ಉಡುಪಿ: ಬಿಜೆಪಿ ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಶೀಘ್ರವೇ ಕಾಂಗ್ರೆಸ್‍ಗೆ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ಕರಾವಳಿಯಲ್ಲಿ ಬಿಜೆಪಿ ಪಕ್ಷಕ್ಕೆ ಶಾಕ್ ಎದುರಾಗಿದೆ.
ಉಡುಪಿ ಜಿಲ್ಲೆ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿಯವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ಚರ್ಚೆ ನಡೆಸಿದ್ದಾರೆ.
ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸುಕುಮಾರ್ ಶೆಟ್ಟಿ, ಬಿಜೆಪಿ ಪಕ್ಷ ಬೆಳೆಯಲು ಬಿಡುವುದಿಲ್ಲ. ಕಾಲೆಳೆದು ಮಲಗಿಸುವ ಕೆಲಸ ಬಿಜೆಪಿಯ ಪರಿಪಾಠವಾಗಿದೆ. ಅದರಂತೆ ನನಗೆ ಸೀಟು ಕೊಡದೆ ಅನ್ಯಾಯ ಮಾಡಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ಬಹಳಷ್ಟು ನೋವಾಗಿದೆ ಎಂದರು.
ಕೆಲವು ನಾಯಕರು ತನ್ನನ್ನ ಕಾಂಗ್ರೆಸ್ ಸೇರಲು ಹೇಳುತ್ತಿದ್ದರು. ಮುಂದಿನ ದಿನಗಳಲ್ಲಿ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇರುವ ಧೃಢ ನಿರ್ಧಾರ ಮಾಡಿದ್ದೇನೆ. ಕರಾವಳಿಯಲ್ಲಿ ಹಿಂದುತ್ವದ ಹಿನ್ನೆಲೆ ಹೊರತುಪಡಿಸಿ ಬೇರೆಲ್ಲ ಕಡೆ ಬಿಜೆಪಿ ಹೆಸರು ಹಾಳುಮಾಡಿಕೊಂಡಿದೆ. ಡಿ.ಕೆ ಶಿವಕುಮಾರ್ ಬಹಳಷ್ಟು ಬಾರಿ ಕರೆಮಾಡಿ ಆಹ್ವಾನ ನೀಡಿದ್ದಾರೆ. ಈಗ ನಾನು ಡಿಕೆಶಿ ಅವರನ್ನ ಭೇಟಿಯಾಗಿ ಪಕ್ಷಕ್ಕೆ ಸೇರುವ ಬಗ್ಗೆ ಗ್ರೀನ್ ಸಿಗ್ನಲ್ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…