ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ನಾಡಹಬ್ಬದಂತೆ ಆಚರಣೆ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವವನ್ನು ನಾಡಹಬ್ಬದಂತೆ ಆಚರಿಸಲು ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಹಕಾರ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಅವರು ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಉಡುಪಿ ಪರ್ಯಾಯ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದರು.
ಜ.17-18 ರಂದು ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವು ನಡೆಯಲಿದ್ದು, ಪರ್ಯಾಯ ಮಹೋತ್ಸವಕ್ಕೆ ಸುಮಾರು 3 ಲಕ್ಷ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದ್ದು, ನೈರ್ಮಲ್ಯ ಮತ್ತು ಘನ ತ್ಯಾಜ್ಯ ವಸ್ತು ವಿಲೇವಾರಿಯ ಉಸ್ತುವಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅವರು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ರಥಬೀದಿಯ ಅಕ್ಕಪಕ್ಕದ ಪ್ರದೇಶಗಳಲ್ಲಿಯೂ ಸ್ವಚ್ಛತೆ ಕಾಪಾಡಬೇಕು. ಕೆ.ಎಸ್.ಅರ್.ಟಿ.ಸಿ ಬಸ್ ನಿಲ್ದಾಣ, ಸರ್ವಿಸ್ ಮತ್ತು ಸಿಟಿ ಬಸ್ ನಿಲ್ದಾಣ, ಶ್ರೀ ಕೃಷ್ಣ ಮಠದ ವಾಹನಗಳ ನಿಲುಗಡೆ ಪ್ರದೇಶದಲ್ಲಿ ಸಾರ್ವಜನಿಕ ಶೌಚಾಲಯಗಳಿದ್ದು, ಸಾರ್ವಜನಿಕರ ಓಡಾಟ ಇರುವ ಇನ್ನು ಕೆಲವು ಸ್ಥಳಗಳಲ್ಲಿ ತಾತ್ಕಾಲಿಕವಾದ ಶೌಚಾಲಯಗಳನ್ನು ನಿರ್ಮಿಸಬೇಕು. ಬೀದಿದೀಪಗಳ ಸರಿಪಡಿಸುವಿಕೆ, ರಸ್ತೆ ದುರಸ್ತಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹಲೋತ್, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ನಗರಸಭೆ ಆಯುಕ್ತ ಆನಂದ್ ಕಲ್ಲೋಲ್ಕರ್, ಎಂ.ಬಿ ಪುರಾಣಿಕ್ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago