Featured

ಉಡುಪಿ  : ಶಾಖದ ಹೊಡೆತದಿಂದ ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ- ಸೂಚನೆಗಳು – vishwanews24

ಉಡುಪಿ  : ಶಾಖದ ಹೊಡೆತದಿಂದ ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳಲು ಸಲಹೆಸೂಚನೆಗಳು

  ಉಡುಪಿ : ಪ್ರಸ್ತುತ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ, ಹೀಟ್ ವೇವ್ (ಶಾಖದ ಹೊಡೆತ) / ಹೀಟ್ ವೇವ್ ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದ್ದು, ಹಿನ್ನೆಲೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಕೆಳಕಂಡ ಸಲಹೆಗಳನ್ನು ಪಾಲಿಸುವಂತೆ ಸೂಚನೆ ನೀಡಿದೆ

 ಅತೀ ಹೆಚ್ಚು ತಾಪಮಾನದಿಂದಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾರ್ವಜನಿಕರು ಸಾಧ್ಯವಾದಷ್ಟು ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಾದ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು. ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು

     ಹೊರಗಿನ ಉಷ್ಣತೆಯು ಹೆಚ್ಚಿರುವಾಗ ಅಂದರೆ ಮಧ್ಯಾಹ್ನ 12 ರಿಂದ 3 ವರೆಗೆ ಶ್ರಮದಾಯಕ ಚಟುವಟಿಕೆಗಳನ್ನು ಆದಷ್ಟು ತಪ್ಪಿಸಬೇಕು. ಪೂರ್ವಾಹ್ನ 11 ಗಂಟೆಯಿA ಸಂಜೆ 4 ಗಂಟೆಯ ಅವಧಿಯಲ್ಲಿ ಹೊರಾಂಗಣ ಸಭೆಗಳು, ಚಟುವಟಿಕೆಗಳು ನಡೆಯುವ ಪ್ರದೇಶದಲ್ಲಿ ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆಯನ್ನು ನೀಡಲು ಅಗತ್ಯ ಶಾಮಿಯಾನ/ಪೆಂಡಾಲ್ ವ್ಯವಸ್ಥೆ ಮಾಡಬೇಕು. ಉತ್ತಮ ಗಾಳಿಯಾಡುವ ವ್ಯವಸ್ಥೆ ಹಾಗೂ ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು. ಪ್ರಯಾಣಿಸುವಾಗ ನೀರನ್ನು ಜೊತೆಯಲ್ಲಿ ಕೊಂಡೊಯ್ಯಬೇಕು

   ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ ತಂಪು ಪಾನೀಯಗಳನ್ನು ಸೇವಿಸಬಾರದು. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸಬೇಕು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬಾರದು. ಮೂರ್ಛೆ ಅಥವಾ ಅನಾರೋಗ್ಯ ಅನಿಸಿದ್ದಲ್ಲಿ ತಕ್ಷಣ ವೈದ್ಯರನ್ನು ಭೇಟಿ ಮಾಡಿ ಸೂಕ್ತ ಚಿಕಿತ್ಸೆ ಪಡೆಯಬೇಕು

   ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು .ಆರ್.ಎಸ್ ಅನ್ನು ಬಳಸಬೇಕು. ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚಿನ ನೀರಿನ ಅಂಶವನ್ನು ಹೊಂದಿರುವ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್ ಹಣ್ಣುಗಳನ್ನು, ತರಕಾರಿ, ಸೊಪ್ಪು, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು. ಸಾಕು ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ, ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸಬೇಕು. ಮನೆಯನ್ನು ತಂಪಾಗಿರಿಸಲು ಪರದೆ, ಶಟರ್ ಅಥವಾ ಸನ್ಶೇಡ್ಗಳನ್ನು ಬಳಸಬೇಕು. ಹೊರಗೆ ತೆರಳುವಾಗ ನೀರಿನ ಬಾಟೆಲ್, ಛತ್ರಿ, ಟೋಪಿ ಅಥವಾ ಕ್ಯಾಪ್, ಹೆಡ್ ಕವರ್, ಹ್ಯಾಂಡ್ ಟವೆಲ್, ಹ್ಯಾಂಡ್ ಫ್ಯಾನ್, ಎಲೆಕ್ಟೊçÃಲೈಟ್, ಗ್ಲೂಕೋಸ್, .ಆರ್.ಎಸ್ ಅನ್ನು ಒಂಗೊAಡಿರುವ ಅತೀ ಹೆಚ್ಚು ತಾಪಮಾನವನ್ನು ತಡೆಗಟ್ಟುವ ಕಿಟ್ ಅನ್ನು ಒಯ್ಯುವಂತೆ ನಾಗರಿಕರನ್ನು ಪ್ರೋತ್ಸಾಹಿಸಬೇಕು. ನಾಗರಿಕರು ಅತೀ ಹೆಚ್ಚು ತಾಪಮಾನ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಆಗಿಂದಾಗ್ಗೆ ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು

