Featured

ಉಡುಪಿ : ಶ್ರೀಕೃಷ್ಣ ಮಠದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಂದ ದಾಂಧಲೆ ; 8 ಮಂದಿ ಬಂಧನ – vishwanews24

ಉಡುಪಿ : ಶ್ರೀಕೃಷ್ಣ ಮಠದಲ್ಲಿ ದಾಂಧಲೆ ; 8 ಮಂದಿ ಅಯ್ಯಪ್ಪ ಮಾಲಾಧಾರಿಗಳ ಬಂಧನ

ಮಠದ ದಿವಾನ, ಸಿಬ್ಬಂದಿ, ಪೊಲೀಸ್ ಕಾನ್ಸ್‌ಸ್ಟೇಬಲ್‌ಗೆ ಹಲ್ಲೆ

ಉಡುಪಿ : ಉಡುಪಿ ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನಕ್ಕೆ ಬಂದ ಅಯ್ಯಪ್ಪ ಮಾಲಧಾರಿಗಳು ದಾಂಧಲೆ ನಡೆಸಿ, ಮಠದ ಸಿಬ್ಬಂದಿ, ದಿವಾನರಿಗೆ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿರುವ ಘಟನೆ ಡಿ.29ರಂದು ರಾತ್ರಿ ವೇಳೆ ನಡೆದಿದ್ದು, ಈ ಸಂಬಂಧ ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಬಂಧಿತರನ್ನು ಅಯ್ಯಪ್ಪಮಾಲಧಾರಿಗಳಾದ ಹೈದರಬಾದಿನ ಶಿವಕುಮಾರ, ವಿಶಾಲ್, ರಾಜು, ನವೀನ್‌ರಾಜ್, ರವಿಕಿರಣ್, ಭಾನು, ಉಮೆಂದರ್, ರವಿಕಾಂತ್ ಎಂದು ಗುರುತಿಸಲಾಗಿದೆ.

ಶ್ರೀಕೃಷ್ಣಮಠದ ಒಳಗೆ ಹಾಗೂ ಹೊರಗೆ ತೀವ್ರ ಜನಸಂದಣಿಯಿಂದ ನೂಕು ನುಗ್ಗಲು ಉಂಟಾಗಿದ್ದು, ಈ ವೇಳೆ ದೇವರ ದರ್ಶನಕ್ಕೆ ಬಂದಿದ್ದ ಸುಮಾರು 7-8 ಜನ ಅಯ್ಯಪ್ಪ ಮಾಲಾಧಾರಿಗಳು ದಾಂಧಲೆ ನಡೆಸಿದರೆನ್ನಲಾಗಿದೆ. ಅಲ್ಲದೆ ರಥಬೀದಿಯಲ್ಲಿ ನಡೆಯುವ ರಥೋತ್ಸವದ ದೇವರ ಉತ್ಸವ ಮೂರ್ತಿ ಪಲ್ಲಕ್ಕಿಯೊಂದಿಗೆ ಕೃಷ್ಣಮಠದ ಮುಂಭಾಗದಿಂದ ಒಳಭಾಗಕ್ಕೆ ಬರುವ ವೇಳೆ ದಾಂಧಲೆ ನಡೆಸಿದ ಅಯ್ಯಪ್ಪ ಮಾಲಾಧಾರಿಗಳು ಕೃಷ್ಣಮಠದ ಸಿಬ್ಬಂದಿ ಜಗದೀಶ ಎಂಬವರಿಗೆ ಕೈಯಿಂದ ಹಲ್ಲೆ ಮಾಡಿದರು.

ಆತನನ್ನು ಅವರೆಲ್ಲರೂ ಸೇರಿ ಮೇಲೆತ್ತಿಕೊಂಡು ಶ್ರೀಕೃಷ್ಣ ಮಠದ ಗರ್ಭ ಗುಡಿಯ ಒಳಗಡೆ ಬಂದಿದ್ದು, ಆಗ ಮಠದ ದಿವಾನ ನಾಗರಾಜ ಆಚಾರ್ಯ, ಅಯ್ಯಪ್ಪಮಾಲಾಧಾರಿಗಳನ್ನು ತಡೆಯಲು ಪ್ರಯತ್ನಿಸಿದರು. ಆಗ ಅವರೆಲ್ಲ ನಾಗರಾಜ ಆಚಾರ್ಯರ ಮೇಲೂ ಹಲ್ಲೆಗೆ ಮುಂದಾದರೆನ್ನಲಾಗಿದೆ. ಈ ಸಂದರ್ಭ ಕೃಷ್ಣಮಠದಲ್ಲಿ ಭದ್ರತಾ ಕರ್ತವ್ಯ ಹಾಗೂ ಪಿಆರ್‌ಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಉಡುಪಿ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕಾನ್ಸಟೇಬಲ್ ರವೀಂದ್ರ ಗಲಾಟೆ ಮಾಡದಂತೆ ಅಯ್ಯಪ್ಪ ಮಾಲಧಾರಿಗಳನ್ನು ಸಮಾಧಾನ ಮಾಡಿ ತಡೆಯಲು ಹೋದರು.

ಈ ವೇಳೆ ಅಯ್ಯಪ್ಪ ಮಾಲಧಾರಿಗಳು ಪೊಲೀಸ್ ಸಿಬ್ಬಂದಿಗೆ ಕೈಯಿಂದ ಮುಖಕ್ಕೆ, ಮೈಕೈಗೆ, ಕೆನ್ನೆಗೆ ಹಲ್ಲೆ ಮಾಡಿದರು. ಇದರಿಂದ ಅವರಿಗೆ ಗಾಯ ಉಂಟಾಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕಾನ್ಸಟೇಬಲ್ ರವೀಂದ್ರ ನೀಡಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅದರಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

19 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

22 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

22 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

22 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

22 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

23 hours ago