Featured

ಉಡುಪಿ: ಶಾಲೆ-ಕಾಲೇಜುಗಳ ಆವರಣದ ಬಳಿ ತಂಬಾಕು ಉತ್ಪನ್ನಗಳನ್ನು ಮಾರುವ ಪ್ರಕರಣ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ದಂಡ ವಿಧಿಸಿ : ಜಗದೀಶ್ -Vishwanews24

ಉಡುಪಿ: ಶಾಲೆ-ಕಾಲೇಜುಗಳ ಆವರಣದ ಬಳಿ ತಂಬಾಕು ಉತ್ಪನ್ನಗಳನ್ನು ಮಾರುವ ಪ್ರಕರಣ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು , ದಂಡ ವಿಧಿಸಿ, ದಂಡ ವಿಧಿಸುವಲ್ಲಿ ಯಾವುದೇ ದಾಕ್ಷಿಣ್ಯ ತೋರಬೇಡಿ ಎಂದು ಜಿಲ್ಲಾ ತಂಬಾಕು ನಿಯಂತ್ರಣ ದಳದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

ಅವರು ಗುರುವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ತಂಬಾಕು ನಿಷೇಧ ಕೋಶದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳ ಸಮೀಪದ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ತೆರನಾದ ತಂಬಾಕು ಉತ್ಪನ್ನಗಳು ಮಾರಾಟವಾಗುತ್ತಿಲ್ಲ ಎನ್ನುವುದನ್ನು ಖಚಿತ ಪಡಿಸಿಕೊಂಡು ಒಂದು ವಾರದೊಳಗೆ ವರದಿ ನೀಡುವಂತೆ ಪ್ರೌಡ ಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣ ಇಲಖೆಯ ಅಧಿಕಾರಿಗಳಿಗೆ ಸೂಚಿಸಿದ ಡಿಸಿ, ನಿಷೇಧಿತ ಪ್ರದೇಶದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮತ್ತು ಬಳಕೆ ತಡೆಯಲು ಹಾಗೂ ಕಾಯಿದೆಯ ಸಮರ್ಪಕ ಮಾಡಲು ಕರಿಣ ಕ್ರಮ ಕೈಗೊಳ್ಳುವುದು ಅಗತ್ಯ ಎಂದು ಹೇಳಿದರು.

ತಂಬಾಕು ವರ್ಜನೆ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲೆಯ ಸರಕಾರಿ ಮತ್ತು ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲೂ , ತಂಬಾಕು ತ್ಯಜಿಸಲು ಕ್ವಿಟ್ ಲೈನ್ ಸಂಖ್ಯೆಯ ಫಲಕ ಅಳವಡಿಸುವಂತೆ ಸೂಚಿಸಿದರು.

ಜಿಲ್ಲೆಯ ಎಲ್ಲಾ ಬೀಚ್ ಗಳಲ್ಲೂ ‘ತಂಬಾಕು ಮುಕ್ತ ವಲಯ’ ಹೋಡಿರ್ಂಗ್ ಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ನಿರ್ದೇಶನ ನೀಡಿದ ಡಿಸಿ, ಹೊಸದಾಗಿ ರಚನೆಯಾದ ನಾಲ್ಕೂ ತಾಲೂಕುಗಳಲ್ಲಿ ತಂಬಾಕು ನಿಗ್ರಹ ದಳದ ಸದಸ್ಯರುಗಳನ್ನು ನೇಮಕ ಮಾಡಿಕೊಳ್ಳಲು ಹಾಗೂ ಬಾರ್ ಅಂಡ್ ರೆಸ್ಟೊರೆಂಟ್ ಗಳಲ್ಲಿ ಧೂಮಪಾನ ಮಾಡಲು ಪ್ರತ್ಯೇಕ ಸ್ಮೋಕಿಂಗ್ ಜೋನ್ ನಿರ್ಮಿಸಿರುವ ಕುರಿತು ಪರಿಶೀಲಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೋಟ್ಪಾ ನಿಯಂತ್ರಣ ದಳದ ಅಧಿಕಾರಿಗಳು ಜಿಲ್ಲೆಯಾದ್ಯಂತ ತನಿಖೆ ನಡೆಸಿದ್ದು, ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವವರು, ಚಿಲ್ಲರೆ ಸಿಗರೇಟ್ ಮಾರುವ ವ್ಯಾಪಾರಸ್ಥರ ಮೇಲೆ ದಂಡ ವಿಧಿಸಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ , ಏಪ್ರಿಲ್ 2019 ರಿಂದ ಇದುವರೆಗೆ 242 ಪ್ರಕರಣಗಳಲ್ಲಿ 26440 ರೂ ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಾಸುದೇವ್ ಮಾಹಿತಿ ನೀಡಿದರು.

ಸಿಗರೇಟ್ ಮತ್ತು ತಂಬಾಕಿನ ಚಟದಿಂದ ಮುಕ್ತಿ ಹೊಂದಲು ಬಯಸುವವರಿಗೆ ಡಿಅಡಿಕ್ಷನ್ ಕ್ಯಾಂಪ್ ಗಳನ್ನು ಹಮ್ಮಿಕೊಳ್ಳಲಾಗಿದ್ದು, 2018 ರಲ್ಲಿ 2046 ಜನರಿಗೆ ಕೌನ್ಸೆಲಿಂಗ್ ನೀಡಲಾಗಿತ್ತು, ಇದರಲ್ಲಿ 211 ಜನ ಮತ್ತು 2019 ರಲ್ಲಿ 936 ಜನರಲ್ಲಿ 89 ಜನರು ಶಾಶ್ವತವಾಗಿ ಸಿಗರೇಟ್ ಸೇದುವುದನ್ನು ತ್ಯಜಿಸಿದ್ದಾರೆ ಎಂದು ಡಾ. ವಾಸುದೇವ್ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಪ್ರೀತಿ ಗೆಹಲೋತ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ಬಾಳಿಗಾ ಆಸ್ಪತ್ರೆ ವೈದ್ಯ ಡಾ. ಬಿ.ವಿ.ಭಂಡಾರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago