Featured

ಉಡುಪಿ: ಶಾಂತಿ ಕದಡುವ ವಿಡಿಯೋ ವೈರಲ್ ಮಾಡಿದ ಆರೋಪ ; SPDI ಮುಖಂಡರ ವಿರುದ್ಧ ಪ್ರಕರಣ ದಾಖಲು – vishwanews24

ಉಡುಪಿ: ಶಾಂತಿ ಕದಡುವ ವಿಡಿಯೋ ವೈರಲ್ ಮಾಡಿದ ಆರೋಪ ; SPDI ಮುಖಂಡರ ವಿರುದ್ಧ ಪ್ರಕರಣ ದಾಖಲು

ಉಡುಪಿ: ಡಿ.10ರಂದು ಹಮ್ಮಿಕೊಳ್ಳಲಾದ ಬೆಳಗಾವಿ ಚಲೋ ಅಂಬೇಡ್ಕರ್ ಜಾಥಾ ಕಾರ್ಯಕ್ರಮಕ್ಕೆ ಸಂಬಂಧಿಸಿ ಪತ್ರಿಕಾಗೋಷ್ಠಿ ನಡೆಸಿ ಶಾಂತಿ ಕದಡುವ ವಿಡಿಯೋ ಮಾಡಿದ ಆರೋಪದಡಿ ಎಸ್ ಡಿ ಪಿ ಐ ಮುಖಂಡರ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಎಸ್ ಡಿಪಿಐ ಮುಖಂಡರಾದ ಭಾಸ್ಕರ ಪ್ರಸಾದ್, ಶಾಹೀದ್ ಅಲಿ, ಅಪ್ಸರ್ ಕೊಡ್ಲಿಪೇಟೆ, ರಿಯಾಝ್ ಕಡುಂಬು ಅವರು ಇಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ‘ನಾವು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಆನಮತಿ ಕೇಳಿಲ್ಲ, ಕೇವಲ ಮಾಹಿತಿಯನ್ನು ನೀಡಿದ್ದು, ಅವರು ಬಂದೋಬಸ್ತ್ ಕೊಡದೇ ಇದ್ದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತೇವೆʼ ಎಂದು ಶಾಂತಿ ಕದಡುವ ವಿಡಿಯೋ ವೈರಲ್ ಮಾಡಿರುವುದಾಗಿ ದೂರಲಾಗಿದೆ.

ಇವರು ಸಾರ್ವಜನಿಕವಾಗಿ ಹೇಳಿಕೆಯನ್ನು ನೀಡಿ ಶಾಂತಿ-ಸುವ್ಯವಸ್ಥೆಯನ್ನು ಭಂಗ ತರುವಂತೆ ಪತ್ರಿಕಾಗೋಷ್ಠಿಯ ವಿಡಿಯೋವನ್ನು ಹರಿ ಬಿಟ್ಟು ಸಾರ್ವಜನಿಕರಿಗೆ ಸುಳ್ಳು ಮಾಹಿತಿ ನೀಡಿ ಗಲಭೆ-ಗೊಂದಲ ಉಂಟು ಮಾಡುವಂತೆ ಮಾಡಲು ಪ್ರಚೋದನೆ ನೀಡಿರುವುದು ಕಂಡು ಬಂದಿದೆ ಎಂದು ದೂರದಲ್ಲಿ ತಿಳಿಸಲಾಗಿದೆ.

ಅದರಂತೆ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಉಪನಿರೀಕ್ಷಕ ನೀಡಿದ ದೂರಿನಂತೆ ಬಿಎನ್ ಎಸ್ ಯು/ಎಸ್ 189, 62, 353(2) ರಂತೆ ಪ್ರಕರಣ ದಾಖಲಿಸಲಾಗಿದೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

3 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

3 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

3 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

4 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

4 days ago