿದ್ಧಲಿಂಗಪ್ಪ, ಎಎನ್‌ಎಫ್ ಇನ್‌ಸ್ಪೆಕ್ಟರ್‌ ಸತೀಶ್‌ ಕಾನೂನು ಪ್ರಕ್ರಿಯೆ ಪೂರೈಸಿದರು. ಜಿ.ಪಂ. ಸಿಇಒ ಪ್ರತೀಕ್‌ ಬಾಯಲ್‌, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.

ವೈದ್ಯಕೀಯ ಪರೀಕ್ಷೆ
ಶರಣಾಗತಿ ಪ್ರಕ್ರಿಯೆ ಬಳಿಕ ಕುಂದಾಪುರ ಡಿವೈಎಸ್ಪಿ ಎಚ್‌.ಡಿ. ಕುಲಕರ್ಣಿ ನೇತೃತ್ವದ ಪೊಲೀಸ್‌ ತಂಡವು ಜಿಲ್ಲಾಸ್ಪತ್ರೆಯಲ್ಲಿ ಲಕ್ಷ್ಮೀಗೆ ವೈದ್ಯಕೀಯ ಪರೀಕ್ಷೆ ನಡೆಸಿ, ನ್ಯಾಯಾಧೀಶರ ಮನೆಯಲ್ಲಿ ಹಾಜರುಪಡಿಸಲಾಯಿತು. ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಫೆ. 3ರಂದು ವೀಡಿಯೋ ಕಾನ್ಫರೆನ್ಸ್‌ ಮೂಲಕ ಹಾಜರುಪಡಿಸುವಂತೆ ನ್ಯಾಯಾಧೀಶರು ತಿಳಿಸಿದರು.

ಸಮಸ್ಯೆ ಬಗ್ಗೆ ಗಮನ ಹರಿಸಲಾಗುವುದು: ಡಿ.ಸಿ.
ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಮಾತನಾಡಿ, ರಾಜ್ಯ ಸರಕಾರದ‌ ಆದೇಶದಂತೆ ಶರಣಾಗತಿ ಪ್ಯಾಕೇಜ್‌ ನೀಡಲಾಗುತ್ತಿದೆ. 3 ಕೆಟಗರಿಯಲ್ಲಿ ನಕ್ಸಲ್‌ ಶರಣಾಗತಿ ಪ್ಯಾಕೇಜ್‌ ಇದೆ. ಈಕೆ ನಮ್ಮ ರಾಜ್ಯದವಳಾಗಿದ್ದರಿಂದ ಎ ಶಿಫಾರಸು ಮಾಡಿದ್ದೇವೆ. ಪುನರ್ವಸತಿ ಹಾಗೂ ಕೌಶಲ ತರಬೇತಿ, ಶಿಕ್ಷಣ ನಡೆಸಲು ಅವಕಾಶ ಇದೆ. ಲಕ್ಷ್ಮಿಯ ಊರಿನ ಮೂಲಸೌಕರ್ಯಗಳ ಬಗ್ಗೆ ಗಮನಹರಿಸಲಾಗುವುದು ಎಂದರು.

Vishwa News 24

Recent Posts

ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು – vishwanews24

ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ…

1 hour ago

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್  ಘೋಷಣೆ – vishwanews24

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್  ಘೋಷಣೆ ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ…

1 hour ago

ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು “ಪಿಲಿಕೋಲ” – vishwanews24

ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂ­ದಾಗಿ ಕರಾ­ವಳಿ ಜಿಲ್ಲೆ­ಗಳು ಮಾತ್ರವಲ್ಲದೇ ದೇಶ-ವಿದೇ­ಶ­ಗ­ಳ­ಲ್ಲಿಯೂ…

2 hours ago

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: SDPI ಖಂಡನೆ -vishwanews24

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್‌ ಡಿ ಪಿ ಐ ಖಂಡನೆ…

3 hours ago

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂ. ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ – vishwanews24

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…

3 hours ago

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ – vishwanews24

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…

4 hours ago