ಉಡುಪಿ: ಪಾಂಚಜನ್ಯ ಊದಲು ಪ್ರಧಾನಿ ಮೋದಿಬರ್ತಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೇಳಿದರು.
ಉಡುಪಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಉತ್ಸಾಹದ ಸಿದ್ಧತೆ ನಡೆದಿದೆ. 9:30ಕ್ಕೆ ರೋಡ್ ಶೋ ಜಾಗದಲ್ಲಿ ಜನ ಜಮಾಯಿಸಲಿದ್ದಾರೆ. ರಾಮಮಂದಿರದಲ್ಲಿ ರಾಮಧ್ವಜವನ್ನು ಮೋದಿ ಹಾರಿಸಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ಮೋದಿ ಪಾಂಚಜನ್ಯ ಊದಲಿದ್ದಾರೆ. ಭಗವದ್ಗೀತೆ ಸಮಾವೇಶ ದೇಶದಲ್ಲಿ ಸಾಂಸ್ಕೃತಿಕ, ಧಾರ್ಮಿಕ ವಾತಾವರಣ ನಿರ್ಮಾಣ ಮಾಡಲಿದೆ. ರಾಜ್ಯಪಾಲರಾದ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದರು ಮತ್ತು ಶಾಸಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಎನ್‌ಡಿಎ ಒಕ್ಕೂಟದಲ್ಲೂ ಕೂಡ ಈ ಬಗ್ಗೆ ಮಾತುಕತೆ ಮಾಡುತ್ತೇವೆ. ರಾಜ್ಯದ ಹಿತ ಮರೆತಿರುವ ಸರ್ಕಾರವನ್ನು ಬಯಲಿಗೆಳೆಯುತ್ತೇವೆ. ಜಾತಿ, ಸಮಾಜವನ್ನು ಕಾಂಗ್ರೆಸ್ ಒಡೆದಿದೆ. ಕುರ್ಚಿಯನ್ನು ಉಳಿಸಿಕೊಳ್ಳಲು ಸ್ವಾಮೀಜಿಗಳ ಬಾಯಲ್ಲಿ ಹೇಳಿಕೆ ಕೊಡಿಸುತ್ತಿದ್ದಾರೆ. ಗೊಂದಲದ ವಾತಾವರಣವನ್ನು ಸಿಎಂ, ಡಿಸಿಎಂ ಸೃಷ್ಟಿ ಮಾಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ, ದಲಿತ ನಾಯಕ ಖರ್ಗೆಯನ್ನು ಕಡೆಗಣಿಸಲಾಗಿದೆ. ಸ್ವತಃ ರಾಷ್ಟ್ರೀಯ ಅಧ್ಯಕ್ಷರೇ ಹೈಕಮಾಂಡ್ ಎನ್ನುತ್ತಾರೆ. ಬಿಜೆಪಿ ಯಾವುದೇ ಕಾರಣಕ್ಕೂ ಸರ್ಕಾರ ರಚನೆ ಮಾಡಲು ಮುಂದಾಗಲ್ಲ. ಕಾಂಗ್ರೆಸ್ ತನ್ನ ಭಾರದಿಂದಲೇ ಕುಸಿದು ಬೀಳಲೆಂದು ಕಾದು ನೋಡುತ್ತಿದ್ದೇವೆ. ಡಿಸಿಎಂ ಜೊತೆ 140 ಜನ ಎಲ್ಲಿದ್ದಾರೆ? ರಾಹುಲ್ ಗಾಂಧಿ, ಸಿಎಂ ಅವರ ಜೊತೆಯಲ್ಲಿ ಇಲ್ಲ. ಲಾಬಿ, ರಂಪಾಟ, ಡೆಲ್ಲಿ ಟೂರ್‌ಗೆ ಏನು ಕಾರಣ ಎಂದು ಪ್ರಶ್ನಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…