Featured

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ – vishwanews24

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ

ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು ಮಠ, ಉಡುಪಿ ಆಶ್ರಯದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯದ ನೇತೃತ್ವದಲ್ಲಿ, ಲಯನ್ಸ್ ಕ್ಲಬ್ ಮುನಿಯಾಲು ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸ್ಪರ್ಧೆ-2026 ಕಲರ್ಸ್ ಆಫ್ ಶ್ರೀ ಕೃಷ್ಣ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಪ್ರಥಮ 10,000/-​,​ ದ್ವಿತೀಯ 5,000/- ​ಹಾಗು ತೃತೀಯ 3,000/-​ ನಗದು ಬಹುಮಾನ ಮತ್ತು 5 ಸಮಾಧಾನಕರ ಬಹುಮಾನಗಳು, ಅಭಿನಂದನಾ ಪತ್ರ, ಸ್ಮರಣಿಕೆ​ ಗಳನ್ನೊಳಗೊಂಡಿದೆ.

ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ಪ್ರಚಾರದ ಬಿತ್ತಿ ಚಿತ್ರವನ್ನು ಪರ್ಯಾಯ ಶೀರೂರು ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಬುಧವಾರದಂದು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಎಸ್ ಕೆಪಿಎ ಉಡುಪಿ ವಲಯದ ಅಧ್ಯಕ್ಷ ದಿವಾಕರ್ ಹಿರಿಯಡ್ಕ, ಮಾಜಿ ಅಧ್ಯಕ್ಷ ಜನಾರ್ದನ್ ಕೊಡವೂರು, ಸದಸ್ಯರಾದ ರತನ್ ಶೆಟ್ಟಿ, ಶ್ರೀಶ ಬಲ್ಲಾಳ್ ಹಾಗು ಶ್ರೀಮಠದ ಛಾಯಾಗ್ರಾಹಕ ಕೃತಿಕ್ ಭಟ್ ಉಪಸ್ಥಿತರಿದ್ದರು.

ಸ್ಪರ್ಧೆಯ ನಿಯಮಗಳು

ಪ್ರತಿ ಸ್ಪರ್ಧಿಯು ಗರಿಷ್ಠ ನಾಲ್ಕು ಛಾಯಾಚಿತ್ರಗಳನ್ನು ಕಳುಹಿಸಬಹುದು. ಒಂದು ಛಾಯಾಚಿತ್ರದ ಗಾತ್ರ ಗರಿಷ್ಠ 4MBಗಿಂತ ಹೆಚ್ಚು ಮೀರಬಾರದು. – ಮೊಬೈಲ್ನಲ್ಲಿ ತೆಗೆದ ಛಾಯಾಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.

ಪೋಟೋಶಾಪ್ನಲ್ಲಿ ತಿರುಚಲಾದ ಮತ್ತು ವಾಟರ್ ಮಾರ್ಕ್ ಇದ್ದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ. – ಒಂದು ಬಾರಿ ನೋಂದಣಿಯಾದ ಛಾಯಾಚಿತ್ರಗಳನ್ನು ಬದಲಾಯಿಸಲು ಅವಕಾಶವಿರುವುದಿಲ್ಲ.

– ಸ್ಪರ್ಧೆಯಲ್ಲಿ ಭಾಗವಹಿಸಲು ಎಲ್ಲರಿಗೂ ಮುಕ್ತ ಅವಕಾಶ. – ಛಾಯಾಚಿತ್ರವನ್ನು ಇಮೇಲ್ ಮೂಲಕ ಕಳುಹಿಸುವಾಗ ತಮ್ಮ ಭಾವಚಿತ್ರ, ಹೆಸರು, ವಿಳಾಸ, ದೂರವಾಣಿ ಹಾಗೂ ನೋಂದಣಿ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸತಕ್ಕದ್ದು.

ತೀರ್ಪುಗಾರರ ತೀರ್ಮಾನವೇ ಅಂತಿಮ. ಉಡುಪಿ ಶ್ರೀ ಕೃಷ್ಣ ಮಠದ ಪರಿಸರದಲ್ಲಿ ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿ (04-0​9-2026) ಹಾಗೂ ರಥಬೀದಿಯಲ್ಲಿ ನಡೆಯುವ ವಿಟ್ಲಪಿಂಡಿ ಮಹೋತ್ಸವದ (05-0​9-2026) ಛಾಯಾಚಿತ್ರಗಳಿಗೆ ಮಾತ್ರ ಅವಕಾಶ.

ಛಾಯಾಚಿತ್ರವನ್ನು ಕಳುಹಿಸಲು ಕೊನೆಯ ದಿನಾಂಕ 15-09-2026. – ಫಲಿತಾಂಶವನ್ನು ದಿನಾಂಕ 25-09-2026 ರಂದು ಪ್ರಕಟಿಸಲಾಗುವುದು.

ಛಾಯಾಚಿತ್ರಗಳನ್ನು ಕಳುಹಿಸಬೇಕಾದ ವಿಳಾಸ: rameshyelluru@gmail.com, ನೋಂದಾಯಿಸಲು ಕೊನೆಯ ದಿನಾಂಕ 01-09-2026 ನೋಂದಾಯಿಸಿದ ಎಲ್ಲಾ ಛಾಯಾಗ್ರಾಹಕರಿಗೆ ಒಂದು ಟಿ-ಶರ್ಟ್ ಉಚಿತ. ಟಿ-ಶರ್ಟ್ ಧರಿಸಿ ಛಾಯಾಗ್ರಹಣವನ್ನು ಮಾಡತಕ್ಕದ್ದು. ಛಾಯಾಚಿತ್ರವನ್ನು ಯಾವುದೇ ಪೂರ್ವಾನುಮತಿ ಇಲ್ಲದೆ ಬಳಸುವ ಹಕ್ಕನ್ನು ಪಡೆದಿರುತ್ತೇವೆ.

Vishwa News 24

Recent Posts

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

1 minute ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

5 minutes ago

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ – vishwanews24

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…

31 minutes ago

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ – vishwanews24

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…

41 minutes ago

ನಮ್ಮ ಧರ್ಮದ ಬಗ್ಗೆ ನಾವೇ ತೀರ್ಮಾನಿಸುತ್ತೇವೆ : ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿಗೆ ಓವೈಸಿ ಆಕ್ರೋಶ – vishwanews24

ಅಲಹಾಬಾದ್ ಹೈಕೋರ್ಟ್ ತೀರ್ಪು ಇಸ್ಲಾಂ ಧರ್ಮದ ಮೇಲಿನ ದಾಳಿ ನಮ್ಮ ಧರ್ಮ, ನಾವೇ ನಿರ್ಧರಿಸುತ್ತೇವೆ : ಓವೈಸಿ ಆಕ್ರೋಶ ಹೈದರಾಬಾದ್:…

53 minutes ago

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ : ಆದಿ ಸುಬ್ರಹ್ಮಣ್ಯ ಕ್ಷೇತ್ರದ ಮೆಟ್ಟಿಲಿನವರೆಗೂ ನೀರು – vishwanews24

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ : ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲಿನವರೆಗೂ ನುಗ್ಗಿದ ನೀರು ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ…

1 hour ago