ಉಡುಪಿ: ಚಾಲನೆಯಲ್ಲಿ ಲಘು ಹೃದಯಾಘಾತಕ್ಕೆ ಒಳಗಾದ ಶಾಲಾ ಬಸ್ಸೊಂದರ ಚಾಲಕನ ಸಮಯ ಪ್ರಜ್ಞೆಯಿಂದ ಹಲವು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜೂ.5ರಂದು ಸಂಜೆ ವೇಳೆ ಪೆರಂಪಳ್ಳಿ ಎಂಬಲ್ಲಿ ನಡೆದಿದೆ.
ಬ್ರಹ್ಮಾವರದ ಖಾಸಗಿ ಶಾಲೆಯೊಂದರ ವಾಹನವು ಸುಮಾರು 65 ಮಕ್ಕಳನ್ನು ಕರೆದುಕೊಂಡು ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲಕ್ಕೆ ಹೋಗುತ್ತಿತ್ತು. ದಾರಿ ಮಧ್ಯೆ ಐವರು ಮಕ್ಕಳ ಇಳಿಸಿದ ಬಸ್, ಪೆರಪಂಳ್ಳಿ ಬಳಿ ಹೋಗುತ್ತಿದ್ದಾಗ ಚಾಲಕ ಆಲ್ವಿನ್ ಡಿಸೋಜ ಅವರಿಗೆ ಲಘು ಹೃದಯಾಘಾತ ಸಂಭವಿಸಿತ್ತೆನ್ನಲಾಗಿದೆ.
ಕೂಡಲೇ ಎಚ್ಚೆತ್ತ ಚಾಲಕ ಬಸ್ಸನ್ನು ರಸ್ತೆಯ ಬದಿಯ ಚರಂಡಿಗೆ ಸರಿಸಿ ನಿಲ್ಲಿಸಿದರು. ಇದರಿಂದ ಕೆಲವು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ. ತೀವ್ರವಾಗಿ ಅಸ್ವಸ್ಥರಾಗಿರುವ ಚಾಲಕನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…