ಉಡುಪಿ: ಜಿಲ್ಲೆಯ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಸಚಿವೆ ಅವರು ಕಾಪುವಿನ ಕಾಪು ಹೊಸ ಮಾರಿಗುಡಿ,ಉಡುಪಿಯ ಶ್ರೀಕೃಷ್ಣಮಠ ಹಾಗೂ ಉಚ್ಚಿಲದ ಮಹಾಲಕ್ಷ್ಮೀ ದೇವಸ್ಥಾನಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆದರು. ಈ ವೇಳೆ ವಿವಿಧ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾಗಿ ದೇವಾಲಯಗಳ ಪರಂಪರೆ ಮತ್ತು ಧಾರ್ಮಿಕ ಆಚರಣೆಗಳ ಬಗ್ಗೆ ಮಾಹಿತಿ ಪಡೆದರು.
ದೇವಾಲಯ ಆಡಳಿತ ಮಂಡಳಿ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಸಚಿವೆಯನ್ನು ಸ್ವಾಗತಿಸಿ ಗೌರವಿಸಿದರು. ದೇವಾಲಯಗಳ ಭೇಟಿ ಸಂದರ್ಭದಲ್ಲಿ ಸ್ಥಳೀಯರೊಂದಿಗೆ ಕೆಲಕಾಲ ಮಾತುಕತೆ ನಡೆಸಿದ ಸಚಿವೆ, ಜಿಲ್ಲೆಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಉಡುಪಿ ಜಿಲ್ಲೆಯಲ್ಲಿ ನಡೆಯಲಿರುವ ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗದಲ್ಲಿ ಭಾಗವಹಿಸುವ ಮುನ್ನ ನಿರ್ಮಲಾ ಸೀತಾರಾಮನ್ ಅವರು ದೇವರ ಆಶೀರ್ವಾದ ಪಡೆದಿದ್ದು, ಅವರ ಈ ಧಾರ್ಮಿಕ ಪುವಾಸ ಸಾರ್ವಜನಿಕರ ಗಮನ ಸೆಳೆಯಿತು. ಕಾಪು, ಉಡುಪಿ ಹಾಗೂ ಉಚ್ಚಿಲ ಭಾಗಗಳಲ್ಲಿ ಸಚಿವೆಯ ಭೇಟಿ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…