ಉಡುಪಿ: ಉಡುಪಿಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತಿದ್ದು ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆ ಮಾಸ್ಕ್ ಧರಿಸದವರ ವಿರುದ್ದ ಕಟಿಣ ಕ್ರಮ ಕೈಗೊಳ್ಳುತ್ತಿದೆ. ಇಂದು ಉಡುಪಿಯಲ್ಲಿ ಸಂಚಾರ ಪೋಲಿಸರು ಕಾನೂನು ಸುವ್ಯವಸ್ಥೆಯ ಜೊತೆಗೆ ಮಾಸ್ಕ್ ಜಾಗೃತಿ ಮೂಡಿಸಿದರು.
ಟ್ರಾಫಿಕ್ ಎಸ್.ಐ ಅಬ್ದುಲ್ ಖಾದರ್ ನೇತೃತ್ವದಲ್ಲಿ ಉಡುಪಿ ಸಂಚಾರ ಠಾಣಾ ಪೋಲಿಸರು ಉಡುಪಿಯ ಕಲ್ಸಂಕ, ಸರ್ವಿಸ್ ಬಸ್ ನಿಲ್ದಾಣದ ಬಳಿ ಮಾಸ್ಕ್ ಧರಿಸದವರ ವಿರುದ್ದ ದಂಡ ಹಾಕುವುದರ ಜೊತೆಗೆ ಸಾರ್ವಜನಿಕರಿಗೆ ಮಾಸ್ಕ್ ಅನ್ನು ವಿತರಿಸಿ ಜಾಗೃತಿ ಮೂಡಿಸುವ ಪ್ರಯತ್ನವನ್ನು ಮಾಡಿದರು.
ಇದನ್ನೂ ಓದಿ :ಕೋವಿಡ್ 2ನೇ ಅಲೆ : ಹೊಸ ಮಾರ್ಗ ಸೂಚಿ ಪ್ರಕಟ, ಮದುವೆಗೆ 200, ರಾಜಕೀಯ ಕಾರ್ಯಕ್ರಮಕ್ಕೆ– 500 ಮಂದಿಗೆ ಅವಕಾಶ -Vishwanews24
ಈ ಸಂಧರ್ಭದಲ್ಲಿ ಹಲವಾರು ಮಂದಿ ಮಾಸ್ಕ್ ಇದ್ದರೂ ಕೂಡ ಮಾಸ್ಕ್ ಧರಿಸದೇ ವಾಹನ ಚಲಾಯಿಸುವುದು ಕಂಡು ಬಂದಿತು.ಬಸ್‌ಗಳಲ್ಲಿ ಮಾಸ್ಕ್ ಧರಿಸದೇ ಪ್ರಯಾಣ ನಡೆಸಲು ಅವಕಾಶ ನೀಡಿದ ಕಾರಣಕ್ಕಾಗಿ ಬಸ್ ನಿರ್ವಾಹಕನೋರ್ವನಿಗೂ ದಂಡ ವಿದಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಉಡುಪಿ ಸಂಚಾರ ಠಾಣಾ ಎಸ್ ಐ ಅಬ್ದುಲ್ ಖಾದರ್ “ಉಡುಪಿಯಲ್ಲಿ ಕೊರೊನಾ ಪ್ರಕರಣ ಹೆಚ್ಚುತಿದ್ದು ಇತ್ತೀಚಿಗೆ ಜಿಲ್ಲಾಧಿಕಾರಿಗಳು ಕೂಡಾ ನಗರದಲ್ಲಿ ಮಾಸ್ಕ್ ಧರಿಸದವರ ವಿರುದ್ದ ದಂಡ ವಿಧಿಸಿದ್ದರು. ಈಗಾಗಲೆ ಉಡುಪಿಯಲ್ಲಿ 80 ಶೇಕಡಾ ಜನರು ಮಸ್ಕ್ ಧರಿಸುತಿದ್ದಾರೆ. ಮಾಸ್ಕ್ ಧರಿಸದವರಿಗೆ ದಂಡದ ಜೊತೆಗೆ ಅವರಿಗೆ ಮಾಸ್ಕ್ ಅನ್ನು ವಿತರಿಸುವ ಕೆಲಸವನ್ನು ಕೂಡಾ ನಾವು ಮಾಡುತ್ತಿದ್ದೇವೆ” ಎಂದರು.
ಇದನ್ನೂ ಓದಿ :ಉಡುಪಿ : ಮಾ. 27 ರಂದು ಮೆಘಾ ಲೋಕ್ ಅದಾಲತ್ -Vishwanews24
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…