Featured

ಉಡುಪಿ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ – vishwanews24

ಉಡುಪಿ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ

ಉಡುಪಿ: ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಶ್ರಮ ಸ್ವೀಕಾರ, ಪೀಠಾರೋಹಣದ ಸುವರ್ಣ ಮಹೋತ್ಸವದ ನೆನಪಿಗಾಗಿ ಅನ್ನಬ್ರಹ್ಮ, ಉತ್ಸವ ಬ್ರಹ್ಮನಾದ ಉಡುಪಿ ಶ್ರೀಕೃಷ್ಣನಿಗೆ ‘ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ’ ಕಾರ್ಯಕ್ರಮ ಇದೇ ಡಿ.27ರಂದು ನಡೆಯಲಿದೆ.

ಈ ಕುರಿತು ಉಡುಪಿ ಗೀತಾಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು, ಡಿ.26ರಂದು ಮಧ್ಯಾಹ್ನ 3.30ಕ್ಕೆ ಜೋಡುಕಟ್ಟೆಯಿಂದ ಕೃಷ್ಣಮಠದವರೆಗೆ ಸುವರ್ಣ ರಥದ ವೈಭವದ ಶೋಭಾಯಾತ್ರೆ ನಡೆಯಲಿದ್ದು, ಮಂತ್ರಾಲಯ ಮಠದ ಸುಬುಧೇಂದ್ರ ತೀರ್ಥ ಶ್ರೀಪಾದರು ಮೆರವಣಿಗೆ ಉದ್ಘಾಟಿಸಲಿದ್ದಾರೆ. ಸಂಜೆ 6.30ಕ್ಕೆ ರಾಜಾಂಗಣದಲ್ಲಿ ಧರ್ಮ ಸಭೆ ನಡೆಯಲಿದೆ.

ಡಿ. 27ರಂದು ಸಂಜೆ 6ಗಂಟೆಗೆ ರಥಬೀದಿಯಲ್ಲಿ ಪಾರ್ಥಸಾರಥಿ ಸ್ವರ್ಣರಥದಲ್ಲಿ ಶ್ರೀಕೃಷ್ಣನ ಉತ್ಸವಕ್ಕೆ ಅದಮಾರು ಮಠದ ವಿಶ್ವಪ್ರಿಯತೀರ್ಥ ಶ್ರೀಪಾದರು ಚಾಲನೆ ನೀಡಲಿದ್ದಾರೆ. ಮಂತ್ರಾಲಯದ ಸುಬುಧೇಂದ್ರ ಸ್ವಾಮೀಜಿ, ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು, ಭಂಡಾರಕೇರಿ ಮಠದ ವಿದ್ಯೇಶತೀರ್ಥ ಶ್ರೀಪಾದರು ಪಾಲ್ಗೊಳ್ಳಲಿದ್ದಾರೆ ಎಂದರು.

ಡಿ. 28ಕ್ಕೆ ಕೋಟಿ ತುಳಸಿ ಅರ್ಚನೆ:
ಉಡುಪಿ ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಶ್ರೀಕಾಂತ್​ ಉಪಾಧ್ಯಾಯ ಮಾತನಾಡಿ, ಡಿ.28ರಂದು ಬೆಳಿಗ್ಗೆ 9 ಗಂಟೆಗೆ ಕೃಷ್ಣ ಮಠದ ರಾಜಾಂಗಣದಲ್ಲಿ ಉಡುಪಿ 26 ವಲಯಗಳ ಸುಮಾರು 2000 ವಿಪ್ರ ಬಾಂಧವರೊಂದಿಗೆ ಕೋಟಿ ತುಳಸಿ ಅರ್ಚನೆ ನಡೆಯಲಿದೆ. ಬೆಂಗಳೂರು, ಮೈಸೂರು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ತುಳಸಿಯನ್ನು ತರಿಸಲಾಗುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪುತ್ತಿಗೆ ಮಠ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಬ್ರಾಹ್ಮಣ ಸಭಾದ ಶ್ರೀನಿವಾಸ ಬಲ್ಲಾಳ್​, ರಾಜೇಂದ್ರ, ನಾಗರಾಜ ಉಪಾಧ್ಯಾಯ, ಹಯವದನ ಭಟ್​ ಉಪಸ್ಥಿತರಿದ್ದರು.

Vishwa News 24

Recent Posts

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಕೈತಪ್ಪುವ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ – vishwanews24

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಬೇರೆ ಮಹಿಳೆಯ ಪಾಲಾಗಬಹುದೆಂಬ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ …

20 minutes ago

ಕುಂದಾಪುರ : ಹುಟ್ಟೂರಿಗೆ ತಲುಪಿದ ಅನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ – vishwanews24

ಕುಂದಾಪುರ: ಶಾರ್ಜಾದಲ್ಲಿ ನಿಗೂಢ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ ಹುಟ್ಟೂರಿಗೆ ಕುಂದಾಪುರ : ಶಾರ್ಜಾದಲ್ಲಿ ಜುಲೈನಲ್ಲಿ ನಿಗೂಢವಾಗಿ…

35 minutes ago

ಏಷ್ಯನ್ ಗೇಮ್ಸ್ ನಲ್ಲಿ ಎರಡನೇ ಚಿನ್ನದ ಪದಕ ಗೆದ್ದುಕೊಂಡ ಭಾರತ – vishwanews24

ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ 2ನೇ ಚಿನ್ನ.. 10 ಮೀಟರ್ ಏರ್ ಪಿಸ್ತೂಲ್‌ ನಲ್ಲಿ ಸ್ವರ್ಣ ಪದಕ ಗೆದ್ದ ಕಮಲ್‌ಜೀತ್–ಸುರುಚಿ…

49 minutes ago

ಗವಿಸಿದ್ದೇಶ್ವರ ಶ್ರೀಗಳಿಂದ ಈ ಬಾರಿಯ ಮೈಸೂರು ದಸರಾ ಉದ್ಘಾಟನೆ : ಸಿಎಂ ಡಿ.ಕೆ.ಶಿವಕುಮಾರ್ – vishwanews24

ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಶ್ರೀಗಳಿಂದ ಈ ಬಾರಿಯ ಮೈಸೂರು ದಸರಾ ಉದ್ಘಾಟನೆ : ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು : "ಈ…

1 hour ago

ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ : ಸಿಎಂ  – vishwanews24

ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ : ಸಿಎಂ  ಬೆಂಗಳೂರು: "ಬರಗಾಲದ ಪರಿಸ್ಥಿತಿಯಲ್ಲಿ…

1 hour ago

ಉಡುಪಿ: ಪೆಟ್ರೋಲ್ ಪಂಪ್ ಬಳಿ ನಿಂತಿದ್ದ ಬಸ್ಸಿನಲ್ಲಿ ಬೆಂಕಿ ಅವಘಡ ; ತಪ್ಪಿದ ಭಾರೀ ಅನಾಹುತ – vishwanews24

ಉಡುಪಿ: ಪೆಟ್ರೋಲ್ ಪಂಪ್ ಬಳಿ ನಿಂತಿದ್ದ ಬಸ್ಸಿನಲ್ಲಿ ಬೆಂಕಿ ಅವಘಡ ; ತಪ್ಪಿದ ಭಾರೀ ಅನಾಹುತ ಉಡುಪಿ: ಉಡುಪಿ ಸಮೀಪದ…

2 hours ago