ಮಣಿಪಾಲ : ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಾಲಕ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.
ಅಲ್ವಿನ್ ಡಿಸೋಜಾ (53) ಮೃತ ವ್ಯಕ್ತಿ. ಅಪಘಾತದ ಬಳಿಕ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಘಟನೆಯಲ್ಲಿ ಗಾಯಗೊಂಡಿರುವ ಇತರ ಐವರು ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಈಗಾಗಲೇ ನಾಲ್ವರು ವಿದ್ಯಾರ್ಥಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಓರ್ವ ವಿದ್ಯಾರ್ಥಿ ಇನ್ನೂ ಚಿಕಿತ್ಸೆ ಮುಂದುವರಿದಿದೆ.
ಜೂ.5ರಂದು ಸಂಜೆ ವೇಳೆ ಪೆರಂಪಳ್ಳಿ ಈ ಘಟನೆ ನಡೆದಿದ್ದು ಬ್ರಹ್ಮಾವರದ ಖಾಸಗಿ ಶಾಲೆಯೊಂದರ ವಾಹನವು ಮಕ್ಕಳನ್ನು ಕರೆದುಕೊಂಡು ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿತ್ತು. ಹೃದಯಾಘಾತ ಸಂಭವಿಸಿದಾಗ ಕೂಡಲೇ ಎಚ್ಚೆತ್ತ ಚಾಲಕ ಬಸ್ಸನ್ನು ರಸ್ತೆಯ ಬದಿಯ ಚರಂಡಿಗೆ ಸರಿಸಿ ನಿಲ್ಲಿಸಿದ್ದರು ಇದರಿಂದ ಕೆಲವು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿತ್ತು. ಗಾಯಗೊಂಡ ವಿದ್ಯಾರ್ಥಿಗಳನ್ನು ಮತ್ತು ಚಾಲಕನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಆದರೆ ದುರಾದೃಷ್ಟವಶಾತ್ ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…