Featured

ಉಡುಪಿ : ಶ್ರೀ ಕೃಷ್ಣ ಮಠದ ಕನಕನ ಕಿಂಡಿಗೆ ಸ್ವರ್ಣ ಕವಚ – vishwanews24

ಉಡುಪಿ : ಶ್ರೀ ಕೃಷ್ಣ ಮಠದ ಕನಕನ ಕಿಂಡಿಗೆ ಸ್ವರ್ಣ ಕವಚ

ಉಡುಪಿ: ಶ್ರೀ ಕೃಷ್ಣ ಮಠದ ಕನಕನ ಕಿಂಡಿಗೆ ಸ್ವರ್ಣ ಕವಚ ಅಳವಡಿಕೆ ಮಾಡಲಾಗುತ್ತಿದೆ. ಈ ಚಿನ್ನದ ಕವಚದ ಕನಕನ ಕಿಂಡಿಯಿಂದ ಶ್ರೀ ಕೃಷ್ಣನನ್ನು ನೋಡೋದು ಒಂದು ಭಾಗ್ಯ ಅಂತಾನೆ ಹೇಳಬಹುದು.

ಕನಕನ ಕಿಂಡಿಯಿಂದ ಶ್ರೀ ಕೃಷ್ಣನನ್ನು ನೋಡೋದು ಒಂದು ಭಾಗ್ಯ ಅಂತಾನೆ ಹೇಳಬಹುದು, ಅದರಲ್ಲೂ ಚಿನ್ನದ ಹೊದಿಕೆಯಿರುವ ಕನಕ ಕಿಂಡಿಯಿಂದ ಶ್ರೀ ಕೃಷ್ಣನನ್ನು ನೋಡೋದು ಸೌಭಾಗ್ಯವೇ ಸರಿ. ಮಾಜಿ ಸಚಿವ ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಸೇವಾ ರೂಪದಲ್ಲಿ ಬಂಗಾರದ ಕವಚವನ್ನು ದೇವಳಕ್ಕೆ ನೀಡುತ್ತಿದ್ದು, ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಶ್ರೀ ಕೃಷ್ಣನ ಸನ್ನಿಧಾನಕ್ಕೆ ಆಗಮಿಸಿ ಶ್ರೀಕೃಷ್ಣನಿಗೆ ಸಮರ್ಪಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರದಲ್ಲಿ ಸ್ವರ್ಣ ಕವಚವನ್ನು ನಿರ್ಮಾಣ ಮಾಡಲಾಗಿದ್ದು, ನೂತನವಾಗಿ ನಿರ್ಮಾಣ ಮಾಡಿದಂತ ಸ್ವರ್ಣ ಕವಚವನ್ನು ಪ್ರಮೋದ್ ಮಧ್ವರಾಜ್ ಅವರು ತಮ್ಮ ಮನೆಗೆ ಮೊದಲು ಬರಮಾಡಿಕೊಂಡು, ತಮ್ಮ ಮನೆಯಲ್ಲಿರುವ ಗೋ ಶಾಲೆಯಲ್ಲಿ ಸ್ವರ್ಣ ಕವಚಕ್ಕೆ ವಿಶೇಷ ಪೂಜೆ ನೆರವೇರಿಸಿ ಆ ಬಳಿಕ ಶ್ರೀ ಕೃಷ್ಣನಿಗೆ ಸಮರ್ಪಿಸಿದರು.

ಕನಕನ ಕಿಂಡಿಗೆ ಬಂಗಾರದ ಕವಚವನ್ನು ಅಳವಡಿಕೆ ಮಾಡಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಅದನ್ನು ಉದ್ಘಾಟನೆ ಮಾಡಲಿದ್ದಾರೆ. ಇನ್ನು ಮುಂದೆ ಭಕ್ತರಿಗೆ ಶ್ರೀ ಕೃಷ್ಣನನ್ನು ಬಂಗಾರದ ಕವಚದ ಮೂಲಕ ದರ್ಶನ ಮಾಡುವ ಅವಕಾಶವಿದೆ. ಇದು ನನ್ನ ತಂದೆಯವರ ಆಸೆಯೂ ಆಗಿತ್ತು ಎಂದು ಸಂತಸದ ನುಡಿಗಳನ್ನಾಡಿದ್ದಾರೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

18 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

20 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

20 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

21 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

21 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

21 hours ago