ಉಡುಪಿ: ಷೇರು ಮಾರುಕಟ್ಟೆಯ ಹೂಡಿಕೆಯ ಮೂಲಕ ಹೆಚ್ಚಿನ ಹಣ ಗಳಿಸಬಹುದೆಂದು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬಗ್ಗೆ ಇಲ್ಲಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಹಿಳೆಯೊಬ್ಬರಿಗೆ ಟೈಗರ್ ಗ್ಲೋಬಲ್ ಟ್ರೇಡ್ ಎಂಬ ಮೊಬೈಲ್ ಆ್ಯಪ್ ಕಂಪನಿಯು ಟಿಆರ್ ಟ್ರೇಡ್ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭವನ್ನು ಪಡೆಯಬಹುದು ಎಂದು ಅಪರಿಚಿತರಿಂದ ಟೆಲಿಗ್ರಾಮ್ ಮತ್ತು ವಾಟ್ಸಾಪ್‌ನಲ್ಲಿ ಸಂದೇಶಗಳು ಬಂದಿವೆ.
ಇದರೊಂದಿಗೆ ಅಪರಿಚಿತರು 48-72 ಗಂಟೆಗಳ ಒಳಗೆ ಹಣವನ್ನು ಹಿಂಪಡೆಯಬಹುದೆಂಬ ಭರವಸೆ ನೀಡಿದ್ದಾರೆ. ಇದರಲ್ಲಿ ಹಣ ಹೂಡಿಕೆ ಮಾಡಲು ಮಹಿಳೆಯೂ, ವಂಚಕರು ಕಳುಹಿಸಿದ ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್‌ಗಳಿಗೆ ಲಿಂಕ್ ಮೂಲಕ ಹಣ ಕಳುಹಿಸಬೇಕಿತ್ತು. ಇದನ್ನು ನಂಬಿದ ಮಹಿಳೆ ಒಟ್ಟು 51,90,000 ರೂ.ಗಳನ್ನು ನವೆಂಬರ್ 16 ಮತ್ತು ಡಿಸೆಂಬರ್ 13 ರ ನಡುವೆ UPI ಮತ್ತು IMPS ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ.
ಆದರೆ ಆರೋಪಿಗಳು ಹಣ ಮತ್ತು ಲಾಭಾಂಶವನ್ನು ನೀಡದೆ ವಂಚಿಸಿದ್ದಾರೆ. ಘಟನೆಯ ಕುರಿತು ಸೇನ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…