ಉಡುಪಿ: ನವರಾತ್ರಿ ಹಬ್ಬ ಮುಗಿಯುವುದರ ಒಳಗಾಗಿ ಉಡುಪಿ, ಕಾಪು, ಕುಂದಾಪುರ ವ್ಯಾಪ್ತಿಯಲ್ಲಿ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಕಾಣಿಸಿಕೊಂಡರೆ ಸೆಲ್ಫಿ ತೆಗೆದು ಕಳುಹಿಸಿಕೊಡಿ. ಈ ರೀತಿ ಕಳುಹಿಸಿಕೊಟ್ಟ ಮೊದಲ ವಿಜೇತ 5 ಮಂದಿಗೆ ತಲಾ 5 ಸಾವಿರ ಬಹುಮಾನವಾಗಿ ನೀಡಲಾಗುವುದು. ಆ ಬಳಿಕವೂ ಕರಂದ್ಲಾಜೆ ಕ್ಷೇತ್ರದಲ್ಲಿ ಕಾಣಿಸಿಕೊಳ್ಳದಿದ್ದರೆ ಎಲ್ಲಾ ಪೊಲೀಸ್ ಠಾಣೆಯಲ್ಲೂ ನಾಪತ್ತೆ ದೂರು ದಾಖಲಿಸಲಾಗುವುದು. ಸಂಸದರನ್ನು ಹುಡುಕಿ ಕೊಡಿ ಎಂಬ ಪೋಸ್ಟರ್ ಅಂಟಿಸಲಾಗುವುದು ಎಂದು ಹೇಳಿದರು.
ಅವರು ಕೇಂದ್ರ, ರಾಜ್ಯ ಸರಕಾರ ಹಾಗೂ ಉಡುಪಿ ನಗರಸಭೆಯ ವಿರುದ್ಧ ಹಾಗೂ ರಾಷ್ಟ್ರೀಯ ಹೆದ್ದಾರಿ ಮತ್ತು ಉಡುಪಿ ಪ್ರಮುಖ ರಸ್ತೆಗಳನ್ನು ದುರಸ್ತಿಗೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಮಂಗಳವಾರ ಕಲ್ಮಾಡಿ ಜಂಕ್ಷನ್‌ನಿಂದ ಕರಾವಳಿ ಬೈಪಾಸ್‌ವರೆಗೆ ವಿನೂತನ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದರು.
ದೇಶದಲ್ಲಿ 5 ವರ್ಷ PFI ಸಂಘಟನೆ ನಿಷೇಧ : ಕೇಂದ್ರ ಸರಕಾರ ಆದೇಶ – Vishwanews24
ಉಡುಪಿಗೆ ಶೋಭಾ ಕರಂದ್ಲಾಜೆ, ದಕ್ಷಿಣ ಕನ್ನಡಕ್ಕೆ ನಳಿನ್ ಕುಮಾರ್ ಇರುವವರೆಗೆ ಕ್ಷೇತ್ರ ಉದ್ಧಾರ ಆಗಲ್ಲ. ರಾಜ್ಯ ಬಿಜೆಪಿ ಸರಕಾರ ನಿದ್ರೆಯ ಮಂಪರಿ ನಲ್ಲಿದೆ. ಗುತ್ತಿಗೆದಾರರು ರಘುಪತಿ ಭಟ್ ಹಾಗೂ ಶೋಭಾ ಕರಂದ್ಲಾಜೆಗೆ ಶೇ.40 ಕಮಿಷನ್ ಕೊಟ್ಟಿಲ್ಲ ಎಂದೆ ರಸ್ತೆ ದುರಸ್ತಿಗೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿದ ಅವರು, ಗಾಂಧೀಜಿಯ ಮೂರು ಮಂಗನಂತೆ ರಘುಪತಿ ಭಟ್, ಶೋಭಾ ಕರಂದ್ಲಾಜೆ, ಸುನೀಲ್ ಕುಮಾರ್ ಬೊಮ್ಮಾಯಿಯ ಮಂಗಗಳು ಅವರು ಬೇಡವಾದುದ್ದನ್ನು ನೋಡುವುದು, ಕೇಳುವುದು ಮಾತನಾಡುವುದು ಇವರ ಕೆಲಸ ಎಂದು ವ್ಯಂಗ್ಯವಾಡಿದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ದಿನೇಶ್ ಪುತ್ರನ್, ಬಿ.ನರಸಿಂಹ ಮೂರ್ತಿ, ಯತೀಶ್ ಕರ್ಕೇರ, ಉದ್ಯಾವರ ನಾಗೇಶ್ ಕುಮಾರ್, ಆನಂದಿ, ಅಣ್ಣಯ್ಯ ಶೇರಿಗಾರ್, ಪ್ರಶಾಂತ್ ಜತ್ತನ್ನ, ಪ್ರಶಾಂತ್ ಪೂಜಾರಿ, ಡಿಯೋನ್ ಡಿಸೋಜಾ, ಹಮ್ಮದ್ ಉಡುಪಿ, ಮೀನಾಕ್ಷಿ ಮಾಧವ ಬನ್ನಂಜೆ, ಫಾ.ವಿಲಿಯಂ ಮಾರ್ಟಿಸ್, ಗಣೇಶ್ ನೆರ್ಗಿ, ವೆರೋನಿಕಾ ಕರ್ನೇಲಿಯೋ, ಡಾ.ಸುನೀತಾ ಶೆಟ್ಟಿ, ರೋಶನಿ ಒಲಿವೆರಾ, ದಿನೇಶ್ ಪುತ್ರನ್, ಬಿ.ಕುಶಲ ಶೆಟ್ಟಿ, ಅಮೃತ್ ಶೆಣೈ, ಮೇರಿ ಡಿ’ಸೋಜಾ, ನಾರಾಯಣ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.
ದೇಶದಲ್ಲಿ 5 ವರ್ಷ PFI ಸಂಘಟನೆ ನಿಷೇಧ : ಕೇಂದ್ರ ಸರಕಾರ ಆದೇಶ – Vishwanews24
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…