Featured

ಉಡುಪಿ: ಶೈಕ್ಷಣಿಕ ವರ್ಷದ ಅಂತಿಮ ಹಂತ -: ಕಾಲೇಜು ವಿದ್ಯಾರ್ಥಿಗಳಿಗೆ ಸಿಗದ ಟ್ಯಾಬ್‌ – Vishwanews24

ಉಡುಪಿ: ಶೈಕ್ಷಣಿಕ ವರ್ಷದ ಅಂತಿಮ ಹಂತ -: ಕಾಲೇಜು ವಿದ್ಯಾರ್ಥಿಗಳಿಗೆ ಸಿಗದ ಟ್ಯಾಬ್‌

ಉಡುಪಿ: ಪದವಿ ಕಾಲೇಜು ವಿದ್ಯಾರ್ಥಿಗಳ 2022-23ನೇ ಸಾಲಿನ ಶೈಕ್ಷಣಿಕ ತರಗತಿಗಳು ಕೊನೆಯ ಘಟ್ಟಕ್ಕೆ ತಲುಪಿದರೂ ವಿದ್ಯಾರ್ಥಿಗಳಿಗೆ ಟ್ಯಾಬ್‌ ನೀಡುವ ಪ್ರಸ್ತಾವನೆಗೆ ಸರಕಾರದಿಂದ ಅನುಮೋದನೆ ಸಿಕ್ಕಿಲ್ಲ.

ಉಡುಪಿಯ 12 ಹಾಗೂ ದಕ್ಷಿಣ ಕನ್ನಡದ 21 ಸಹಿತ ರಾಜ್ಯದಲ್ಲಿ 430 ಸರಕಾರಿ ಪದವಿ ಕಾಲೇಜುಗಳಿವೆ.

ಸುಮಾರು 3.5 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕರಾವಳಿಯ ಉಭಯ ಜಿಲ್ಲೆಯಲ್ಲಿ 15 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. ವಿವಿಧ ಸರಕಾರಿ ಪದವಿ ಕಾಲೇಜುಗಳ 5 ಸಾವಿರಕ್ಕೂ ಅಧಿಕ ತರಗತಿ ಕೊಠಡಿಗಳನ್ನು ಸ್ಮಾರ್ಟ್‌ ಆಗಿ ಪರಿವರ್ತಿಸಲಾಗಿದೆ. ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವಂತೆ ಈ ಹಿಂದೆ ಲ್ಯಾಪ್‌ಟಾಪ್‌ ವಿತರಿಸಲಾಗಿತ್ತು. ಆರ್ಥಿಕ ಹೊರೆಯಾಗುವುದರಿಂದ ಲ್ಯಾಪ್‌ ಟಾಪ್‌ ಬದಲಿಗೆ ಟ್ಯಾಬ್‌ ವಿತರಣೆಗೆ ಸರಕಾರ ನಿರ್ಧರಿಸಿತ್ತು. ಆದರೆ ಎರಡು ವರ್ಷಗಳಿಂದ ಟ್ಯಾಬ್‌ ಕೂಡ ಸರಿಯಾಗಿ ವಿದ್ಯಾರ್ಥಿಗಳಿಗೆ ತಲುಪುತ್ತಿಲ್ಲ.

ಕಾಲೇಜು ಶಿಕ್ಷಣ ಇಲಾಖೆಯಿಂದ ನವಯುಗದ ಸಮಗ್ರ ಕಲಿಕಾ ನಿರ್ವಹಣೆ ವ್ಯವಸ್ಥೆ (ಕರ್ನಾಟಕ ಎಲ್‌ಎಂಎಸ್‌) ಸಿದ್ಧಪಡಿಸಲಾಗಿದೆ. ಇದರಲ್ಲಿ ವಿದ್ಯಾರ್ಥಿಗಳ ಆನ್‌ಲೈನ್‌ ಮೂಲಕ ಕಲಿಕೆಗೆ ಬೇಕಾದ ಕಂಟೆಂಟ್‌ ಗಳನ್ನು ಅಪ್‌ಡೇಟ್‌ ಮಾಡಲಾಗುತ್ತದೆ. ಕಲಿಕೆಯನ್ನು ಇನ್ನಷ್ಟು ಸರಳಗೊಳಿಸಲು ಟ್ಯಾಬ್‌ ಒದಗಿಸಿದರೆ ಉತ್ತಮ ಎಂಬ ನೆಲೆಯಲ್ಲಿ ಸುಮಾರು 1.43 ಲಕ್ಷಕ್ಕೂ ಅಧಿಕ ಟ್ಯಾಬ್‌ ಆವಶ್ಯಕತೆಯಿದೆ ಎಂಬ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿದೆ.

