Featured

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಮೋದಿ ಪಾಂಚಜನ್ಯ ಊದಲಿದ್ದಾರೆ : ಸುನಿಲ್ ಕುಮಾರ್  – vishwanews24

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಮೋದಿ ಪಾಂಚಜನ್ಯ ಊದಲಿದ್ದಾರೆ : ಸುನಿಲ್ ಕುಮಾರ್

ಉಡುಪಿ: ಪಾಂಚಜನ್ಯ ಊದಲು ಪ್ರಧಾನಿ ಮೋದಿಬರ್ತಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್  ಹೇಳಿದರು.

ಉಡುಪಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಉತ್ಸಾಹದ ಸಿದ್ಧತೆ ನಡೆದಿದೆ. 9:30ಕ್ಕೆ ರೋಡ್ ಶೋ ಜಾಗದಲ್ಲಿ ಜನ ಜಮಾಯಿಸಲಿದ್ದಾರೆ. ರಾಮಮಂದಿರದಲ್ಲಿ ರಾಮಧ್ವಜವನ್ನು ಮೋದಿ ಹಾರಿಸಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ಮೋದಿ ಪಾಂಚಜನ್ಯ ಊದಲಿದ್ದಾರೆ. ಭಗವದ್ಗೀತೆ ಸಮಾವೇಶ ದೇಶದಲ್ಲಿ ಸಾಂಸ್ಕೃತಿಕ, ಧಾರ್ಮಿಕ ವಾತಾವರಣ ನಿರ್ಮಾಣ ಮಾಡಲಿದೆ. ರಾಜ್ಯಪಾಲರಾದ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದರು ಮತ್ತು ಶಾಸಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಎನ್‌ಡಿಎ ಒಕ್ಕೂಟದಲ್ಲೂ ಕೂಡ ಈ ಬಗ್ಗೆ ಮಾತುಕತೆ ಮಾಡುತ್ತೇವೆ. ರಾಜ್ಯದ ಹಿತ ಮರೆತಿರುವ ಸರ್ಕಾರವನ್ನು ಬಯಲಿಗೆಳೆಯುತ್ತೇವೆ. ಜಾತಿ, ಸಮಾಜವನ್ನು ಕಾಂಗ್ರೆಸ್ ಒಡೆದಿದೆ. ಕುರ್ಚಿಯನ್ನು ಉಳಿಸಿಕೊಳ್ಳಲು ಸ್ವಾಮೀಜಿಗಳ ಬಾಯಲ್ಲಿ ಹೇಳಿಕೆ ಕೊಡಿಸುತ್ತಿದ್ದಾರೆ. ಗೊಂದಲದ ವಾತಾವರಣವನ್ನು ಸಿಎಂ, ಡಿಸಿಎಂ ಸೃಷ್ಟಿ ಮಾಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ, ದಲಿತ ನಾಯಕ ಖರ್ಗೆಯನ್ನು ಕಡೆಗಣಿಸಲಾಗಿದೆ. ಸ್ವತಃ ರಾಷ್ಟ್ರೀಯ ಅಧ್ಯಕ್ಷರೇ ಹೈಕಮಾಂಡ್ ಎನ್ನುತ್ತಾರೆ. ಬಿಜೆಪಿ ಯಾವುದೇ ಕಾರಣಕ್ಕೂ ಸರ್ಕಾರ ರಚನೆ ಮಾಡಲು ಮುಂದಾಗಲ್ಲ. ಕಾಂಗ್ರೆಸ್ ತನ್ನ ಭಾರದಿಂದಲೇ ಕುಸಿದು ಬೀಳಲೆಂದು ಕಾದು ನೋಡುತ್ತಿದ್ದೇವೆ. ಡಿಸಿಎಂ ಜೊತೆ 140 ಜನ ಎಲ್ಲಿದ್ದಾರೆ? ರಾಹುಲ್ ಗಾಂಧಿ, ಸಿಎಂ ಅವರ ಜೊತೆಯಲ್ಲಿ ಇಲ್ಲ. ಲಾಬಿ, ರಂಪಾಟ, ಡೆಲ್ಲಿ ಟೂರ್‌ಗೆ ಏನು ಕಾರಣ ಎಂದು ಪ್ರಶ್ನಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

1 hour ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

2 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

2 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

5 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago