ಉಡುಪಿ: ನಿಲ್ಲಿಸಿದ್ದ ಬಸ್ ಗೆ ಫಾರ್ಚೂನರ್ ಕಾರೊಂದು ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.
ಶೋರೂಂಗೆ ಹೋಗುತ್ತಿದ್ದ ಹೊಚ್ಚ ಹೊಸ ಫಾರ್ಚೂನರ್ ಕಾರು ಅಪಘಾತಕ್ಕೀಡಾಗಿದೆ. ಕುಂದಾಪುರ ಶೋರೂಂ ನಿಂದ ಮಂಗಳೂರು ಶೋರೂಂಗೆ ಹೊಸ ಕಾರನ್ನು ಚಾಲಕ ಕೊಂಡೊಯ್ಯುತ್ತಿದ್ದನು. ನಿಟ್ಟೂರಿಗೆ ತಲುಪುತ್ತಿದ್ದಂತೆಯೇ ಬಸ್ ನಿಲ್ದಾಣದಲ್ಲಿ ನಿಂತಿದ್ದ ಸಿಟಿ ಬಸ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಬಸ್ ನ ಹಿಂಬದಿಗೂ ಹಾನಿಯಾಗಿದೆ.
ಕಾರು ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದೆ. ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು. ಮಾಹಿತಿ ತಿಳಿದ ಕೂಡಲೇ ಶೋರೂಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…