ಉಡುಪಿ,: ವಾರದ ಹಿಂದೆ ನಗರದ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎಂಬ ಘಟನೆಗೆ ಸಂಬಂಧಪಟ್ಟಂತೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲಾಗಿದೆ.
ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಾಲೇಜು ವಿದ್ಯಾರ್ಥಿನಿಯರಾದ ಶಬನಾಝ್, ಅಲ್ಫೀಯಾ, ಅಲೀಮಾ ಈ ಮೂವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡಿ ಡಿಲಿಟ್ ಆದ ಬಗ್ಗೆ ಮೂವರು ವಿದ್ಯಾರ್ಥಿನಿಯರು ಮತ್ತು ಕಾಲೇಜು ಆಡಳಿತ ಮಂಡಳಿಯವರ ವಿರುದ್ಧ ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವ ಕೃತ್ಯ, ವ್ಯಕ್ತಿಯ ಖಾಸಗಿ ಚಿತ್ರವನ್ನು ಚಿತ್ರೀಕರಿಸುವ ಕೃತ್ಯ, ಮಾಹಿತಿಯನ್ನು ಮತ್ತು ದಸ್ತಾವೇಜನ್ನು ಹಾಜರುಪಡಿಸಲು ತಪ್ಪುವ ಕೃತ್ಯದ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.
ಆರೋಪಿಗಳ ವಿರುದ್ದ ಭಾರತೀಯ ದಂಡ ಸಂಹಿತೆ 509, 204, 175,34, ಮತ್ತು 66(ಇ) ಅಡಿ ದೂರು ದಾಖಲಾಗಿದೆ.
ವಿವಾದವೇನು?
ಉಡುಪಿಯ ಕಾಲೇಜೊಂದರ ಟಾಯ್ಲೆಟ್‌ನಲ್ಲಿ ಮೂವರು ವಿದ್ಯಾರ್ಥಿನಿಯರಿಂದ ಭಿನ್ನ ಕೋಮಿಗೆ ಸೇರಿದ ಯುವತಿಯ ಚಿತ್ರೀಕರಣ ಮಾಡಲಾಗಿತ್ತು. ” ಕಾಲೇಜಿನ 3 ಮಂದಿ ವಿದ್ಯಾರ್ಥಿನಿಯರು ಕ್ಯಾಮರದ ಮೂಲಕ ಇನ್ನೊಬ್ಬ ವಿದ್ಯಾರ್ಥಿನಿಯನ್ನು ಅಸಭ್ಯವಾಗಿ ಚಿತ್ರೀಕರಿಸಿದ್ದರು. ಇದು ಕಾಲೇಜಿನ ಗಮನಕ್ಕೆ ಬಂದು ಆರೋಪಿ ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಲಾಗಿದೆ . ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿರುವ 3 ಮಂದಿ ವಿದ್ಯಾರ್ಥಿನಿಯರು ತಪ್ಪೊಪ್ಪಿಕೊಂಡಿದ್ದಾರೆ. ತಮಾಷೆಗಾಗಿ ವೀಡಿಯೋ ಮಾಡಿರುವುದಾಗಿ ಮೂವರು ಲಿಖಿತವಾಗಿ ಹೇಳಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿ ಘಟನೆ ಬಗ್ಗೆ ಸ್ಪಷ್ಟನೆ ನೀಡಿತ್ತು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…