Featured

ಉಡುಪಿ ಶ್ರೀಕೃಷ್ಣ ಮಠದ ಕನಕ ಕಿಂಡಿಗೆ ನಾನು ಸೇವೆ ರೂಪದಲ್ಲಿ ಸ್ವರ್ಣ ಕವಚವನ್ನು ಸಮರ್ಪಿಸಿದ್ದೇನೆ : ಪ್ರಮೋದ್ ಮಧ್ವರಾಜ್ – vishwanews24

ನನ್ನ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು ಅತ್ಯಂತ ಖುಷಿ ಕೊಟ್ಟಿದೆ..

ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ತಪ್ಪಿಸಿದ್ದು ಯಾರೆಂಬುದು ಗೊತ್ತಿಲ್ಲ : ಪ್ರಮೋದ್ ಮಧ್ವರಾಜ್

ಹಾಲು ಸಕ್ಕರೆ ಬೆರೆತಂತೆ ಬಿಜೆಪಿ ಮತ್ತು ಪ್ರಮೋದ್‌ ಮಧ್ವರಾಜ್ ಬೆರೆತಿದ್ದೇವೆ : ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಕನಕ ಕಿಂಡಿಗೆ ನಾನು ಸೇವೆ ರೂಪದಲ್ಲಿ ಸ್ವರ್ಣ ಕವಚವನ್ನು ಸಮರ್ಪಿಸಿದ್ದೇನೆ. ಇದನ್ನು ಪ್ರಧಾನಿ ಲೋಕಾರ್ಪಣೆ ಮಾಡುವ ಸಂದರ್ಭದಲ್ಲಿ ದೂರುದಲ್ಲಿ ನಿಂತು ನೋಡುವ ಆಸೆ ನನಗೆ ಇತ್ತು. ಕಾರಣಾಂತರಗಳಿಂದ ಅದು ತಪ್ಪಿ ಹೋಗಿದೆ. ಅದರ ಬಗ್ಗೆ ಕಿಂಚಿತ್ತೂ ಬೇಸರವಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಹೇಳಿದರು.

ಕನಕನ ಕಿಂಡಿಗೆ ಸ್ವರ್ಣ ಕವಚವನ್ನು ಸೇವೆಯ ರೂಪದಲ್ಲಿ ನೀಡಿದ ಪ್ರಮೋದ್‌ ಮಧ್ವರಾಜ್ ಅವರನ್ನು ಕಾರ್ಯಕ್ರಮದಲ್ಲಿ ಕಡೆಗಣಿಸಿದ್ದಕ್ಕೆ ವ್ಯಾಪಕ ವಿರೋಧಗಳು ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ಕಾರ್ಯಕ್ರಮದಲ್ಲಿ ನಾನು ಭಾಗವಹಿಸುವುದನ್ನು ಯಾರು ತಪ್ಪಿಸಿದ್ದರೆ ಅಂತಾ ನನಗೆ ಗೊತ್ತಿಲ್ಲ. ಯಾರಾದರೂ ತಪ್ಪಿಸಿದ್ದರೆ ಅದು ಅವರ ರಾಜಕೀಯ ತಪ್ಪು ಹೆಜ್ಜೆ ಎಂದು ಟಾಂಗ್ ನೀಡಿದರು.

ಶ್ರೀ ಪುತ್ತಿಗೆ ಮಠವಾಗಲಿ ಅಥವಾ ಜಿಲ್ಲಾ ಬಿಜೆಪಿ ಆಗಲಿ ನನಗೆ ಕಾರ್ಯಕ್ರಮದಲ್ಲಿ ಪ್ರವೇಶ ನಿರಾಕರಿಸಿದ್ದಕ್ಕೆ ಕಾರಣಕರ್ತರಲ್ಲ. ಯಾರ ಮೇಲೂ ನಾನು ಗೂಬೆ ಕೂರಿಸುವ ಪ್ರಯತ್ನ ಮಾಡುವುದಿಲ್ಲ. ಯಾರನ್ನೂ ಟೀಕೆ ಮಾಡುವುದಿಲ್ಲ. ನನ್ನ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು ಅತ್ಯಂತ ಖುಷಿ ಕೊಟ್ಟಿದೆ. ನನ್ನನ್ನು ಕಡೆಗಣಿಸಿದ್ದಕ್ಕೆ ಯಾರು ಕಾರಣ ಎಂಬುದೂ ನನಗೆ ಗೊತ್ತಿಲ್ಲ ಎಂದರು.

ಇದೇ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಠದವರು ಮತ್ತು ನಾವು ಕಳಿಸಿದ ಪಟ್ಟಿಯಲ್ಲಿ ಪ್ರಮೋದ್ ಮಧ್ವರಾಜ್ ಅವರ ಹೆಸರು ಇತ್ತು. ಆದರೆ ಪ್ರಧಾನಿ ಕಛೇರಿಯಿಂದ ಪಟ್ಟಿಯನ್ನು ಪರಿಷ್ಕೃತಗೊಳಿಸಿ ಕಳಿಸುವಾಗ ಪ್ರಮೋದ್ ಮಧ್ವರಾಜ್ ಅವರ ಹೆಸರು ಇರಲಿಲ್ಲ. ಜೊತೆಗೆ ಹಲವರ ಹೆಸರು ಇರಲಿಲ್ಲ.ಇದಕ್ಕೆ ಜಿಲ್ಲಾ ಬಿಜೆಪಿ ಯಾವುದೇ ರೀತಿಯಲ್ಲೂ ಕಾರಣ ಅಲ್ಲ. ಅದನ್ನು ಪ್ರಮೋದ್ ಮಧ್ವರಾಜ್ ಅವರೇ ಸ್ಪಷ್ಟಪಡಿಸಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಹಾಲು ಸಕ್ಕರೆ ಬೆರೆತಂತೆ ಬಿಜೆಪಿ ಮತ್ತು ಪ್ರಮೋದ್‌ ಮಧ್ವರಾಜ್ ಬೆರೆತಿದ್ದೇವೆ. ಒಟ್ಟಾರೆ ರೋಡ್ ಶೋ ಮತ್ತು ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ್ ಶೆಟ್ಟಿ, ಶ್ರೀಕಾಂತ್ ನಾಯಕ್, ದಿವಾಕರ ಶೆಟ್ಟಿ, ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago