ಉಡುಪಿ; ಶಿರ್ವ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ ಹಾಗೂ ಉಡುಪಿ ಧರ್ಮಪ್ರಾಂತ್ಯದ ಸಹಾಯಕ ಧರ್ಮ ಗುರು ಫಾ.ಮಹೇಶ್ ಡಿಸೋಜಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜಾನನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಡೇವಿಡ್ ಡಿಸೋಜಾನ ಪತ್ನಿ ಜೊತೆ ಫಾ.ಮಹೇಶ್ ಡಿಸೋಜಾ ನಿರಂತರ ಫೋನ್ ಸಂಭಾಷಣೆ, ಮೊಬೈಲ್ ಚಾಟಿಂಗ್ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ. ಪತ್ನಿಯ ಮೊಬೈಲ್ ನೋಡಿದ ಡೇವಿಡ್ ನೇರವಾಗಿ ಶಿರ್ವ ಚರ್ಚ್‌ಗೆ ಹೋಗಿ ಧರ್ಮಗುರುಗಳಿಗೆ ಬೆದರಿಸಿದ್ದನು ಎನ್ನಲಾಗಿದೆ.
ಇದೀಗ ಆತ್ಮಹತ್ಯೆಗೆ ಪ್ರೇರಣೆ ಆರೋಪದಡಿ ತನಿಖಾಧಿಕಾರಿ ಕಾಪು ವೃತ್ತ ನೀರಿಕ್ಷಕ ಮಹೇಶ ಪ್ರಸಾದ್ ಆರೋಪಿ ಡೇವಿಡ್ ಡಿಸೋಜಾನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನ್ಯಾಯಾಲಯವು ಆರೋಪಿ ಡೇವಿಡ್’ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…
ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…
ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…
ಮಂಗಳೂರು : ಜೈಲಿಗೆ ಡ್ರಗ್ಸ್, ಮೊಬೈಲ್ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…
ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…
ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು: ಸರ್ಕಾರಿ ಕಾಲೇಜಿನ ಬಿಬಿಎ…