Featured

ಉಡುಪಿ : ಶ್ರೀ ಕೃಷ್ಣನ ನಗರಿಯಲ್ಲಿ ಕೊರೋನಾ ಸ್ಫೋಟ : ಒಂದೇ ದಿನದಲ್ಲಿ 170 ಪ್ರಕರಣ -Vishwanews24

ಉಡುಪಿ : ಶ್ರೀ ಕೃಷ್ಣನ ನಗರಿಯಲ್ಲಿ ಕೊರೋನಾ ಸ್ಫೋಟ : ಒಂದೇ ದಿನದಲ್ಲಿ 170 ಪ್ರಕರಣ -Vishwanews24

ಮಣಿಪಾಲ ವಿವಿ ಕ್ಯಾಂಪಸ್ ಕೊರೊನಾ ಹಾಟ್‍ಸ್ಪಾಟ್..

ಉಡುಪಿ : ಜಿಲ್ಲೆಯಲ್ಲಿ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಂದೇ ದಿನದಲ್ಲಿ 170 ಪ್ರಕರಣಗಳು ಪಾಸಿಟಿವ್ ಎಂದು ದ್ರಢಪಟ್ಟಿದೆ.

ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಇದುವರೆಗೆ 3,95,042 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಭಾನುವಾರ 170 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 24,215 ಕ್ಕೆ ತಲುಪಿದೆ. ಈ ಪೈಕಿ 358 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.

ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚಾಗ್ತಾನೇ ಸಾಗ್ತಿದೆ. ಮಣಿಪಾಲ ವಿವಿ ಕ್ಯಾಂಪಸ್ ಕೊರೊನಾ ಹಾಟ್‍ಸ್ಪಾಟ್ ಆಗಿ ಪರಿಣಮಿಸಿದೆ.

ಇದನ್ನೂ ಓದಿ : ಆಗುಂಬೆ ಘಾಟಿಯಲ್ಲಿ ತ್ಯಾಜ್ಯ ಸಂಗ್ರಹಿಸಿ ಮಾದರಿಯಾದ ಅಧಿಕಾರಿಗಳು -Vishwanews24

ಶ್ರೀ ಕೃಷ್ಣನ ನಗರಿ ಉಡುಪಿಯಲ್ಲಿ ಕೊರೊನಾ ಮಹಾಮಾರಿ ತಾಂಡವವಾಡುತ್ತಿದ್ದು, ಪಾಸಿಟಿವ್ ಕೇಸ್‍ಗಳ ಸಂಖ್ಯೆ ಮೂರಂಕಿಯತ್ತ ಮುನ್ನುಗ್ಗುತ್ತಿದೆ.. ಅದರಲ್ಲೂ ಮಣಿಪಾಲ ವಿವಿಯ ಎಂಐಟಿ ಎಂಜಿನಿಯರಿಂಗ್ ಕ್ಯಾಂಪಸ್‍ನಲ್ಲಿ ಕೇರಳ, ಮಹಾರಾಷ್ಟ್ರದ ಹೆಮ್ಮಾರಿ ಸ್ಫೋಟಗೊಂಡಿದೆ.

ಸದ್ಯ ವಿವಿ ಕ್ಯಾಂಪಸನ್ನ ಜಿಲ್ಲಾಡಳಿತದ ಸೂಚನೆಯಂತೆ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಐಡಿ ಕಾರ್ಡ್ ಇದ್ದವರಿಗೆ ಮಾತ್ರ ಕ್ಯಾಂಪಸ್‍ಗೆ ಎಂಟ್ರಿ ಕೊಡಲಾಗ್ತಿದೆ. 5 ಸಾವಿರ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ದಿನಕ್ಕೆ ಒಂದೂವರೆ ಸಾವಿರದಂತೆ ಒಂದು ವಾರಗಳ ಕಾಲ ಕ್ಯಾಂಪಸ್‍ನಲ್ಲಿ ಕೊರೊನಾ ಟೆಸ್ಟ್ ಗೆ ಮುಂದಾಗಿದೆ. ಆದರೆ ವಿದ್ಯಾರ್ಥಿಗಳು ಟೆಸ್ಟ್ ಮಾಡಿಸಿಕೊಳ್ಳಲು ಹಿಂದೇಟು ಹಾಕ್ತಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಲಾಕ್‍ಡೌನ್ ಅಥವಾ ಸೆಮಿ ಲಾಕ್‍ಡೌನ್ ಇಲ್ಲ : ಕೆ. ಸುಧಾಕರ್ -Vishwanews2

ಮತ್ತೊಂದ್ಕಡೆ ಹೊರ ರಾಜ್ಯದಿಂದ ಬರುವವರು, ಸಾರ್ವಜನಿಕ ಸ್ಥಳ, ಸಮಾರಂಭಗಳ ಮೇಲೆ ಜಿಲ್ಲಾಡಳಿತ ಕಣ್ಣಿಟ್ಟಿದೆ. ಮಾಸ್ಕ್ ಸಾಮಾಜಿಕ ಅಂತರ ಸ್ಯಾನಿಟೈಸ್ ಕಡ್ಡಾಯಗೊಳಿಸಲಾಗಿದೆ. ಉಡುಪಿಯಲ್ಲಿ ಕೊರೊನಾ ಎರಡನೇ ಅಲೆ ಮರುಕಳಿಸಲು ಅವಕಾಶ ಕೊಡಬೇಡಿ ಅಂತ ಡಿಹೆಚ್‍ಓ ಡಾ.ಸುಧೀರ್ ಚಂದ್ರಚೂಡ ಮನವಿ ಮಾಡಿಕೊಂಡಿದ್ದಾರೆ.

ಆಸ್ಪತ್ರೆಗಳಿಂದ ಭಾನುವಾರ ಒಟ್ಟು 24 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಚೇತರಿಕೆ ಸಂಖ್ಯೆ 23,667 ಕ್ಕೆ ತಲುಪಿದೆ. ಕೊರೊನಾ ವೈರಸ್‌ನಿಂದ ಜಿಲ್ಲೆಯಲ್ಲಿ ಇದುವರೆಗೆ 190 ಸಾವುಗಳು ಸಂಭವಿಸಿವೆ.

ಇದನ್ನೂ ಓದಿ : 60 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರು ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಬಿಎಸ್ ವೈ ಮನವಿ- Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

3 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

3 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

3 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

3 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

3 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

4 hours ago