   ಅತೀ ಹೆಚ್ಚು ತಾಪಮಾನದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು ಹಾಗೂ ಗುರುತಿಸುವಿಕೆ: ಅತೀ ಹೆಚ್ಚು ತಾಪಮಾನದಿಂದ ಸಾಮಾನ್ಯವಾಗಿ ಆರೋಗ್ಯದ ಮೇಲೆ ನಿರ್ಜಲೀಕರಣ, ಶಾಖ ಸೆಳೆತ, ಶಾಖದ ಬಳಲಿಕೆ ಮತ್ತು ಶಾಖದ ಆಘಾತದಂತಹ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು, ಅತೀ ಹೆಚ್ಚು ತಾಪಮಾನಕ್ಕೆ ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸಬೇಕು. ಒದ್ದೆಯಾದ ಬಟ್ಟೆಯಿಂದ ಮೈ ಒರೆಸಬೇಕು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕಬೇಕು. ನೀರು ಅಥವಾ ಪುನರ್ಜಲೀಕರಣ ಪಾನೀಯಗಳಾದ .ಆರ್.ಎಸ್, ನಿಂಬೆ ಪಾನಕ ನೀಡಬೇಕು. ವ್ಯಕ್ತಿಗೆ ತಂಪಾದ ಗಾಳಿಯ ವ್ಯವಸ್ಥೆ ಮಾಡಬೇಕು. ರೋಗ ಲಕ್ಷಣಗಳು ಉಲ್ಬಣಗೊಂಡಲ್ಲಿ ಅಥವಾ ದೀರ್ಘಕಾಲದವರೆಗೆ ಇದ್ದಲ್ಲಿ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಸಂಪರ್ಕಿಸಬೇಕು. ಸಂದರ್ಭದಲ್ಲಿ ಮದ್ಯಪಾನ, ಕಾಫಿ, ಶೇಖರಿಸಿದ ಪಾನೀಯಗಳನ್ನು ನೀಡಬಾರದು. ಅತೀ ಹೆಚ್ಚು ತಾಪಮಾನದಿಂದ ಬಳಲಿಕೆಗೆ ತುತ್ತಾದವರ ಮೇಲೆ ತಂಪಾದ ಒದ್ದೆ ಬಟ್ಟೆಯನ್ನು ಹಾಕುವ ಮೂಲಕ ವ್ಯಕ್ತಿಯನ್ನು ತಂಪಾಗಿರಿಸಬೇಕು. ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಳಿಸಬೇಕು. ಅತೀ ಹೆಚ್ಚು ತಾಪಮಾನದಿಂದ ಉದ್ಭವಿಸಬಹುದಾದದ ರೋಗಲಕ್ಷಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಆಗಿಂದಾಗ್ಗೆ ನೀಡುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

58 minutes ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

1 hour ago

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

2 hours ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

2 hours ago

ಉಡುಪಿ: ಬ್ಯಾಡ್ಮಿಂಟನ್‌ ತಾರೆ ಆಯುಷ್ ಶೆಟ್ಟಿಗೆ ಮುಖ್ಯಮಂತ್ರಿಯಿಂದ ಗೌರವಾರ್ಪಣೆ – vishwanews24

ಉಡುಪಿ: ಬ್ಯಾಡ್ಮಿಂಟನ್‌ ತಾರೆ ಕಾರ್ಕಳದ ಆಯುಷ್ ಶೆಟ್ಟಿಗೆ ಮುಖ್ಯಮಂತ್ರಿಯಿಂದ ಗೌರವಾರ್ಪಣೆ ಉಡುಪಿ: ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ…

2 hours ago

ಎಸ್‌ ಎಸ್‌ ಎಲ್‌ ಸಿ ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ : ಹೈಕೋರ್ಟ್ – vishwanews24

ಎಸ್‌ಎಸ್‌ ಎಲ್‌ಸಿ ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ : ಹೈಕೋರ್ಟ್ ಬೆಂಗಳೂರು : ಪ್ರಸಕ್ತ ಸಾಲಿನಿಂದಲೇ…

3 hours ago