ಶೈಕ್ಷಣಿಕ ವರ್ಷದ ಅಂತಿಮ ಹಂತ
2022-23ನೇ ಸಾಲಿನಲ್ಲಿ ಪ್ರಥಮ ವರ್ಷದ ಪದವಿ ಕೋರ್ಸ್‌ಗೆ ಸೇರಿರುವ ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳಿಗೆ ಟ್ಯಾಬ್‌ (ಕುಟುಂಬದ ನಿರ್ದಿಷ್ಟ ಆದಾಯದ ಆಧಾರದಲ್ಲಿ) ವಿತರಣೆ ಮಾಡುವ ಮೂಲಕ ಕಲಿಕೆ ಹಾಗೂ ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಸರಕಾರ ಯೋಜನೆ ರೂಪಿಸಿತ್ತು. ಪ್ರಸಕ್ತ ಸಾಲಿನ ಪದವಿ ಕಾಲೇಜುಗಳ ಮೊದಲ ವರ್ಷ ವಿದ್ಯಾರ್ಥಿಗಳ ಎರಡನೇ ಸೆಮಿಸ್ಟರ್‌ ನಡೆಯುತ್ತಿದೆ. ಈಗಾಗಲೇ ಟ್ಯಾಬ್‌ ವಿದ್ಯಾರ್ಥಿಗಳ ಕೈ ಸೇರಿದ್ದರೆ ಶೈಕ್ಷಣಿಕವಾಗಿ ಅನು ಕೂಲವಾಗುತ್ತಿತ್ತು. ಇನ್ನು ಎರಡು ಮೂರು ತಿಂಗಳಲ್ಲಿ ಶೈಕ್ಷಣಿಕ ವರ್ಷವೂ ಮುಗಿಯುತ್ತದೆ. ಅಷ್ಟರೊಳಗೆ ಸರಕಾರ ಟ್ಯಾಬ್‌ ನೀಡಬೇಕು ಎಂಬುದು ವಿದ್ಯಾರ್ಥಿಗಳು, ಪ್ರಾಧ್ಯಾಪಕರ ಆಗ್ರಹ.

ವಿತರಿಸದಿರಲು ಕಾರಣ ಏನು?
ಸರಕಾರಿ ಪದವಿ ಕಾಲೇಜುಗಳ ಸುಮಾರು ಅರ್ಹ 1.43 ಲಕ್ಷ ವಿದ್ಯಾರ್ಥಿಗಳಿಗೆ ತಲಾ 10 ಸಾ. ರೂ.ಗಳಿಂದ 11 ಸಾ. ರೂ.  ಮೌಲ್ಯದ ಟ್ಯಾಬ್‌ ವಿತರಣೆಗೆ ಇಲಾಖೆ ಪ್ರಸ್ತಾ ವನೆ ಸಿದ್ಧಪಡಿಸಿದೆ. ಈ ಟ್ಯಾಬ್‌ನಲ್ಲಿ ವಿದ್ಯಾರ್ಥಿ ಗಳ ಕಲಿಕೆಗೆ ಪೂಕರವಾದ ಮಾಹಿತಿ ಯನ್ನು ಮೊದಲೇ ಅಪ್‌ಲೋಡ್‌ ಮಾಡಲಾಗುತ್ತದೆ. 1.43 ಲಕ್ಷ ಟ್ಯಾಬ್‌ಗಳಿಗೆ ಕೋಟ್ಯಂತರ ರೂ. ಬೇಕಾಗುವುದರಿಂದ ಆರ್ಥಿಕ ಇಲಾಖೆ ಇನ್ನೂ ಅನುಮತಿ ನೀಡಿಲ್ಲ. ಬಜೆಟ್‌ನಲ್ಲಿ ಟ್ಯಾಬ್‌ ಜತೆಗೆ ಇನ್ನು ಕೆಲವು ಘೋಷಣೆಗಳ ನಿರೀಕ್ಷೆಯಲ್ಲಿ ಶಿಕ್ಷಣ ಇಲಾಖೆಯಿದೆ.

ಸರಕಾರಿ ಪದವಿ ಕಾಲೇಜಿನ ಅರ್ಹ ವಿದ್ಯಾರ್ಥಿಗಳಿಗೆ ಟ್ಯಾಬ್‌ ಒದಗಿಸುವ ಸಂಬಂಧ ಈಗಾಗಲೇ ಪ್ರಸ್ತಾವನೆ ಸಲ್ಲಿಸಿ ದ್ದೇವೆ. ಸರಕಾರದಿಂದ ಯಾವುದೇ ಉತ್ತರ ಬಂದಿಲ್ಲ. ಬಜೆಟ್‌ ನಲ್ಲಿ ಪ್ರತ್ಯೇಕ ಅನುದಾನದ ಬಗ್ಗೆಯೂ ಮಾಹಿತಿ ಯಿಲ್ಲ.
– ಪಿ. ಪ್ರದೀಪ್‌, ಆಯುಕ್ತರು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ

-ರಾಜು ಖಾರ್ವಿ ಕೊಡೇರಿ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago