Featured

ಉಡುಪಿ : ಶಿಕ್ಷಕರ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ವಿಶೇಷ ಗೌರವ, ಅತೀವ ಕಾಳಜಿ ಇದೆ : ರಮೇಶ್ ಕಾಂಚನ್ – vishwanews24

ಶಾಸಕರೇ ಅಭಿವೃದ್ಧಿಯನ್ನು ಮರೆತು ಕ್ಷುಲ್ಲಕ ರಾಜಕಾರಣ ಮಾಡಬೇಡಿ : ಎಚ್ಚರಿಸಿದ ರಮೇಶ್ ಕಾಂಚನ್

ಉಡುಪಿ: ಶಾಸಕರು ಅಭಿವೃದ್ಧಿಯನ್ನು ಮರೆತು ಕ್ಷುಲ್ಲಕ ರಾಜಕಾರಣ ಮಾಡದಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್ ಎಚ್ಚರಿಸಿದ್ದಾರೆ.

ಕುಂದಾಪುರದ ಪ್ರಾಂಶುಪಾಲರ ಪ್ರಶಸ್ತಿ ತಡೆ ಕುರಿತಾಗಿ ಅಸಾಂವಿಧಾನಿಕ, ಅನಾಗರಿಕ ರೀತಿಯಲ್ಲಿ ಪ್ರತಿಭಟಿಸಿದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಸೇರಿದಂತೆ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸು ದಾಖಲಾಗಿರುವುದರ ಬಗ್ಗೆ ಮೊದಲು ಶಾಸಕರು ಆತ್ಮ ವಿಮರ್ಶೆ ಮಾಡಿಕೊಳ್ಳಲಿ., ಜ್ಞಾನದ ಬೆಳಕನ್ನು ನೀಡಿ ಉತ್ತಮ ಭವಿಷ್ಯ ರೂಪಿಸುವ ಶಿಕ್ಷಕರ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ವಿಶೇಷ ಗೌರವ, ಅತೀವ ಕಾಳಜಿ ಇದೆ.

ಶಿಕ್ಷಕರ ಮೇಲೆ ಗೌರವದ ನೆಪ ಇಟ್ಟುಕೊಂಡು ಕಾನೂನಿಗೆ ವಿರುದ್ಧವಾಗಿ ಅನಾಗರಿಕ ರೀತಿಯಲ್ಲಿ ತಮ್ಮವರು ಪ್ರತಿಭಟನ ನಡೆಯುವಾಗ ಕಾನೂನು ರೂಪಿಸುವ ರಾಜ್ಯ ಶಾಸಕಾಂಗದ ಸದಸ್ಯನಾಗಿ ಅದನ್ನು ತಡೆಯಬೇಕಿತ್ತು.

ಅಂದು ಅನಾಗರಿಕ ವರ್ತನೆಯ ಪ್ರಕರಣದ ಮೂಲಕವೇ ರಾಜಕೀಯ ಪ್ರವರ್ಧಮಾನಕ್ಕೆ ಬಂದವರಿಗೆ ನೂರಾರು ಪೋಲಿಸ್ ಕೇಸ್ ಗಳೇ ಶೋಭಾಯಮಾನ ಎಂದುಕೊಳ್ಳುವುದರಲ್ಲಿ ವಿಶೇಷತೆ ಎನೂ ಇಲ್ಲ.ಆದರೆ ತಾವು ಇದೀಗ ವಿದ್ಯಾವಂತರ ನಾಡು ಎಂಬ ಅಭಿದಾನ ಪಡೆದುಕೊಂಡ ಉಡುಪಿಯ ಜನಪ್ರತಿನಿಧಿ ಎಂಬ ಪರಿಜ್ಞಾನವನ್ನು ಇಟ್ಟುಕೊಂಡು ಸರಕಾರದೊಂದಿಗೆ ಉತ್ತಮ ಸಂಬಂಧ ಬೆಳೆಸಿಕೊಂಡು ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಉತ್ತಮ ಚಿಂತನೆ,ಪರಿಕಲ್ಪನೆಯಿಂದ ಅಭಿವೃದ್ಧಿ ಕೆಲಸಗಳು ಮತ್ತು ಉಡುಪಿಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು ಶ್ರಮವಹಿಸುವಂತೆ ರಮೇಶ್ ಕಾಂಚನ್ ಸಲಹೆ ನೀಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago